Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಸಿದ್ದರಾಮಯ್ಯ ಕ್ಷೇತ್ರದಲ್ಲಿ ಮತ ಕೇಳಲು ಹೋದ ವಿ ಸೋಮಣ್ಣಗೆ ಜನರಿಂದ ತರಾಟೆ..!

---Advertisement---

 

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವರುಣಾದಲ್ಲೊ ಬಿಜೆಪೊ ವಿ ಸೋಮಣ್ಣ ಅವರನ್ನು ಕಣಕ್ಕೆ ಇಳಿಸಿದೆ. ಈಗಾಗಲೇ ಅಬ್ಬರದ ಪ್ರಚಾರ ಕೂಡ ಶುರುವಾಗಿದೆ. ಇಂದು ವಿ ಸೋಮಣ್ಣ ಈ ಬಾರಿ ತಾವೂ ಪ್ರತಿನಿಧಿಸುವ ಕ್ಷೇತ್ರ ಅಂದ್ರೆ ವರುಣಾ ಕ್ಷೇತ್ರದಿಂದ ಪ್ರಚಾರ ಕಾರ್ಯ ಶುರು ಮಾಡಿದ್ದಾರೆ. ಆದ್ರೆ ಜನರು ವಿ ಸೋಮಣ್ಣ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಗ್ರಾಮಸ್ಥರೆಲ್ಲರೂ ವಿ ಸೋಮಣ್ಣ ಅವರನ್ನು ಸುತ್ತುವರೆದು ಪ್ರಶ್ನೆಗಳನ್ನು ಕೇಳಿದ್ದಾರೆ. ಕ್ಷೇತ್ರದ ಅಭಿವೃದ್ಧಿಗಾಗಿ ಏನು ಮಾಡಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದವರು, ಜಿಲ್ಲೆಗೆ ಏನು ಅಭಿವೃದ್ದಿ ಮಾಡಿದ್ದೀರಿ. ಆ ಸಮಯದಲ್ಲಿ ಏನು ಕೊಡುಗೆ ನೀಡಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

ಸೋಮಣ್ಣ ಕ್ಷೇತ್ರಕ್ಕೆ ಭೇಟಿ ನೀಡಿದ್ದ ವೇಳೆ ಪ್ರತಾಪ್ ಸಿಂಹ ಕೂಡ ಹಾಜರಿದ್ದರು. ಸೋಮಣ್ಣ ಅವರನ್ನು ತರಾಟೆಗೆ ತೆಗೆದುಕೊಂಡಾಗ ಸಂಸದ ಪ್ರತಾಪ್ ಸಿಂಹ ಮಧ್ಯಪ್ರವೇಶಿಸಲು ಪ್ರಯತ್ನಿಸಿದರು. ಆದರೂ ಅದು ಸಾಧ್ಯವಾಗಲಿಲ್ಲ. ಬಳಿಕ ಇದನ್ನು ಯಾರು ವಿಡಿಯೋ ಮಾಡಬೇಡಿ ಎಂದು ಪ್ರತಾಪ್ ಸಿಂಹ ಅವರೇ ಮನವಿ ಮಾಡಿಕೊಂಡರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...