Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶೋಷಿತ ಜಾತಿಗಳಿಗೆ ಸಮಾನತೆ ಸಿಗಬೇಕೆನ್ನುವುದು ಬಸವಣ್ಣನವರ ಪರಿಕಲ್ಪನೆ : ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ಏ.23) : ಹನ್ನೆರಡನೇ ಶತಮಾನದಲ್ಲಿಯೇ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಿದ ಮಹಾನ್ ಮಾನವತಾವಾದಿ ಬಸವಣ್ಣನವರು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ ಹೇಳಿದರು.

ಭಾರತೀಯ ಜನತಾಪಾರ್ಟಿ ಚುನಾವಣಾ ಕಾರ್ಯಾಲಯದಲ್ಲಿ ಭಾನುವಾರ ನಡೆದ ಬಸವ ಜಯಂತಿಯಲ್ಲಿ ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ಶೋಷಿತ ಜಾತಿಗಳಿಗೆ ಸಮಾನತೆ ಸಿಗಬೇಕೆನ್ನುವುದು ಬಸವಣ್ಣನವರ ಪರಿಕಲ್ಪನೆಯಾಗಿತ್ತು. ಅದರ ಆಧಾರದ ಮೇಲೆ ಇಂದಿನ ಸಂಸತ್ ರಚನೆಯಾಗಿರುವುದು. ಅಂತರ್ಜಾತಿ ವಿವಾಹಕ್ಕೆ ಮನ್ನಣೆ ಕೊಟ್ಟ ಬಸವಣ್ಣನವರ ಆಶಯದಂತೆ ದೇಶದಲ್ಲಿ ಭಾರತೀಯ ಜನತಾಪಾರ್ಟಿ ಅಧಿಕಾರ ನಡೆಸುತ್ತಿದ್ದು, ಅಂತ್ಯೋದಯದ ಮೂಲಕ ಎಲ್ಲಾ ಬಡವರಿಗೂ ಸರ್ಕಾರದ ಸೌಲಭ್ಯಗಳನ್ನು ದೊರಕಿಸುವಲ್ಲಿ ಯಶಸ್ವಿಯಾಗಿದೆ ಎಂದು ಗುಣಗಾನ ಮಾಡಿದರು.

ಜಿಲ್ಲಾ ಚುನಾವಣಾ ಸಹ ಸಂಚಾಲಕ ಮಲ್ಲಿಕಾರ್ಜುನ್ ಮಾತನಾಡಿ ಸಮಾನತೆಯ ಸಂದೇಶವನ್ನು ಸಾರಿದ ಭಕ್ತಿ ಭಂಡಾರಿ, ಕ್ರಾಂತಿಕಾರಿ ಜಗಜ್ಯೋತಿ ಬಸವಣ್ಣನವರ ಆದರ್ಶ, ಸಿದ್ದಾಂತಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕೆಂದು ತಿಳಿಸಿದರು.
ಬಿಜ್ಜಳನ ಆಡಳಿತದಲ್ಲಿ ಮಂತ್ರಿಯಾಗಿದ್ದಾಗ ಎಲ್ಲಾ ಸಮಾಜದವರಿಗೂ ಅಧಿಕಾರವನ್ನು ಹಂಚಿಕೆ ಮಾಡಿದ ಮಹಾನ್ ಮಾನವತಾವಾದಿ ಬಸವಣ್ಣ ಶೋಷಿತ ಸಮಾಜವನ್ನು ಮೇಲೆತ್ತುವ ನಿಟ್ಟಿನಲ್ಲಿ ಕೆಲಸ ಮಾಡಿದವರು. ಹಾಗಾಗಿ ಪ್ರತಿ ಬೂತ್ ಮತ್ತು ಗ್ರಾಮಗಳಲ್ಲಿ ಬಸವಣ್ಣನವರ ಆಶಯದಂತೆ ಪಕ್ಷದ ಕಾರ್ಯಕರ್ತರು ಕೆಲಸ ಮಾಡಬೇಕಿದೆ ಎಂದರು.

ಬಿಜೆಪಿ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರೇಂದ್ರ, ಗ್ರಾಮಾಂತರ ಮಂಡಲ ಅಧ್ಯಕ್ಷ ಕಲ್ಲೇಶಯ್ಯ, ಡಾ.ಸಿದ್ದಾರ್ಥ, ಜಿಲ್ಲಾ ಉಪಾಧ್ಯಕ್ಷರುಗಳಾದ ಚಂದ್ರಿಕಾ ಲೋಕನಾಥ್, ಶ್ಯಾಮಲ ಶಿವಪ್ರಕಾಶ್, ಕಾರ್ಯದರ್ಶಿ ಎ.ರೇಖ, ವಕ್ತಾರ ನಾಗರಾಜ್ ಬೇದ್ರೆ, ಮಾಧ್ಯಮ ವಕ್ತಾರ ದಗ್ಗೆಶಿವಪ್ರಕಾಶ್, ರೈತ ಮೋರ್ಚಾ ಜಿಲ್ಲಾಧ್ಯಕ್ಷ ವೆಂಕಟೇಶ್‍ಯಾದವ್ ನಗರ ಪ್ರಧಾನ ಕಾರ್ಯದರ್ಶಿಗಳಾದ ಕಿರಣ್ ಡಿ.ಎಸ್.ಹಳ್ಳಿ, ವೆಂಕಟೇಶ್, ಶಂಭು, ಕವನ, ರತ್ನಮ್ಮ, ಮಂಜುಳಮ್ಮ, ಶಾಂತಮ್ಮ, ಬಸಮ್ಮ, ನಗರಸಭೆ ಸದಸ್ಯ ಜಯಣ್ಣ, ಮುಕ್ಕಣ್ಣ ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿಪಿಎಲ್ ಕಾರ್ಡ್ ರದ್ದಾದವರಿಗೆ ಸರ್ಕಾರದಿಂದ ಗುಡ್ ನ್ಯೂಸ್ ..!

ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಬಿಪಿಎಲ್ ಕಾರ್ಡ್ ಪಡೆದವರ ಮಾಹಿತಿಯನ್ನೆಲ್ಲಾ ಕಲೆ ಹಾಕಿ, ಅನರ್ಹರ ಬಿಎಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಬೇಕೆಂದು ಸರ್ಕಾರ ಸೂಚನೆ ನೀಡಿತ್ತು. ಆದರೆ ಇದರ ನಡುವೆ ಅರ್ಹರ ಬಿಪಿಎಲ್ ಕಾರ್ಡ್

ಆಭರಣ ಪ್ರಿಯರಿಗೆ ಹ್ಯಾಪಿ ನ್ಯೂಸ್ : ಇಂದು 120 ರೂಪಾಯಿಯಷ್ಟು ಚಿನ್ನ ಇಳಿಕೆ..!

ಕಳೆದ ನಾಲ್ಕೈದು ದಿನದಿಂದ ಚಿನ್ನ ಬೆಳ್ಳಿ ಬೆಲೆಯಲ್ಲಿ ಏರಿಕೆ ಕಂಡಿದ್ದೇ ಆಯ್ತು. ಮತ್ತೆಬಿಳಿಯಲ್ವೇನೋ ಏನು ಮಾಡೋದು ದೇವ್ರೇ ಅಂತ ಅದೆಷ್ಟೋ ಚಿನ್ನಾಭರಣ ಪ್ರಿಯರು ಬೇಸರ ಮಾಡಿಕೊಂಡಿದ್ದರು. ಇದೀಗ ಆ ಬೇಸರಕ್ಕೆ ಇಂದಿನ ಚಿನ್ನದ ಖುಷಿ‌

ಸಾಮಾಜಿಕ ನ್ಯಾಯದ ವಿರೋಧಿಗಳು ಸಂವಿಧಾನ ಬದಲಾಯಿಸುವ ಮಾತಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ನವೆಂಬರ್ 26 : ಸಂವಿಧಾನ ನೀಡಿರುವ ಹಕ್ಕುಗಳನ್ನು ಚಲಾಯಿಸುವ ಜೊತೆಗೆ , ಭಾದ್ಯತೆಗಳನ್ನು ತಪ್ಪದೇ ಪಾಲಿಸುವುದೂ ಆವಶ್ಯಕ. ಈ ನಿಟ್ಟಿನಲ್ಲಿ ಅರಿವು ಮೂಡಿಸಲು ಸಂವಿಧಾನ ದಿನವನ್ನು ಆಚರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

error: Content is protected !!