Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

20 ವರ್ಷದ ಹಿಂದಿನ ಫೋಟೋ ಹಂಚಿಕೊಂಡ ನಟಿ‌ ರಮ್ಯಾ : ಆ ಸುಂದರ ನೆನಪು ಏನು ಗೊತ್ತಾ..?

---Advertisement---

ಬೆಂಗಳೂರು: ನಟಿ ರಮ್ಯಾ ಸದ್ಯ ಚಿತ್ರರಂಗದಲ್ಲಿ ಮತ್ತೆ ಬ್ಯುಸಿಯಾಗಿದ್ದಾರೆ. ಪ್ರೊಡಕ್ಷನ್ ಹೌಸ ಶುರು ಮಾಡಿ, ಸಿ‌ನಿಮಾ ನಿರ್ಮಾಣದ ಜೊತೆಗೆ ನಟನೆಗೂ ಮರಳಿದ್ದಾರೆ. ಇದರ ಜೊತೆಗೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪ್ರಚಾರಕ್ಕೂ ಇಳಿಯಲಿದ್ದಾರೆ. ಇದರ ನಡುವೆ ಸೋಷಿಯಲ್ ಮೀಡಿಯಾದಲ್ಲಿ ಒಂದಷ್ಟು ಹಳೆ ಫೋಟೋಗಳನ್ನು ಹಂಚಿಕೊಂಡು ಅಪ್ಪು ಜೊತೆಗಿನ ನೆನಪುಗಳನ್ನು ಮೆಲುಕು ಹಾಕಿದ್ದಾರೆ.


“ನನ್ನ ಮೊದಲ ಚಿತ್ರ ,ಅಪ್ಪು ಅವರ ಜೊತೆಗಿನ ‘ಅಭಿ’ ಬಿಡುಗಡೆ ಆಗಿ ಇಂದಿಗೆ 20 ವರ್ಷಗಳು.
ನನ್ನ ಅಭಿಮಾನಿಗಳ ಹಾಗೂ ಹಿತೈಷಿಗಳ ನಿರಂತರ ಪ್ರೀತಿಗೆ ನನ್ನ ಹೃದಯವು ಕೃತಜ್ಞತೆಯಿಂದ ತುಂಬಿದೆ.ನನಗೆ ಅವಕಾಶ ಕೊಟ್ಟ ರಾಜ್ ಕುಟುಂಬಕ್ಕೆ ಸದಾ ಚಿರಋಣಿ ಮತ್ತು ನನ್ನ ಸಿನಿ ಪಯಣದಲ್ಲಿ ನನ್ನೊಂದಿಗೆ ಕೆಲಸ ಮಾಡಿದ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು” ಎಂದಿದ್ದಾರೆ.

ನಟಿ ರಮ್ಯಾ, ಪುನೀತ್ ರಾಜ್‍ಕುಮಾರ್ ಅಭಿನಯದ ಅಭಿ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು. ಇವತ್ತು ಅಪ್ಪು ಸಿನಿಮಾಗು 20 ವರ್ಷ ತುಂಬಿದೆ. ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರು ಸೋಷಿಯಲ್ ಮೀಡಿಯಾದಲ್ಲಿ ಆ ಖುಷಿಯನ್ನು ಹಂಚಿಕೊಂಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...