ಪ್ರವಾಸಿ ದೋಣಿಯೊಂದು ಮುಳುಗಿ ಕೇರಳದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ ಹೆಚ್ಚಾಗಿದೆ. ಇನ್ನು ಕಾರ್ಯಾಚರಣೆ ನಡೆಯುತ್ತಲೇ ಇದೆ. ಮಲಪ್ಪುರಂ ಜಿಲ್ಲೆಯ ತಾನೂರು ಬಳಿ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ 21 ಮಂದಿ ಸಾವನ್ನಪ್ಪಿದ್ದಾರೆ. ಈ ಘಟನೆಯಿಂದ ಕೇರಳ ಸಿಎಂ ಇಂದು ನಡೆಯಬೇಕಿದ್ದ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಿಕೊಂಡಿದ್ದಾರೆ.
ನಿನ್ನೆ ರಾತ್ರಿಯೇ ಈ ಘಟನೆ ನಡೆದಿದೆ. ಕತ್ತಲೆ ಇದ್ದಿದ್ದರಿಂದ ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿದೆ. ಆದರೂ ಹಲವರನ್ನು ಟಾರ್ಚ್ ಸಹಾಯದ ಮೂಲಕ ರಕ್ಷಣೆ ಮಾಡಲಾಗಿದೆ. ದೋಣಿಯಲ್ಲಿ 40 ಜನ ಪ್ರಯಾಣ ಮಾಡುತ್ತಿದ್ದರು ಎನ್ನಲಾಗಿದೆ. ಅದರಲ್ಲಿ 21 ಜನ ಸಾವನ್ನಪ್ಪಿದ್ದಾರೆ. ರಾತ್ರಿ ಅಪಘಾತ ನಡೆದಿದ್ದರಿಂದ ರಕ್ಷಣೆ ಮಾಡಲು ಕಷ್ಟವಾಗಿದೆ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಕೇರಳದ ಸಚಿವ ಅಬ್ದುರಹಮಾನ್ ತಿಳಿಸಿದ್ದಾರೆ.
ಇನ್ನು ಈ ಘಟನೆಗೆ ಪ್ರಧಾನಿ ಮೋದಿ ಅವರು ಕೂಡ ಸಂತಾಪ ತಿಳಿಸಿದ್ದಾರೆ. ಕೇಂದ್ರ ಸಚಿವ ಅಮಿತ್ ಶಾ ಅವರು ಘಟನೆಗೆ ಕಂಬನಿ ಮಿಡಿದಿದ್ದಾರೆ. ಇನ್ನು ಪ್ರಧಾನಿ ಮೋದಿ ಅವರು ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.