ನನ್ನನ್ನು ಬೆಂಬಲಿಸಿ ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತನ್ನಿ : ಕೆ.ಸಿ.ವೀರೇಂದ್ರಪಪ್ಪಿ

2 Min Read

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ಏ.24) : ಮೂವತ್ತು ವರ್ಷಗಳಿಂದ ನೀವುಗಳು ಯಾಮಾರಿದ್ದು ಸಾಕು. ಈಗಲಾದರೂ ಎಚ್ಚೆತ್ತುಕೊಂಡು ಮುಂದಿನ ತಿಂಗಳು ಹತ್ತನೆ ತಾರೀಖಿನಂದು ನಡೆಯುವ ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸಿ ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರುವಂತೆ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಸಿ.ವೀರೇಂದ್ರಪಪ್ಪಿ ಮತದಾರರಲ್ಲಿ ಮನವಿ ಮಾಡಿದರು.

ಸಾದರಹಳ್ಳಿ, ವಿಜಾಪುರ, ಲಕ್ಷ್ಮಿಸಾಗರ ಇನ್ನು ಅನೇಕ ಗ್ರಾಮಗಳಲ್ಲಿ ಸೋಮವಾರ ಬಿರುಸಿನ ಮತಯಾಚನೆ ನಡೆಸಿ ಮಾತನಾಡಿದ ಅಭ್ಯರ್ಥಿ ಕೆ.ಸಿ.ವೀರೇಂದ್ರಪಪ್ಪಿ ತಾಯಂದಿರು, ಮಕ್ಕಳು, ಯುವಕ/ಯುವತಿಯರ ಬದುಕು ಬದಲಾವಣೆಯಾಗಬೇಕಾದರೆ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಹುಮತದಿಂದ ಗೆಲ್ಲಿಸಿ. ಚುನಾವಣೆ ಇನ್ನು ಎರಡು ಮೂರು ದಿನಗಳಿರಬೇಕಾದರೆ ನಾನಾ ರೀತಿಯ ಆಸೆ ಆಮಿಷಗಳನ್ನು ತೋರಿ ಮತಗಳನ್ನು ಸೆಳೆಯಬಹುದು. ಅಂಹವರ ವಿರುದ್ದ ಜಾಗರೂಕರಾಗಿ  ವಿವೇಚನೆಯಿಂದ ಮತ ಚಲಾಯಿಸಿ ಎಂದು ಮಹಿಳಾ ಮತದಾರರಲ್ಲಿ ವಿನಂತಿಸಿದರು.

ನಾನು ಹೊರಗಿನವನು ಎಂದು ಎದುರಾಗಳಿಗಳು ಅಪ ಪ್ರಚಾರ ಮಾಡುತ್ತಿದ್ದಾರೆ. ನನ್ನ ಉದ್ಯಮ ದೇಶ ವಿದೇಶಗಳಲ್ಲಿದೆ. ಆದರೆ ಮೂಲತಃ ನಾನು ಇಲ್ಲಿಯವನೆ. ಚುನಾವಣೆಯಲ್ಲಿ ಗೆದ್ದ ಮೇಲೆ ಇಲ್ಲಿಯೇ ಇದ್ದು, ಕ್ಷೇತ್ರಾದ್ಯಂತ ಸುತ್ತಾಡಿ ಮತದಾರರ ಸಮಸ್ಯೆಗಳನ್ನು ಆಲಿಸಿ ಸರ್ಕಾರದಿಂದ ನ್ಯಾಯೋಚಿತವಾಗಿ ಸಿಗಬೇಕಾದ ಸೌಲಭ್ಯಗಳನ್ನು ಮುಟ್ಟಿಸುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆಂದು ಹೇಳಿದರು.

ಈ ಬಾರಿಯ ಚುನಾವಣೆಯಲ್ಲಿ ನಮ್ಮ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ ಹತ್ತು ಕೆ.ಜಿ. ಅಕ್ಕಿ ಉಚಿತವಾಗಿ ನೀಡಲಾಗುವುದು. ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಪ್ರತಿ ಮನೆ ಒಡತಿಯ ಬ್ಯಾಂಕ್ ಖಾತೆಗೆ ತಿಂಗಳಿಗೆ ಎರಡು ಸಾವಿರ ರೂ.ಗಳನ್ನು ಜಮ ಮಾಡಲಾಗುವುದು. ಪದವೀಧರ ನಿರುದ್ಯೋಗ ಯುವಕ/ಯುವತಿಯರಿಗೆ ತಿಂಗಳಿಗೆ ಮೂರು ಸಾವಿರ ರೂ. ಹಾಗೂ ಡಿಪ್ಲಮೋ ಪಡೆದವರಿಗೆ ಒಂದುವರೆ ಸಾವಿರ ರೂ.ಗಳನ್ನು ಎರಡು ವರ್ಷಗಳತನಕ ನೀಡಲಾಗುವುದು ಎಂದು ಭರವಸೆ ನೀಡಿದರು.

ಐದು ವರ್ಷದಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಕೇವಲ ಇಪ್ಪತ್ತು ಮನೆಗಳನ್ನು ಮಾತ್ರ ನೀಡಲಾಗಿದೆ. ಆದರೆ ಪಟ್ಟಿಯಲ್ಲಿರುವುದು ಮಾತ್ರ ಇಪ್ಪತ್ತು ಸಾವಿರ  ಮನೆ. ಇದ್ಯಾವ ಲೆಕ್ಕ. ಇಂತಹ ಅಕ್ರಮವನ್ನು ಯಾರು ಪ್ರಶ್ನಿಸುತ್ತಾರೋ ಅಂತಹವರ ಮೇಲೆ ದೌರ್ಜನ್ಯ, ದಬ್ಬಾಳಿಕೆ ನಡೆಸುವುದು. ಚೇಲಾಗಳನ್ನು ಬಿಟ್ಟು ಹೆದರಿಸುವ ಕುತಂತ್ರ ನಡೆಯುತ್ತಿದೆ. ಇವೆಲ್ಲದಕ್ಕೂ ಅಂತ್ಯ ಹಾಡಬೇಕಾಗಿರುವುದರಿಂದ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಮತದಾರರಲ್ಲಿ ಕೋರಿದರು.

ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೋಕ್ಷರುದ್ರಸ್ವಾಮಿ, ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಆರ್.ಕೃಷ್ಣಮೂರ್ತಿ, ಗ್ರಾಮಾಂತರ ಮಂಡಲ ಅಧ್ಯಕ್ಷ ಆರ್.ಪ್ರಕಾಶ್ ಇನ್ನು ಅನೇಕರು ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *