Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಹಿಳಾ ಕುಸ್ತಿಪಟುಗಳಿಗೆ ಸಿಕ್ತು ಜಯ : ಆತನ ವಿರುದ್ಧ ಫೋಕ್ಸೋ ಕೇಸ್ ದಾಖಲು..!

---Advertisement---

ಹಲವು ದಿನಗಳಿಂದ ಕುಸ್ತಿ ಪಟುಗಳು ಪಟ್ಟು ಬಿಡದೆ ಹೋರಾಟ ನಡೆಸುತ್ತಿದ್ದರು. ಕಿರುಕುಳದಿಂದ ನೊಂದು, ನ್ಯಾಯಕ್ಕಾಗಿ ಕಣ್ಣೀರಿಟ್ಟಿದ್ದರು. ಇದೀಗ ಕುಸ್ತಿಪಟುಗಳಿಗೆ ನ್ಯಾಯ ಸಿಕ್ಕಿದೆ. ಬ್ರಿಜ್ ಭೂಷಣ್ ಶರಣ್ ವಿರುದ್ಧ ಫೋಕ್ಸೋ ಕಾಯಿದೆ ಅಡಿ ದೂರು ದಾಖಲಾಗಿದೆ.

ಭಾರತಕ್ಕೆ ಅಂತರಾಷ್ಟ್ರೀಯ ಪದಕಗಳನ್ನು ತಂದು ಕೊಟ್ಟಂತ ಮಹಿಳಾ‌ಮಣಿಗಳು ನಮಗೆ ನ್ಯಾಯ ಕೊಡಿಸಿ ಅಂತ ಪಟ್ಟು ಹಿಡಿದಿದ್ದರು. ಭಾರತದ ಕುಸ್ತಿ ಫೆಡರೇಷನ್‌ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ವಿರುದ್ಧ ಮಹಿಳಾ‌ಕುಸ್ತಿ ಪಟುಗಳು ರೊಚ್ಚಿಗೆದ್ದಿದ್ದರು. ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಆತನನ್ನು ಬಂಧಿಸಿ, ಎಫ್ಐಆರ್ ದಾಖಲಿಸುವಂತೆ ಒತ್ತಾಯಿಸಿದ್ದರು. ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಇದೀಗ ಕುಸ್ತಿಪಟುಗಳಿಗೆ ಮೊದಲ ಜಯ ಸಿಕ್ಕಿದೆ. ಬ್ರಿಜ್ ಭೂಷಣ್ ಶರಣ್ ವಿರುದ್ಧ ಫೋಕ್ಸೋ ಕಾಯ್ದೆ ಅಡಿ ದೂರು ದಾಖಲಾಗಿದೆ. ಬ್ರಿಜ್ ಭೂಷಣ್ ವಿರುದ್ಧ ದೆಹಲಿ ಪೊಲೀಸರು ಎರಡು ಎಫ್ಐಆರ್ ದಾಖಲಿಸಿದ್ದಾರೆ. ಅಪ್ರಾಪ್ತೆ ನೀಡಿದ ದೂರಿನ ಅನ್ವಯ ಕೇಸ್ ದಾಖಲಿಸಲಾಗಿದೆ.‌ ಉಳಿದ ಮಹಿಳಾ ಕುಸ್ತಿಪಟುಗಳು ನೀಡಿದ ದೂರಿನ ಮೇಲೆ ಎರಡನೇ ಎಫ್ಐಆರ್ ದಾಖಲಿಸಲಾಗಿದೆ. ಸುಪ್ರೀಂ ಕೋರ್ಟ್ ನೀಡಿದ ನೋಟೀಸ್ ಬೆನ್ನಲ್ಲೇ ಈ ಕೇಸ್ ದಾಖಲಿಸಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...