Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ನಿರ್ಲಕ್ಷಿಸಿದರೆ ಕಠಿಣ ಕ್ರಮ: ದಿವ್ಯಪ್ರಭು ಜಿಆರ್‌ಜೆ

Facebook
Twitter
Telegram
WhatsApp

 

ಮಾಹಿತಿ ಮತ್ತು ಫೋಟೋ ಕೃಪೆ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ, (ಏ.22) : ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಸ್ಥಾಪಿಸಲಾಗಿರುವ ಚೆಕ್‌ಪೋಸ್ಟ್‌ಗಳಲ್ಲಿ ಅಧಿಕಾರಿಗಳು ಸರಿಯಾಗಿ ತಪಾಸಣೆ ಮಾಡದೆ ನಿರ್ಲಕ್ಷ್ಯವಹಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್‌ಜೆ ಅವರು ಎಚ್ಚರಿಕೆ ನೀಡಿದರು.

ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳ ಸಭೆ ನಡೆಸಿದ ಅವರು, ಎಸ್ಎಸ್‌ಟಿ, ಎಫ್‌ಎಸ್‌ಟಿ ತಂಡಗಳು ಸರಿಯಾಗಿ ಕೆಲಸ ಮಾಡಬೇಕು. ಇದಕ್ಕಾಗಿಯೇ ಎಲ್ಲಾ ಅಧಿಕಾರಿಗಳಿಗೆ ವಾಹನ ಮತ್ತು ಇತರ ಸೌಲಭ್ಯಗಳನ್ನು ಕೊಡಲಾಗಿದೆ. ಅಧಿಕಾರಿಗಳು ಕರ್ತವ್ಯ ನಿರ್ಲಕ್ಷಿಸಿರುವುದು ಕಂಡುಬಂದರೆ ಕೂಡಲೇ ಅಮಾನತ್ತು ಮಾಡಿ, ಮುಂದಿನ ಶಿಸ್ತುಕ್ರಮ ಕೈಗೊಳ್ಳಲಾಗುವುದು. ನಿಮ್ಮ ನಿರ್ಲಕ್ಷ್ಯದಿಂದ ಜಿಲ್ಲೆಗೆ ಕೆಟ್ಟ ಹೆಸರು ಬರಬಾರದು ಎಂದರು.

ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಲಾಗಿರುವ 80ಕ್ಕಿಂತ ಹೆಚ್ಚಿನ ವಯೋ ವೃದ್ಧರು ಮತ್ತು ವಿಕಲಚೇತನರ ಮನೆಗಳಿಗೆ ಹೋಗಿ ಮತದಾನ ಮಾಡಿಸಿಕೊಳ್ಳುವ ಪ್ರಕ್ರಿಯೆಯನ್ನು ಇದೇ ಏಪ್ರಿಲ್ 29 ರಿಂದ ಮೇ 6ರ ಒಳಗಾಗಿ ಮಾಡಬೇಕು. ಈ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕವಾಗಿರಬೇಕು. ಅತ್ಯಂತ ಜಾಗೃತೆಯಿಂದ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮಾಡಬೇಕು ಎಂದು ಹೇಳಿದರು.

ಮನೆಗಳಿಗೆ ತೆರಳಿ ಮತದಾನ ಮಾಡಿಸುವ ಪ್ರಕ್ರಿಯೆಯಲ್ಲಿ ಗುರುತಿಸಲಾಗಿರುವ‌ ಮತದಾರರ ಪೈಕಿ ಶೇ.100 ರಷ್ಟು ಮತದಾನವಾದರೆ ಯಾವುದೇ ದೂರು ಹಾಗೂ ಆಕ್ಷೇಪಣೆಗೆ ಅವಕಾಶ ಇರುವುದಿಲ್ಲ. ಈ ನಿಟ್ಟಿನಲ್ಲಿ ಎಲ್ಲಾ ಮಾರ್ಗದರ್ಶನಗಳನ್ನೂ ಪಾಲಿಸಬೇಕು ಎಂದರು.

ಭದ್ರತಾ ದೃಷ್ಟಿಯಿಂದ ಜಿಲ್ಲೆಗೆ ಒದಗಿಸಲಾಗಿರುವ ಸಿಆರ್‌ಪಿಎಫ್ ಸಿಬ್ಬಂದಿಗಳನ್ನು ವಿಧಾನಸಭಾ ಕ್ಷೇತ್ರವಾರು ನಿಯೋಜಿಸಲು ವಲ್ನರೆಬಲ್ (Vulnerable) ಮತಗಟ್ಟೆ ಕ್ಲಸ್ಟರ್‌ಗಳು, ಕ್ರಿಟಿಕಲ್ ಮತಗಟ್ಟೆ ಕ್ಲಸ್ಟರ್‌, ಮುಂತಾದವುಗಳ ವಿವರವನ್ನು ಬೇಗ ಅಂತಿಮಗೊಳಿಸಿ ವರದಿ ನೀಡುವಂತೆ ತಾಕೀತು ಮಾಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್, ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಹಾಗೂ ಎಂಸಿಎಂಸಿ ನೋಡಲ್ ಅಧಿಕಾರಿ ಗಾಯತ್ರಿ, ಜಿಲ್ಲೆಯ ಆರು  ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

14 ತಿಂಗಳ ಮಗುವಿಗೆ ಯಶಸ್ವಿ ಹೃದಯ ಕಸಿ : ಬೆಂಗಳೂರಿನಲ್ಲಿ ವೈದ್ಯರ ಅಪರೂಪದ ಸಾಧನೆ..!

ಬೆಂಗಳೂರು : ಇಲ್ಲಿನ ನಾರಾಯಣ ಹೃದಯಾಲಯದಲ್ಲಿ ಅಪರೂಪದ ಶಸ್ತ್ರಚಿಕಿತ್ಸೆ ನಡೆದಿದೆ. ಅತಿ ಚಿಕ್ಕ ವಯಸ್ಸಿನಲ್ಲೇ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ 14 ತಿಂಗಳ ಮಗುವಿಗೆ ನಾರಾಯಣ ಆಸ್ಪತ್ರೆ ವೈದ್ಯರು ಹೃದಯ ಕಸಿ ಚಿಕಿತ್ಸೆ ಯಶಸ್ವಿಯಾಗಿ

ಚಿತ್ರದುರ್ಗ APMC : ಇಂದಿನ ಹತ್ತಿ ಮಾರುಕಟ್ಟೆ ಧಾರಣೆ…!

ಸುದ್ದಿಒನ್, ಚಿತ್ರದುರ್ಗ, ನವಂಬರ್. 23 : ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇಂದು (ಶನಿವಾರ, ನವಂಬರ್. ,23 ) ಹತ್ತಿ ಮಾರುಕಟ್ಟೆ ಇದ್ದು, ಧಾರಣೆಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ. ಹತ್ತಿ

IND vs AUS TEST | ಟೆಸ್ಟ್ ಪಂದ್ಯದಲ್ಲಿ 5 ವಿಕೆಟ್ ಪಟೆದ ಜಸ್ಪ್ರೀತ್ ಬುಮ್ರಾ : ಈ ಸಾಧನೆ ಮಾಡಿದ ಇತರ ಭಾರತೀಯ ಆಟಗಾರರ ಮಾಹಿತಿ ಇಲ್ಲಿದೆ…!

ಸುದ್ದಿಒನ್ | ಟೀಂ ಇಂಡಿಯಾ ವೇಗಿ ಮತ್ತು ನಾಯಕ ಜಸ್ಪ್ರೀತ್ ಬುಮ್ರಾ ಅವರು ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೊದಲ ಟೆಸ್ಟ್‌ನಲ್ಲಿ ಶನಿವಾರ ಟೆಸ್ಟ್ ಕ್ರಿಕೆಟ್‌ನಲ್ಲಿ ಐದು ವಿಕೆಟ್‌ಗಳನ್ನು ಗಳಿಸುವ ಮೂಲಕ ಇತಿಹಾಸ ದಾಖಲಿಸಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ

error: Content is protected !!