ಚಿತ್ರದುರ್ಗದ ಸಾರ್ವಜನಿಕರಿಗೆ ಮಹತ್ವದ ಮಾಹಿತಿ : ಮೇ.13ರ ರಂದು ಮತ ಎಣಿಕೆ, ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ

1 Min Read

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ, (ಮೇ.12) : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ- 2023ರ ಹಿನ್ನಲೆಯಲ್ಲಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮೇ.13 ರಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜು ಹೊಸಕಟ್ಟಡದಲ್ಲಿ ಮತ ಎಣಿಕೆ ನಡೆಯಲಿದೆ.

ನಗರದ ಬಿ.ಡಿ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿರುವುದರಿಂದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ನಗರದಲ್ಲಿ ಸಂಚರಿಸಲಿರುವ ಕೆ.ಎಸ್.ಆರ್.ಟಿ.ಸಿ, ಖಾಸಗಿ ಬಸ್ ಮತ್ತು ಇತರ ವಾಹನಗಳನ್ನು ಬದಲಿ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಆದೇಶಿಸಿದ್ದಾರೆ.

ನಗರದ ಚಳ್ಳಕೆರೆ ಕ್ರಾಸ್‌ ನಿಂದ ಮದಕರಿ ವೃತ್ತದ ಕಡೆಗೆ ನಗರದ ಒಳಗೆ ಪ್ರವೇಶಿಸುವ ವಾಹನಗಳು ರಾಷ್ಟ್ರೀಯ ಹೆದ್ದಾರಿ-4 ರ ಸರ್ವಿಸ್ ರಸ್ತೆಯಲ್ಲಿ ಸಂಚರಿಸಿ ತುರುವನೂರು ರಸ್ತೆ ಅಥವಾ ಮೆದೇಹಳ್ಳಿ ರಸ್ತೆಯ ಮುಖಾಂತರ ನಗರದ ಒಳಗೆ ಪ್ರವೇಶಿಸುವುದು ಉಳಿದಂತೆ ಎಲ್ಲಾ ವಾಹನಗಳು ಯಥಾ ಪ್ರಕಾರ ಸಂಚರಿಸುವುದು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *