Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಲ್ಲಿಕಾರ್ಜುನ ಖರ್ಗೆ ಹೇಳಿದ ಮೇಲೂ ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಮಾತುಕತೆ..!

---Advertisement---

 

 

ರಾಮನಗರ: ಕಾಂಗ್ರೆಸ್ ನಲ್ಲಿ ಚುನಾವಣೆಗೂ ಮುನ್ನ ಮುಂದಿನ ಸಿಎಂ ಚರ್ಚೆ ನಡೆಯುತ್ತಲೇ ಬರುತ್ತಿದೆ. ಆದ್ರೆ ನಿನ್ನೆಯಷ್ಟೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ವಿಚಾರದ ಬಗ್ಗೆ ಸಲಹೆಯನ್ನು ನೀಡಿದ್ದರು. ಮೊದಲು ಜನರ ಮನಸ್ಸನ್ನು ಗೆಲ್ಲಿ ಎಂದಿದ್ದರು. ಆದರೂ ಇಂದು ಪಕ್ಷದಲ್ಲಿ ಮತ್ತೆ ಸಿಎಂ ಚರ್ಚೆ ಶುರುವಾಗಿದೆ.

ಇಂದು ಕನಕಪುರದಲ್ಲಿ ಬೈಕ್ ರ್ಯಾಲಿ ಜೊತೆಗೆ ಬೃಹತ್ ಮೆರವಣಿಗೆ ನಡೆದಿದೆ. ಕನಕಪುರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆದಿದೆ. ಡಿಕೆ ಶಿವಕುಮಾರ್ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತ ಮಾಡಿದರು. ಬೃಹತ್ ಸೇಬಿನ ಹಾರ, ಮೂಸಂಬಿ ಹಾರ ಹಾಕಿ ಸ್ವಾಗತಿಸಿದರು.

ಮೆರವಣಿಗೆ ವೇಳೆ ಮಾತನಾಡಿದ ಡಿಕೆ ಶಿವಕುಮಾರ್ ಅವರು, ಜಗದೀಶ್ ಶೆಟ್ಟರ್ ಅವರನ್ನು ಕಾಂಗ್ರೆಸ್ ಗೆ ಸೇರಿಸಿಕೊಂಡಿದ್ದೇವೆ. ಮಿತ್ರ ಅಶೋಕ್, ಸಿಎಂ ಬೊಮ್ಮಾಯಿ ಅವರಿಗೆ ಟಾಟಾ ಮಾಡಿಸಿದ್ದೇನೆ. ನನ್ನ ವಿರುದ್ಧ ಯಾರು ಚುನಾವಣೆಗೆ ನಿಲ್ಲುತ್ತಾರೆ ಗೊತ್ತಿಲ್ಲ. ಆದರೆ ನನ್ನನ್ನು ವಿಧಾನಸೌಧದ ಮೂರನೇ ಮಹಡಿಯಲ್ಲಿ ಕೂರಿಸುವ ಅವಕಾಶವಿದೆ. ನೀವೂ ನನಗೆ ಆಶೀರ್ವಾದ ಮಾಡುತ್ತೀರಿ ತಾನೇ ಎಂದು ಕೇಳಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...