Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜಕೀಯ ಪ್ರಚಾರದಲ್ಲಿ ಸುದೀಪ್ : ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರ ಹರಸಾಹಸ..!

---Advertisement---

ನಟ ಕಿಚ್ಚ ಸುದೀಪ್ ಸದ್ಯ ರಾಜಕೀಯ ಪ್ರಚಾರದಲ್ಲಿ ತೊಡಗಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ ಜೊತೆಗೇನೆ ಪ್ರಚಾರಕ್ಕೆ ನಡೆಯುತ್ತಿದ್ದು, ಮಾಮನನ್ನು ಗೆಲ್ಲಿಸಿಕೊಡಿ ಎಂದು ಜನರಲ್ಲಿ ಮನವಿ ಮಾಡುತ್ತಿದ್ದಾರೆ. ಈಗಾಗಲೇ ಶಿಗ್ಗಾಂವಿಯಲ್ಲಿ ಪ್ರಚಾರ ನಡೆಸಿ, ರೋಡ್ ಶೋ ನಡೆಸಿದ್ದಾರೆ.

ಸುದೀಪ್ ಹೇಳಿ ಕೇಳಿ ದೊಡ್ಡ ಸೆಲೆಬ್ರೆಟಿ. ಸುದೀಪ್ ನಮ್ಮ ಏರಿಯಾ, ನಮ್ಮ ರೋಡಿಗೆ ಬರ್ತಾರೆ ಅಂದ್ರೆ ಅವರನ್ನ ನೋಡುವುದಕ್ಕೇನೆ ಅಭಿಮಾನಿಗಳು ಸಾಲುಗಟ್ಟಿ ನಿಂತಿರುತ್ತಾರೆ. ಅವರ ಜೊತೆಗೆ ಫೋಟೋ ತೆಗೆಸಿಕೊಳ್ಳಲು ಕಾಯುತ್ತಾ ಇರುತ್ತಾರೆ. ಇನ್ನು ಎಲೆಕ್ಷನ್ ಪ್ರಚಾರಕ್ಕೆ ಬಂದರೆ ಕೇಳಬೇಕಾ. ಅಭಿಮಾನಿಗಳ ದಂಡೇ ಹರಿದು ಬರುತ್ತಿದೆ.

ನಟ ಸುದೀಪ್ ತೆರೆದ ವಾಹನದಲ್ಲಿ ಪ್ತಚಾರ ಮಾಡುತ್ತಾ ಇದ್ದರೆ, ಆ ಕಡೆ ಪೊಲೀಸರಿಗೆ ಉಸಿರುಗಟ್ಟಿದ ವಾತಾವರಣ ನಿರ್ಮಾಣವಾದಂತೆ ಆಗಿದೆ. ಯಾಕಂದ್ರೆ ಅಷ್ಟೊಂದು ಅಭಿಮಾನಿಗಳನ್ನು ನಿಯಂತ್ರಿಸುವ ಕೆಲಸ ಸುಲಭವಲ್ಲ. ಕೂಡ್ಲಿಗಿಯಲ್ಲಿ ಸುದೀಪ್ ಕಾರಿಗೆ ಅಭಿಮಾನಿಗಳು ಅಡ್ಡ ಹಾಕಿದ್ದಾರೆ. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಸಂಡೂರಿನಲ್ಲೂ ರೋಡ್ ಶೋ ನಡೆಸಬೇಕಿತ್ತು. ಆದರೆ ಭದ್ರತಾ ದೃಷ್ಟಿಯಿಂದ ಅದನ್ನು ರದ್ದು ಮಾಡಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...