Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಏಪ್ರಿಲ್ 30 ರಂದು ಚಿತ್ರದುರ್ಗಕ್ಕೆ ಪಂಜಾಬ್ ಮುಖ್ಯಮಂತ್ರಿ ಆಗಮನ : ಅಭ್ಯರ್ಥಿ ಬಿ.ಇ.ಜಗದೀಶ್

Facebook
Twitter
Telegram
WhatsApp

ಚಿತ್ರದುರ್ಗ, (ಏ.27) : ಆಮ್ ಆದ್ಮಿ ಪಕ್ಷದ ಪ್ರಚಾರಕ್ಕಾಗಿ ಪಂಜಾಬ್ ರಾಜ್ಯದ ಮುಖ್ಯಮಂತ್ರಿ ಭಗವಾತ್ ಮಾನ್ ಸಿಂಗ್, ಕರ್ನಾಟಕ ರಾಜ್ಯ ಅಧ್ಯಕ್ಷ ಪೃಥ್ವಿ ರೆಡ್ಡಿ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಏಪ್ರಿಲ್ 30 ರಂದು ಚಿತ್ರದುರ್ಗಕ್ಕೆ ಆಗಮಿಸಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಚಿತ್ರದುರ್ಗ ಅಭ್ಯರ್ಥಿ ಬಿ.ಇ.ಜಗದೀಶ್ ತಿಳಿಸಿದ್ದಾರೆ.

ನಗರದಲ್ಲಿ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತಮಾಡಿದ ಅವರು, ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರದ ಮತದಾರರು ಆಮ್ ಆದ್ಮಿ ಪಕ್ಷದ ಪರವಾಗಿ ಮತ ಚಲಾಯಿಸಲು ನಿರ್ಧಾರ ಮಾಡಿದ್ದಾರೆ. ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ವಾಗಿದ್ದು, ಅದನ್ನು ತಡೆಯಲು ಎಎಪಿ ಅಧಿಕಾರಕ್ಕೆ ಬರಬೇಕಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಚುನಾವಣೆ  ಪ್ರಚಾರವನ್ನು ಕೈಗೊಳ್ಳಲಾಗಿದೆ ಎಂದರು.

ಏಪ್ರಿಲ್ 30 ರಂದು ಬೆಳಗ್ಗೆ 10.30 ಕ್ಕೆ ಪಂಜಾಬ್ ಮುಖ್ಯಮಂತ್ರಿ ಸೇರಿದಂತೆ ಪಕ್ಷದ ವರಿಷ್ಠರು ಭೀಮಸಮುದ್ರಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿ, ಅಲ್ಲಿಂದ ಚಿತ್ರದುರ್ಗದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ನಂತರ ಬಿಡಿ ರಸ್ತೆಯಲ್ಲಿ ರೋಡ್ ಶೋ ಮೂಲಕ ಭೀಮಸಮುದ್ರಕ್ಕೆ ಬಂದು ಬೆಂಗಳೂರಿಗೆ ತೆರಳಲಿದ್ದಾರೆ.

ವೇದಿಕೆ ಕಾರ್ಯಕ್ರಮಕ್ಕೆ ಸುಮಾರು 20 ಸಾವಿರ ಜನರು ಭಾಗವಹಿಸಲಿದ್ದಾರೆ ಎಂದು ಹೇಳಿದ ಅವರು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ ಹಾಗೂ ಚಲನಚಿತ್ರ ನಟ ದರ್ಶನ್ ತೂಗುದೀಪ್ ಅವರು ಮೇ 06 ರಂದು ಚಿತ್ರದುರ್ಗಕ್ಕೆ ಆಗಮಿಸುವ ನಿರೀಕ್ಷೇ ಇದ್ದು, ಈ ಕುರಿತು ಚರ್ಚೆ ಮಾಡಲಾಗುತ್ತಿದೆ ಎಂದರು.

ಜಿಲ್ಲಾಧ್ಯಕ್ಷ ಫಾರೂಕ್ ಅಲಿ ಮಾತನಾಡಿ, ಪ್ರಸ್ತುತ ಚುನಾವಣೆಯಲ್ಲಿ ಹಣದ ಆಮಿಷಕ್ಕೆ ಒಳಗಾಗಬೇಡಿ ಎಂದು ಕ್ಷೇತ್ರದಲ್ಲಿ ಪ್ರಚಾರ ಮಾಡಿ ಜನರಲ್ಲಿ ಜಾಗೃತಿ ಮೂಡಿಸಲಾಗಿದ್ದು, ಭ್ರಷ್ಟಾಚಾರ ರಹಿತವಾಗಿ ಚುನಾವಣೆ ನಡೆಸಿ, ಅಧಿಕಾರವನ್ನು ನೀಡಬೇಕಿದೆ. ಈ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಬೇಕೆಂದು ಜನರಲ್ಲಿ ಮನವಿ ಮಾಡಲಾಗುತ್ತಿದೆ ಎಂದು ಹೆಳಿದರು.
ಸುದ್ದಿಗೋಷ್ಠಿಯಲ್ಲಿ ಹುಲ್ಲೂರು ರಾಜಣ್ಣ ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

ಅಕ್ರಮ ಕಸಾಯಿ ಖಾನೆ ಬಂದ್ ಮಾಡಿ : ದಾದಾ ಪೀರ್ ಆಗ್ರಹ : ವಿಡಿಯೋ ವೈರಲ್..!

ಸುದ್ದಿಒನ್, ಹಿರಿಯೂರು : ಅಕ್ರಮವಾಗಿ ಕಸಾಯಿ ಖಾನೆ ನಡೆಸುತ್ತಿರುವವರ ವಿರುದ್ಧ ದಾದಾ ಪೀರ್ ಎಂಬುವವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾದಾ ಪೀರ್ 6ನೇ ವಾರ್ಡ್ ನಲ್ಲಿ ವಾಸಿಸುವವ ವ್ಯಕ್ತಿಯಾಗಿದ್ದಾರೆ. ಕಸಾಯಿ ಖಾನೆಯಿಂದ ಮಕ್ಕಳು ಅನಾರೋಗ್ಯಕ್ಕೆ

error: Content is protected !!