ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಮಳೆ ಜೋರಾಗಿದೆ. ನಾಳೆ ಮತದಾನ ನಡೆಯಲಿದೆ. ಮತದಾನಕ್ಕೆ ಮಳೆಯೂ ಅಡ್ಡಿಯಾಗುವ ಸಾಧ್ಯತೆ ಇದೆ. ಕಳೆದ ಕೆಲ ದಿನಗಳಿಂದ ಆಗೊಮ್ಮೆ ಈಗೊಮ್ಮೆ ಮಳೆ ತಂಪೆರೆಯುತ್ತಿದ್ದಾನೆ. ಮತದಾನ ದಿನ ಅಂದ್ರೆ ನಾಳೆಯೂ ಮಳೆ ಬರುವ ಸೂಚನೆ ನೀಡಿದೆ ಹವಮಾನ ಇಲಾಖೆ.
ಮೇ 10ರಿಂದ 12ರ ತನಕ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ. ಮತದಾನ ಮಾಡುವಾಗ ಅಥವಾ ಹೊರಗೆ ಹೊರಡುವಾಗ ಸ್ವಲ್ಪ ಎಚ್ಚರಿಕೆಯಿಂದ ಇರಲು ಹವಮಾನ ಇಲಾಖೆ ತಿಳಿಸಿದ್ದಾರೆ.
ಇನ್ನು ಬಂಗಾಳ ಕೊಲ್ಲಿಯಲ್ಲಿ ಚಂಡ ಮಾರುತ ಉಂಟಾಗಿದೆ. ಇದರ ಎಫೆಕ್ಟ್ ರಾಜ್ಯದಲ್ಲೂ ಇರಲಿದೆ. ಹೀಗಾಗಿ ಐದು ದಿನಗಳ ಕಾಲ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.