Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗ ದಳ ಬ್ಯಾನ್ ಉಲ್ಲೇಖ : ಶೋಭಾ, ಸುನೀಲ್ ಸೇರಿದಂತೆ ಬಿಜೆಪಿ ನಾಯಕರು ಆಕ್ರೋಶ..!

---Advertisement---

 

 

ನಿನ್ನೆಯೆಲ್ಲಾ ಬಿಜೆಪಿ ಪಕ್ಷ ಪ್ರಣಾಳಿಕೆ ಬಿಡುಗಡೆ ಮಾಡಿತ್ತು. ಇಂದು ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ರಿಲೀಸ್ ಮಾಡಿ, ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಣಾಳಿಕೆ ಬಿಡುಗಡೆ ಮಾಡಿ, ಐದು ಗ್ಯಾರಂಟಿಯನ್ನು ನೀಡಿದೆ. ಅದರಲ್ಲಿ ಭಜರಂಗದಳ ಹಾಗೂ ಪಿಎಫ್ಐ ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುವ ಸಂಘಟನೆಗಳನ್ನು ನಿಷೇಧ ಮಾಡುವ ನಿರ್ಧಾರವನ್ನು ಸೇರಿಸಿದ್ದಾರೆ.

ಈ ನಿರ್ಧಾರಕ್ಕೆ ಬಿಜೆಪಿ ನಾಯಕರು ಕೆರಳಿ ಕೆಂಡವಾಗಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿದ್ದು, ವಿನಾಶಕಾಲೇ ವಿಪರೀತ ಬುದ್ಧಿ ಎಂಬ ಮಾತಿದೆ‌. ಅದನ್ನು ಇಂದು ಕಾಂಗ್ರೆಸ್ ಯೋಚನೆ ಮಾಡ್ತಿದೆ. ಪಿಎಫ್ಐ ಅನ್ನು ಈಗಾಗಲೇ ಕೇಂದ್ರ ಸರ್ಕಾರವೇ ಬ್ಯಾನ್ ಮಾಡಿದೆ. ಪಿಎಫ್ಐ ಜೊತೆಗೆ ಭಜರಂಗದಳ ಬ್ಯಾನ್ ಮಾಡ್ತಾರೆ ಅಂತ ಹೇಳ್ತಿದ್ದಾರೆ. ಕಾಂಗ್ರೆಸ್ ಟಾರ್ಗೆಟ್ ಇರುವುದು ಪಿಎಫ್ಐ ಅಲ್ಲ ಭಜರಂಗದಳ. ಈ ಹಿಂದೆ ಮೂರು ಬಾರಿ RSS ನ ಕೂಡ ಬ್ಯಾನ್ ಮಾಡಿತ್ತು. ಭಜರಂಗದಳ ಬ್ಯಾನ್ ಮಾಡಿ ನಿಮ್ಮ ಶಕ್ತಿ ತೋರಿಸಿ. ಏನು ಮಾಡ್ತೀರ ಅಂತ ನಾವೂ ನೋಡ್ತೀವಿ ಎಂದಿದ್ದಾರೆ.

ಇಂಧನ ಸಚಿವ ಸುನೀಲ್ ಕುಮಾರ್ ಆಕ್ರೋಶ ಹೊರ ಹಾಕಿದ್ದು, “ತನ್ನ ಪ್ರಣಾಳಿಕೆಯಲ್ಲಿ ಭಜರಂಗದಳವನ್ನು ನಿಷೇಧಿಸುವುದು ಸೇರಿದಂತೆ ಕಾನೂನು ಕ್ರಮ ತೆಗೆದುಕೊಳ್ಳುವ ವಿಚಾರವನ್ನು @INCKarnataka ಪ್ರಸ್ತಾಪಿಸಿದೆ.
@DKShivakumar ಹಾಗೂ @siddaramaiah ನವರೇ, ನಾವು #PFI ನಿಷೇಧ ಮಾಡಿದ್ದೇವೆಂಬ ಸಂಕಟ ಹಾಗೂ ದ್ವೇಷವನ್ನು ಭಜರಂಗದಳ ನಿಷೇಧದ ಮೂಲಕ ತೀರಿಸಿಕೊಳ್ಳಲು ಹೊರಟಿದ್ದೀರಾ?. ನಿಮ್ಮ ಹಿಂದು ವಿರೋಧಿ ನಿಲುವಿಗೆ ಧಿಕ್ಕಾರ. ಭಜರಂಗದಳ ಎನ್ನುವುದು ಸಮಾಜ ವಿರೋಧಿ ಸಂಘಟನೆಯಲ್ಲ.
ಹಿಂದು ಸಮಾಜದ ರಕ್ಷಣೆಗಾಗಿ, ಗೋಮಾತೆಯ ಹಿತಕ್ಕಾಗಿ, ಹಿಂದು ಸೋದರಿಯರ ಮಾನ ಸಮ್ಮಾನ ಸಂರಕ್ಷಣೆಗಾಗಿ ಎಂಥ ತ್ಯಾಗಕ್ಕೂ ಸಿದ್ದವಾಗಿರುವ ಕಾರ್ಯಕರ್ತರ ಪಡೆ. ಮುಸ್ಲಿಂ‌ ಓಲೈಕೆಗಾಗಿ ಭಜರಂಗದಳ ನಿಷೇಧಿಸುತ್ತೇವೆಂಬ ದಾಷ್ಟ್ಯವೇ ? ಎಂದು ಟ್ವೀಟ್ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...