Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ನನಗೀಗ 61 ವರ್ಷ.. ಯಾರೂ ಶತ್ರುಗಳಿಲ್ಲ : ಪ್ರತಾಪ್ ಸಿಂಹ ಮಾತಿಗೆ ಶಿವಣ್ಣ ಪ್ರತಿಕ್ರಿಯೆ

---Advertisement---

 

 

ಶಿವಮೊಗ್ಗ: ಹ್ಯಾಟ್ರಿಕ್ ಹೀರೋ ಶಿವ ರಾಜ್‍ಕುಮಾರ್ ಸದ್ಯ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ. ಮಧು ಬಂಗಾರಪ್ಪಗೆ ಕಾಂಗ್ರೆಸ್ ನಿಂದ ಟಿಕೆಟ್ ಸಿಕ್ಕಿರುವುದು ಹಾಗೂ ಗೀತಾ ಅವರು ಕೂಡ ಕಾಂಗ್ರೆಸ್ ಸೇರ್ಪಡೆಯಾಗಿರುವ ಕಾರಣ ಶಿವಣ್ಣ ಕಾಂಗ್ರೆಸ್ ಪರ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ನಿನ್ನೆಯೆಲ್ಲಾ ಸಿದ್ದರಾಮಯ್ಯ ಅವರ ಪರವಾಗಿ ವರುಣಾದಲ್ಲಿ ಪ್ರಚಾರ ನಡೆಸಿ ಬಂದಿದ್ದಾರೆ.

ಸಿದ್ದರಾಮಯ್ಯ ಅವರ ಪರ ಶಿವಣ್ಣ ಪ್ರಚಾರ ಮಾಡಿದ್ದಕ್ಕೆ ಸಂಸದ ಪ್ರತಾಪ್ ಸಿಂಹ ಅವರು ವ್ಯಂಗ್ಯವಾಡಿದ್ದರು. ಇದಕ್ಕೆ ಸ್ವತಃ ಶಿವ ರಾಜ್‍ಕುಮಾರ್ ಅವರೇ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಶಿವಮೊಗ್ಗಕ್ಕೆ ಭೇಟಿ ನೀಡಿದ್ದು, ಮಧು ಬಂಗಾರಪ್ಪ ಪರ ಪ್ರಚಾರ ನಡೆಸಲಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಶಿವಣ್ಣ, ಅಲ್ಲಿ ನಾನು ಯಾರ ಬಗ್ಗೆಯೂ ಮಾತನಾಡಿಲ್ಲ. ಬರೀ ಪ್ರಚಾರದಲ್ಲಿ ಇದ್ದೇನೆ. ನನಗೀಗ 61 ವರ್ಷ. ಯಾರು ಶತ್ರುಗಳಿಲ್ಲ ಎಂದಿದ್ದಾರೆ.

ಸಂಸದ ಪ್ರತಾಪ್ ಸಿಂಹ ಹಾಗೂ ವಿ ಸೋಮಣ್ಣ ನನಗೆ ತುಂಬಾ ಆಪ್ತರು. ನಾನು ಎಲ್ಲರಿಗೂ ಗೌರವ ಕೊಡುತ್ತೇನೆ. ಪ್ರಚಾರ ಎನ್ನುವುದನ್ನು ಮಧು ಬಂಗಾರಪ್ಒಗಾಗಿ ಆರಂಭಿಸಿದ್ದೇನೆ. ರಾಹುಲ್ ಗಾಂಧಿಯವರನ್ನು ಮೀಟ್ ಮಾಡಬೇಕು ಎಂದುಕೊಂಡಿದ್ದೆ. ಮೀಟ್ ಮಾಡಿದ್ದೇನೆ. ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ಏರಿಯಾದಲ್ಲಿಯೇ ಇದ್ದಿದ್ದರಿಂದ ಅವರನ್ನು ಭೇಟಿ ಮಾಡಿದ್ದೆ. ಬೇರೆ ಪಕ್ಷದವರು ಪ್ರಚಾರಕ್ಕೆ ಕರೆದಿದ್ದರೆ ಖಂಡಿತ ಹೋಗುತ್ತಿದ್ದೆ ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment