Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೇ.8ರ ಸಂಜೆ ಬಹಿರಂಗ ಪ್ರಚಾರ ಅಂತ್ಯ :  ಎಲೆಕ್ಟ್ರಾನಿಕ್ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಕೂಡ ಪ್ರಚಾರಕ್ಕೆ ನಿರ್ಬಂಧ

Facebook
Twitter
Telegram
WhatsApp

 

ಮಾಹಿತಿ ಮತ್ತು ಫೋಟೋ ಕೃಪೆ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ.ಮೇ.08: 2023ರ‌ ಕರ್ನಾಟಕ ಸಾರ್ವತ್ರಿಕ ವಿಧಾನ ಸಭಾ ಚುನಾವಣೆಗೆ ಮೇ.10 ರಂದು ಮತದಾನ ನಡೆಯಲಿದೆ. ಮತದಾನಕ್ಕೂ 48 ಗಂಟೆಗಳ ಮುನ್ನ, ಬಹಿರಂಗ ಪ್ರಚಾರಕ್ಕೆ ನೀಡಿದ್ದ ಅವಕಾಶ ಅಂತ್ಯವಾಗಲಿದೆ.

ಈ ಹಿನ್ನಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ‌ ಮೇ.8‌ ಸಂಜೆ‌ 6 ಗಂಟೆಯಿಂದ ದೂರದರ್ಶನ, ಕೇಬಲ್ ಟಿ.ವಿ, ರೇಡಿಯೋ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಮಾಧ್ಯಮ ಹಾಗೂ ಫೇಸ್ ಬುಕ್,ಯೂಟೂಬ್, ಟ್ವಿಟರ್ ಸೇರಿದಂತೆ ಎಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗ ಪ್ರಚಾರ ನಡೆಸುವುದನ್ನು ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ.

ಆದೇಶ ಉಲ್ಲಂಘಿಸುವ ಯಾರೇ ವ್ಯಕ್ತಿ, ಪ್ರಜಾ ಪ್ರಾತಿನಿಧ್ಯ ಕಾಯ್ದೆ ಅನ್ವಯ ಎರಡು ವರ್ಷಗಳವರೆಗೆ ವಿಸ್ತರಿಸಬಹುದಾದ ಕಾರಾವಾಸ, ಜುಲ್ಮಾನೆ ಸಹಿತ ದಂಡನೆಗೆ ಗುರಿಯಾಗುತ್ತಾರೆ. ಆದ್ದರಿಂದ ರಾಜಕೀಯ ಪಕ್ಷಗಳು ಹಾಗೂ ಕಣದಲ್ಲಿರುವ ಅಭ್ಯರ್ಥಿಗಳು ಚುನಾವಣೆ ಸಂಬಂಧಿಸಿದ ವಿಷಯವನ್ನು ಯಾವುದೇ ಎಲೆಕ್ಟ್ರಾನಿಕ್ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ  ಪ್ರದರ್ಶಿಸತಕ್ಕದ್ದಲ್ಲ. ಇಂತಹ ಪ್ರಕರಣಗಳು ಕಂಡುಬಂದರೆ, ಚುನಾವಣಾಧಿಕಾರಿಗಳು ತಕ್ಷಣವೇ ಎಫ್‌.ಆರ್.ಐ ದಾಖಲಿಸಿ ಕ್ರಮಕೈಗೊಳ್ಳುವಂತೆ ಅವರು‌ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾಜ್ಯದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ..!

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನವಣೆ ಭಾರೀ ಕುತೂಹಲಕ್ಕೆ ಕಾರಣವಾಗಿತ್ತು. ಇಂದು ಮತ ಎಣಿಕೆ ಕಾರ್ಯದಲ್ಲಿ ಸದ್ಯದ ಸ್ಥಿತಿಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಮೂರು ಕ್ಷೇತ್ರದಲ್ಲೂ ಕಾಂಗ್ರೆಸ್ ಮುಂದಿದೆ. ಸಿಪಿ ಯೋಗೀಶ್ವರ್ : 45,982

ಸಿಪಿ ಯೋಗೀಶ್ವರ್ ವರ್ಸಸ್ ನಿಖಿಲ್ ಕುಮಾರಸ್ವಾಮಿ: ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಮುನ್ನಡೆ ..!

ಚನ್ನಪಟ್ಟಣ: ರಾಜ್ಯದಲ್ಲಿ ಇಂದು ಮೂರು ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಕಾರ್ಯ ಬೆಳಗ್ಗೆಯಿಂದಾನೇ ನಡೆಯುತ್ತಿದೆ. ಚನ್ನಪಟ್ಟಣ ಕ್ಷೇತ್ರ ಹೈವೋಲ್ಟೇಜ್ ಕ್ಷೇತ್ರವಾಗಿತ್ತು. ಎಲ್ಲರ ಚಿತ್ತ ಇಂದು ಅತ್ತ ಕಡೆಯೇ ನೆಟ್ಟಿದೆ‌. ಮತ ಎಣಿಕೆ ನಡೆಯುತ್ತಿದ್ದು, ಸದ್ಯದ

ಕಾಮಾಲೆ (ಜಾಂಡೀಸ್) ರೋಗ ಎಂದರೇನು ? ಇಲ್ಲಿದೆ ಉಪಯುಕ್ತ ಮಾಹಿತಿ….!

ಕಾಮಾಲೆ ಅಥವಾ ಜಾಂಡೀಸ್ ಎನ್ನುವುದು ಹತ್ತು ಹಲವು ರೋಗಗಳಲ್ಲಿ ಕಂಡು ಬರುವ ದೇಹ ಸ್ಥಿತಿಯಾಗಿರುತ್ತದೆ. ಹಲವಾರು ಕಾರಣಗಳಿಂದ ಕಾಮಾಲೆ ರೋಗ ಬರುವ ಸಾಧ್ಯತೆ ಇರುತ್ತದೆ. ಕಾಮಾಲೆ ಎಂಬ ಪದವು ಕಾಮ ಮತ್ತು ಲಾ ಎಂಬ

error: Content is protected !!