Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಶಾರುಖ್ ಖಾನ್ ಪುತ್ರನ ಬಂಧನದ ವಿಚಾರಕ್ಕೆ ಟ್ವಿಸ್ಟ್ : ರಿಲೀಸ್ ಮಾಡಲು ಇಟ್ಟಿದ್ದು 25 ಕೋಟಿ ಡಿಮ್ಯಾಂಡ್ ಅಂತೆ..!

---Advertisement---

ಬಾಲಿವುಡ್ ಕಿಂಗ್ ಖಾನ್ ಶಾರುಖ್ ಖಾನ್ ಪುತ್ರ, ಆರ್ಯನ್ ಖಾನ್ ಬಂಧನವಾದಾಗ ಏನೆಲ್ಲಾ ಆಯ್ತು ಅನ್ನೋದು ಎಲ್ಲರಿಗೂ ಗೊತ್ತಿದೆ. ಇದೀಗ ಅದಕ್ಕೆ ಟ್ವಿಸ್ಟ್ ಸಿಕ್ಕಿದ್ದು, ರಿಲೀಸ್ ಮಾಡುವುದಕ್ಕೆ 25 ಕೋಟಿ ಡಿಮ್ಯಾಂಡ್ ಇಟ್ಟಿದ್ದರಂತೆ. ಈ ಸಂಬಂಧ NCB ಮುಂಬೈ ವಲಯದ ಮಾಜಿ‌ ನಿರ್ದೇಶಕ ಸಮೀರ್ ವಾಂಖೆಡೆ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿದೆ.

2021ರಲ್ಲಿ ಐಷರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಮಾಡುತ್ತಿದ್ದ ಆರೋಪದ ಮೇಲೆ ಆರ್ಯನ್ ಖಾನ್ ರನ್ನು ಬಂಧಿಸಲಾಗಿತ್ತು. 22 ದಿನಗಳ ಕಾಲ ಬಂಧನದ್ಲಿಡಲಾಗಿತ್ತು. ಈ ವೇಳೆ 25 ಕೋಟಿ ಹಣ ನೀಡದೆ ಹೋದರೆ ಡ್ರಗ್ಸ್ ಕೇಸಲ್ಲಿ ಸಿಕ್ಕಿ ಹಾಕಿಸುವುದಾಗಿ ಬೆದರಿಕೆ ಹಾಕಲಾಗಿತ್ತಂತೆ. ಈ ಮೊತ್ತ 18 ಕೋಟಿಗೆ ಇತ್ಯರ್ಥವಾಗಿತ್ತು ಎನ್ನಲಾಗಿದೆ. 50 ಲಕ್ಷದ ಟೋಕನ್ ಹಣವನ್ನು ಕೆ ಪಿ ಗೋಸ್ವಾಮಿ ಮತ್ತು ಅವರ ಸಹಾಯಕ ಸ್ಯಾನ್ ವಿಲ್ ಡಿಸೋಜಾ ತೆಗೆದುಕೊಂಡಿದ್ದರು ಎಂದು ಎಫ್ಐಆರ್ ನಲ್ಲಿ ದಾಖಲಿಸಲಾಗಿದೆ.

ಆರ್ಯನ್ ಖಾನ್ ನನ್ನು ಜೈಲಿಗೆ ಕಳುಹಿಸಿದಾಗ ಶಾರುಖ್ ಖಾನ್ ದಂಪತಿ ಟೆನ್ಶನ್ ಅನುಭವಿಸಿದ್ದರು. ಮಗನನ್ನು ತಪ್ಪಿತಸ್ಥ ಅಲ್ಲ ಎಂದು ಪ್ರೂವ್ ಮಾಡಿ ಕರೆದುಕೊಂಡು ಬರಲು ಸಾಕಷ್ಟು ಸಮಯವೇ ಬೇಕಾಯಿತು. ಜಾಮೀನು ಪಡೆಯುವುದಕ್ಕೆ ಸಾಕಷ್ಟು ಕಷ್ಟಪಟ್ಟರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment