ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 87220 22817
ಚಿತ್ರದುರ್ಗ,(ಮೇ.15) : ರಾಜ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರದಲ್ಲಿ ಲಿಂಗಾಯತ ಶಾಸಕರಲ್ಲಿ ಒಬ್ಬರನ್ನು ಮುಖ್ಯಮಂತ್ರಿ ಅಥವಾ ಉಪ ಮುಖ್ಯಮಂತ್ರಿಯನ್ನಾಗಿ ಮಾಡುವಂತೆ ಕೆಪಿಸಿಸಿ ಅಧ್ಯಕ್ಷರನ್ನು ಅಖಿಲ ಭಾರತ ವೀರಶೈವ ಮಹಾ ಸಭಾದ ಚಿತ್ರದುರ್ಗ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಹೇಶ್ ಒತ್ತಾಯಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಈ ಚುನಾವಣೆಯಲ್ಲಿ 54 ಜನ ಲಿಂಗಾಯತ ಶಾಸಕರು ಗೆಲುವನ್ನು ಸಾಧಿಸಿದ್ದಾರೆ. ಇದರಲ್ಲಿ ಕಾಂಗ್ರೆಸ್‍ನಿಂದ 34, ಬಿಜೆಪಿಯಿಂದ 18 ಜೆಡಿಎಸ್‍ನಿಂದ 02 ಇತರೆ ಇಬ್ಬರು ಗೆಲುವನ್ನು ಸಾಧಿಸಿದ್ದಾರೆ.
ಇದರಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚಿನ ಶಾಸಕರನ್ನು ಗೆದ್ದು ಅಧಿಕಾರವನ್ನು ಹಿಡಿಯಲು ಮುಂದಾಗಿದೆ. ವಿರೇಂದ್ರ ಪಾಟೀಲ್‍ರವರು ಕಾಂಗ್ರೆಸ್‍ನಿಂದ ಲಿಂಗಾಯತ ಮುಖ್ಯಮಂತ್ರಿಗಳಾಗಿದ್ದರು. ಆದ ಮೇಲೆ ಯಾರು ಆಗಿಲ್ಲ ಈಗ ಅವಕಾಶ ಇದೆ ಇದರಿಂದ ನಮ್ಮ ಲಿಂಗಾಯತ ಶಾಸಕರಲ್ಲಿ ಅವಕಾಶ ಇದ್ದರೆ ಯಾರನ್ನಾದರೂ ಒಬ್ಬರನ್ನು ಮುಖ್ಯಮಂತ್ರಿಗಳನ್ನಾಗಿ ಮಾಡಬೇಕು ಆಗಲಿಲ್ಲ ಪಕ್ಷದಲ್ಲಿ ಉಪ ಮುಖ್ಯಮಂತ್ರಿಯನ್ನಾದರೂ ಮಾಡುವಂತೆ ಕೆಪಿಸಿಸಿ ಅಧ್ಯಕ್ಷರನ್ನು ಆಗ್ರಹಿಸಿದ್ದಾರೆ.
ಈಗ ಲಿಂಗಾಯತ ಶಾಸಕರಲ್ಲಿ ಎಸ್.ಎಸ್.ಮಲ್ಲಿಕಾರ್ಜನ್, ಈಶ್ವರ್ ಖಂಡ್ರೆ, ಎಂ.ಬಿ.ಪಾಟೀಲ್, ಈಶ್ವರ ಖಂಡ್ರೆಯವರ ತಂದೆಯವರು ಅಖಲ ಭಾರತ ವೀರಶೈವ ಮಹಾಸಭಾವನ್ನು ಕಟ್ಟಿ ಬೆಳಸಿದ್ದಾರೆ. ಇವರಿಗೆ ಉಪ ಮುಖ್ಯಮಂತ್ರಿ ಸ್ಥಾನವನ್ನು ನಿಡಬೇಕೆಂದು ಮಹೇಶ್ ಒತ್ತಾಯಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಯುವ ಘಟಕದ ಅಧ್ಯಕ್ಷ ಕಾರ್ತಿಕ್, ವಾಣಿಜ್ಯ ಘಟಕದ ಉಪಾಧ್ಯಕ್ಷ ಟಿ.ದಯಾನಂದ ಪಾಟೀಲ್, ಖಜಾಂಚಿ ದಿವಾಕರ್ ಎಸ್.ಸಂಕೋಳ್, ಶಿವಾನಂದ ಅವರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.