ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ, (ಮೇ.08) : ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಸೋಮವಾರ ಪ್ರಕಟಗೊಂಡಿದ್ದು, ಚಿತ್ರದುರ್ಗ ಜಿಲ್ಲೆ ಶೇ.96.8ರಷ್ಟು ದಾಖಲೆಯ ಫಲಿತಾಂಶದೊಂದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ.
ಈ ಫಲಿತಾಂಶದಲ್ಲಿ ಚಳ್ಳಕೆರೆ ತಾಲ್ಲೂಕು ಶೇ.98.2 ರಷ್ಟು ಫಲಿತಾಂಶ ಪಡೆಯುವ ಮೂಲಕ ಮೊದಲ ಸ್ಥಾನಗಳಿಸಿದೆ.
ಉಳಿದಂತೆ ಮೊಳಕಾಲ್ಮುರು ಶೇ.97.8, ಹಿರಿಯೂರು ಶೇ.95.6, ಹೊಸದುರ್ಗ ಶೇ.94.9, ಚಿತ್ರದುರ್ಗ ಶೇ.94.6 ಹಾಗೂ ಹೊಳಲ್ಕೆರೆ ತಾಲ್ಲೂಕು ಶೇ.94.3 ಫಲಿತಾಂಶ ಪಡೆದಿದೆ.