ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಚಿತ್ರದುರ್ಗ, ಮೇ.08) : ರಾಜ್ಯದಲ್ಲಿ ಕೊನೆಯ ಸ್ಥಾನದಲ್ಲಿದ್ದ ಚಿತ್ರದುರ್ಗ ಜಿಲ್ಲೆ ಈ ಬಾರಿಯ ಹತ್ತನೆ ತರಗತಿ ಫಲಿತಾಂಶದಲ್ಲಿ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತಂದಿರುವುದಕ್ಕೆ ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಅತೀವ ಹರ್ಷ ವ್ಯಕ್ತಪಡಿಸಿದರು.
ಫಲಿತಾಂಶ ಪ್ರಕಟವಾದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಶಿಕ್ಷಕರು, ಶಿಕ್ಷಣ ಇಲಾಖೆ ಅಧಿಕಾರಿಗಳ ಪರಿಶ್ರಮವು ಇದರಲ್ಲಿ ಅಡಗಿದೆ. ನಾನು ವಿಧಾನಪರಿಷತ್ ಸದಸ್ಯನಾದ ತಕ್ಷಣ ಪರೀಕ್ಷೆಗೂ ಮುನ್ನ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಪಿ.ಯು.ಕಾಲೇಜಿನ ಪ್ರಾಂಶುಪಾಲರುಗಳ ಸಭೆ ನಡೆಸಿ ಶಿಕ್ಷಣದ ಗುಣಮಟ್ಟ ಹೆಚ್ಚಳ, ಸಮಯಕ್ಕೆ ಸರಿಯಾಗಿ ಮಕ್ಕಳಿಗೆ ಪಠ್ಯಪುಸ್ತಕಗಳ ವಿತರಣೆಯಾಗಬೇಕು ಎಂದು ಸೂಚಿಸಿದ್ದೆ.
ಮೂರು ಸಭೆಗಳನ್ನು ನಡೆಸಲಾಗಿತ್ತು.
ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ, ಡಿ.ಡಿ.ಪಿ.ಐ. ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆ ಕೂಡ ಕರೆದಿದ್ದೆ. ವಿಷಯ ತಜ್ಞರುಗಳನ್ನು ಕರೆಸಿ ಎಲ್ಲಾ ತಾಲ್ಲೂಕಿನಲ್ಲಿಯೂ ಶಿಕ್ಷಕರುಗಳಿಗೆ ಕಾರ್ಯಾಗಾರ ನಡೆಸಿ ಮೊದಲು ಅವರಿಗೆ ಟೆಸ್ಟ್ ನೀಡಿದ್ದರಿಂದ ಇಂದು ಎಸ್.ಎಸ್.ಎಲ್.ಎಲ್.ಪರೀಕ್ಷೆಯಲ್ಲಿ ಚಿತ್ರದುರ್ಗ ಜಿಲ್ಲೆ ರಾಜ್ಯಕ್ಕೆ ಟಾಪ್ ಆಗಿದೆ. ಇದಕ್ಕಿಂತಲೂ ಖುಷಿ ಇನ್ನೇನು ಬೇಕು ಎಂದರು.