ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದಾರೆ. ಕಾಶ್ಮೀರದಲ್ಲಿ ಪಾಕಿಸ್ತಾನ ತನ್ನ ಉಪಟಳ ನಿಲ್ಲಿಸದಿದ್ದರೆ ಇನ್ನಷ್ಟು ಸರ್ಜಿಕಲ್ ಸ್ಟ್ರೈಕ್ ನಡೆಸುವುದಾಗಿ ಗೃಹ ಸಚಿವ ಅಮಿತ್ ಶಾ ಎಚ್ಚರಿಕೆ ನೀಡಿದ್ದಾರೆ.
ನಾವು ದಾಳಿಯನ್ನು ಸಹಿಸುವುದಿಲ್ಲ ಎಂದು ಈಗಾಗಲೇ ಸಾಬೀತು ಮಾಡಿ ತೋರಿಸಿದ್ದೇವೆ. ಗಡಿಯಲ್ಲಿ ನಿಯಮಗಳನ್ನು ಉಲ್ಲಂಘಿಸಿದರೆ ಭವಿಷ್ಯದಲ್ಲಿ ಪಾಕ್ ಹೆಚ್ಚಿನ ದಾಳಿಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
https://twitter.com/ANI/status/1448571885768245250?t=HzNjhi9qKyrjKDBSfzWCUQ&s=19
ಗೋವಾದಲ್ಲಿ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯಕ್ಕೆ ಶಿಲಾನ್ಯಾಸ ಮಾಡಿ, ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ನೇತೃತ್ವದಲ್ಲಿ ಸರ್ಜಿಕಲ್ ಸ್ಟ್ರೈಕ್ ಒಂದು ಐತಿಹಾಸಿಕ ಘಟನೆ ಎಂದು ಅವರು ಗುರುವಾರ ಮಾಧ್ಯಮಗಳಿಗೆ ತಿಳಿಸಿದರು.
ಈ ಮೂಲಕ, ಯಾರಾದರೂ ಭಾರತದ ಗಡಿ ತಂಟೆಗೆ ಬಂದರೆ ನಮ್ಮ ಪ್ರತಿಕ್ರಿಯೆ ಹೇಗಿರುತ್ತದೆ ಎಂದು ತೋರಿಸಿದ್ದೇವೆ. ಈ ಮೊದಲು ನಾವು ಚರ್ಚಿಸಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುತ್ತಿದ್ದೆವು. ಆದರೆ ಈಗ ಹಾಗಲ್ಲ, ಏಟಿಗೆ ಎದಿರೇಟು, ದಾಳಿಗೆ ಪ್ರತಿಯಾಗಿ ದಾಳಿ ಮಾಡುತ್ತೇವೆ ಎಂದರು.
ಭಾರತದ ಉರಿ, ಪಠಾಣ್‌ಕೋಟ್ ಮತ್ತು ಗುರುದಾಸಪುರದಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ 2016 ರ ಸೆಪ್ಟೆಂಬರ್‌ನಲ್ಲಿ ಸರ್ಜಿಕಲ್ ಸ್ಟ್ರೈಕ್ ನಡೆಸಿತು.
ದಾಳಿಯಲ್ಲಿ ಭಾರತೀಯ ಸೈನಿಕರು ಹಲವಾರು ಭಯೋತ್ಪಾದಕ ಶಿಬಿರಗಳನ್ನು ನಾಶಪಡಿಸಿದರು. ಉರಿ ದಾಳಿಯ 11 ದಿನಗಳ ನಂತರ 2016 ರ ಸೆಪ್ಟೆಂಬರ್ 29 ರಂದು ಸರ್ಜಿಕಲ್ ಸ್ಟ್ರೈಕ್ ನಡೆಯಿತು ಎಂದು ಹೇಳಿದರು.