Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರಚಾರದಲ್ಲಿ ಗೀತಕ್ಕನಿಗೆ ಸಾಥ್ ನೀಡಲಿದ್ದಾರೆ ಹ್ಯಾಟ್ರಿಕ್ ಹೀರೋ ಶಿವ ರಾಜ್‍ಕುಮಾರ್..!

---Advertisement---

ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ರಣಕಣ ಜೋರಾಗಿದೆ. ಜೆಡಿಎಸ್ ನಲ್ಲಿದ್ದ ಗೀತಾ ಶಿವರಾಜ್ಕುಮಾರ್ ಇಂದಿನಿಂದ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ. ಗೀತಾ ಅವರು ಪಕ್ಷ ಸೇರ್ಪಡೆ ಬಳಿಕ ಶಿವಣ್ಣ ಅಧಿಕೃತವಾಗಿ ಪ್ರಚಾರದ ಅಖಾಡಕ್ಕೆ ಇಳಿಯಲಿದ್ದಾರೆ. ಈಗಾಗಲೇ ಸ್ಟಾರ್ ನಟರಾದ ದರ್ಶ‌ನ್, ಸುದೀಪ್ ಒಂದೊಂದು ಪಕ್ಷಕ್ಕೆ ಪ್ರಚಾರ ಕಾರ್ಯ ಶುರು ಮಾಡಿಕೊಂಡಿದ್ದಾರೆ.

ಈ ಸಂಬಂಧ ನಟ ಶಿವರಾಜ್ಕುಮಾರ್ ಮಾತನಾಡಿದ್ದು, ಇಂದು ಗೀತಾ ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ. ಅವರ ನಿರ್ಧಾರಕ್ಕೆ ನನ್ನ ಬೆಂಬಲವಿದೆ. ನಾಳೆಯಿಂದ ಅವರು ಪ್ರಚಾರ ಮಾಡಲಿದ್ದಾರೆ. ಅವರ ಪ್ರಚಾರದಲ್ಲಿ ನಾನು ಭಾಗಿಯಾಗಲಿದ್ದೇನೆ ಎಂದಿದ್ದಾರೆ.

ಇನ್ನು ಮಧು ಬಂಗಾರಪ್ಪ ಅವರ ಪರವಾಗಿ ಗೀತಾ ಶಿವರಾಜ್ ಕುಮಾರ್ ಪ್ರಚಾರ ನಡೆಸಲಿದ್ದಾರೆ. ಮಧು ಬಂಗಾರಪ್ಪ ಈ ಬಾರಿ ಶಿವಮೊಗ್ಗದ ಸೊರಬದಿಂದ ಸ್ಪರ್ಧೆ ನಡೆಸುತ್ತಿದ್ದಾರೆ. ಗೀತಾ ಶಿವರಾಜ್ಕುಮಾರ್ ಮಧು ಬಂಗಾರಪ್ಪ ಹಾಗೂ ಭೀಮಣ್ಣ ಪರ ಪ್ರಚಾರ ನಡೆಸಲು ಸಿದ್ಧತೆ ನಡೆಸಲಿದ್ದಾರೆ. ಶಿವಣ್ಣ ಕೂಡ ಪತ್ನಿ ಪ್ರಚಾರಕ್ಕೆ ಸಾಥ್ ನೀಡಲಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...