ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ 310 ಜನರಲ್ಲಿ ಸೋಂಕು ದೃಢಪಟ್ಟಿದೆ.
ಇನ್ನು ಕಳೆದ 24 ಗಂಟೆಯಲ್ಲಿ 23933 ಜನರಿಗೆ ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 91034 RTPCR ಟೆಸ್ಟ್ ಸೇರಿದಂತೆ ಒಟ್ಟು 114967 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 310 ಜನರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. 148 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.
ಉಳಿದಂತೆ ಕೊರೊನಾ ಜಯಿಸಿ 347 ಮಂದಿ ಗುಣಮುಖರಾದ್ರೆ, ಹಬ್ಬದ ದಿನ 6 ಕುಟುಂಬಗಳಿಗೆ ಸಾವಿನ ನೋವು ಕಾಡಿದೆ. ಕಳೆದ 24 ಗಂಟೆಯಲ್ಲಿ ಕೊರೊನಾದಿಂದ 6 ಜನ ಸಾವನ್ನಪ್ಪಿದ್ದಾರೆ.