Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

CET ಬರೆಯಲು ಬರುವ ವಿದ್ಯಾರ್ಥಿಗಳಿಗೆ ಪ್ರಮಾಣವಚನ ಕಾರ್ಯಕ್ರಮದಿಂದ ತೊಂದರೆಯಾಗುತ್ತಾ..? ಪರಿಹಾರದ ಕ್ರಮವೇನು..?

---Advertisement---

ಬೆಂಗಳೂರಿನಲ್ಲಿ ನಾಳೆ ಸಿಇಟಿ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಜೊತೆಗೆ ನಾಳೆಯೇ ನೂತನ ಸರ್ಕಾರ ರಚನೆ ಮಾಡಲಿದ್ದು, ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಕೂಡ ಇದೆ. ಹೀಗಾಗಿ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಾ ಅಂತ ಶಿಕ್ಷಕರು, ಪೋಷಕರು ಆತಂಕದಲ್ಲಿದ್ದರು. ಆದರೆ ಕೆಇಎ ಯಾವುದೇ ತೊಂದರೆಯಾಗದಂತೆ ಪರಿಹಾರವನ್ನು ಕಂಡು ಕೊಂಡಿದೆ.

ಟ್ರಾಫಿಕ್ ಕಿರಿಕಿರಿಯನ್ನು‌ ತಪ್ಪಿಸಲು ವಿದ್ಯಾರ್ಥಿಗಳಿಗೆ ಬೆಳಗ್ಗೆ 8.30ಕ್ಕೆಲ್ಲಾ ಪರೀಕ್ಷಾ ಕೇಂದ್ರದಲ್ಲಿ ಇರಲು ಸೂಚನೆ ನೀಡಲಾಗಿದೆ. ಒಂದು ವೇಳೆ ಬರುವಂತ ವಿದ್ಯಾರ್ಥಿಗಳಿಗೆ ರಸ್ತೆ ಮಧ್ಯೆಯೆ ಟ್ರಾಫಿಕ್ ಸಮಸ್ಯೆಯೋ, ಮತ್ತೊಂದೋ ಎದುರಾದರೆ ಅಲ್ಲಿಯೇ‌ಇರುವ ಸಂಚಾರಿ‌ ಪೊಲೀಸರ ಸಹಾಯ ಕೇಳಲು ಸೂಚನೆ ನೀಡಲಾಗಿದೆ. ಜೊತೆಗೆ ಸಂಚಾರಿ ಪೊಲೀಸರಿಗೂ ಕೆಇಎ ಸಹಾಯದ ಮನವಿ ಮಾಡಿಕೊಂಡಿದೆ.

ಇನ್ನು ಊಟೋಪಚಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳಿಗೆ ಬೇರೆ ಯಾವುದೇ ತೊಂದರೆಯಾಗಬಾರದೆಂದು ಕೆಇಎ ಮತ್ತು ಸೆಂಟ್ ಜೋಸೆಫ್ ಪಿಯು ಕಾಲೇಜಿನ ಅಧಿಕಾರಿಗಳು ಊಟದ ವ್ಯವಸ್ಥೆ ಮಾಡಿದ್ದಾರೆ. ಈಗಾಗಲೇ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದ ಮಾಹಿತಿ ಸೇರಿದಂತೆ, ಕೆಲವೊಂದು ಸೂಚನೆಗಳನ್ನು ನೀಡಲಾಗಿದೆ.

ಸಂಚಾರ ನಿಯಂತ್ರಣ ಕೋಣೆ ದೂರವಾಣಿ ಸಂಖ್ಯೆ-080-22943131 ಅಥವಾ 080-22943030 ಗೆ ಕರೆ ಮಾಡಿ ಮಾಹಿತಿ ನೀಡಲು ಸೂಚನೆ ನೀಡಲಾಗಿದೆ. ಪರೀಕ್ಷೆಗೆ ಬರಲು ಸಮಸ್ಯೆಯಾದಲ್ಲಿ ಈ ನಂಬರ್ ಗೆ ಕರೆ‌ಮಾಡಿ ಸಹಾಯ ಪಡೆಯಬಹುದಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...