ಕೂಡ್ಲಿಗಿ ಪ್ರಚಾರದ ವೇಳೆ ಕುಸಿದು ಬಿದ್ದ ಸಿದ್ದರಾಮಯ್ಯ..!

suddionenews
1 Min Read

ಮತದಾನ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳು ಪ್ರಚಾರದಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ಪ್ರತಿ ಜಿಲ್ಲೆಗೂ ತೆರಳಿ ತಮ್ಮ ತಮ್ಮ ಅಬ್ಯರ್ಥಿಗಳ ಪರವಾಗಿ ಪ್ರಚಾರ ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಅವರು ಕೂಡ ಬಿಸಿಲು ಎನ್ನದೆ ತಮ್ಮ ಪ್ರಚಾರವನ್ನು ಮುಂದುವರೆಸಿದ್ದಾರೆ. ಈ ವೇಳೆ ಸುಸ್ತಾಗಿ ಕುಸಿದು ಬಿದ್ದಿರುವ ಘಟನೆ ನಡೆದಿದೆ.

ಇಂದು ಸಿದ್ದರಾಮಯ್ಯ ಅವರು ಕೂಡ್ಲಗಿಯಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಹೆಲಿಕಾಪ್ಟರ್ ಮೂಲಕ ಸಿದ್ದರಾಮಯ್ಯ ಅವರು ಕೂಡ್ಲಗಿಯನ್ನು ತಲುಪಿದ್ದಾರೆ. ಬಳಿಕ ಕಾರಿನಲ್ಲಿ ಸಂಚಾರ ಮಾಡಿದ್ದಾರೆ. ಪ್ರಚಾರಕ್ಕೆಂದು ಕಾರಿನಿಂದ ಇಳಿಯುವಾಗ ಸುಸ್ತಾಗಿ ಅಲ್ಲಿಯೇ ಕುಸಿದು ಬಿದ್ದಿದ್ದಾರೆ. ಜೊತೆಯಲ್ಲಿದ್ದವರು ತಕ್ಷಣ ಅವರನ್ನು ಕೂರಿಸಿ, ಹಾರೈಕೆ ಮಾಡಿದ್ದಾರೆ.

ಕೂಡ್ಲಿಗಿಯ ಕಾಂಗ್ರೆಸ್ ಅಭ್ಯರ್ಥಿ, ಡಾ ಎನ್ ಟಿ ಶ್ರೀನಿವಾಸ್ ಪರ ಪ್ರಚಾರ ನಡೆಸಲು ಸಿದ್ದರಾಮಯ್ಯ ಅವರು ಕೂಡ್ಲಗಿಗೆ ಹೋಗಿದ್ದರು. ಆದ್ರೆ ಪ್ರಚಾರದ ವೇಳೆ ಈ ರೀತಿಯ ಅವಘಡ ಸಂಭವಿಸಿದೆ. ಮೇ 10 ಮತದಾನ ಇರುವ ಕಾರಣ ಜನರಿಗೆ ಮತ್ತಷ್ಟು ಹತ್ತಿರವಾಗಲೂ ರಾಜಕೀಯ ಪಕ್ಷಗಳು ಸಾಕಷ್ಟು ಪ್ರಯತ್ನ ನಡೆಸುತ್ತಿವೆ. ಹೀಗಾಗಿ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿವೆ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks