ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಅವಹೇಳನಾಕಾರಿ ಪೋಸ್ಟ್ : ಹೊಸದುರ್ಗದ ಶಿಕ್ಷಕ ಅಮಾನತು

suddionenews
1 Min Read

ಚಿತ್ರದುರ್ಗ, (ಮೇ.20) : ಫೇಸ್‌ಬುಕ್‌ ನಲ್ಲಿ ಮುಖ್ಯಮಂತ್ರಿಗಳ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕಕನನ್ನು ಹೊಸದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿ ಎಲ್. ಜಯಪ್ಪ ಅಮಾನತು ಮಾಡಿ ಆದೇಶಿಸಿದ್ದಾರೆ.

ಹೊಸದುರ್ಗ ತಾಲ್ಲೂಕಿನ ಕಾನುಬೇನಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ
ಶಾಂತಮೂರ್ತಿ ಅಮಾನತ್ತುಗೊಂಡ ಶಿಕ್ಷಕ.

ಇಂದು ನೂತನ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ  ಕಳೆದ ಸರ್ಕಾರಗಳಲ್ಲಿ ಮುಖ್ಯಮಂತ್ರಿಗಳು ಮಾಡಿದ್ದ ಸಾಲಗಳ ವಿಚಾರವಾಗಿ ಪ್ರಸ್ತಾಪಿಸಿದ್ದರು.
ಈ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಕ ಶಾಂತಮೂರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುರಿತು ಎಲ್ಲಾ ಮುಖ್ಯಮಂತ್ರಿಗಳು ಮಾಡಿದ ಒಟ್ಟು ಸಾಲ 71,331 ಕೋಟಿಯಾದರೆ,  ಸಿದ್ದರಾಮಯ್ಯನವರು ಮಾಡಿದ ಸಾಲವೇ 2,42,000 ಕೋಟಿ ಆಗಿದೆ.

ಬಿಟ್ಟೆ ಭಾಗ್ಯ ಕೊಡದೆ ಇನ್ನೇನು ಎಂದು ಮುಖ್ಯಮಂತ್ರಿಗಳ ವಿರುದ್ಧ ಅವಹೇಳನೆ ಮಾಡಿರುವ ವಿಷಯವನ್ನು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಇವರ ವಿರುದ್ಧ ಜಿಲ್ಲಾಧಿಕಾರಿಗಳಿಗೆ ದೂರು ಬಂದ ಕಾರಣ, ಜಿಲ್ಲಾಧಿಕಾರಿಯವರ ಸೂಚನೆ ಮೇರೆಗೆ
ಡಿಡಿಪಿಐ ನಿರ್ದೇಶನದಂತೆ ಹೊಸದುರ್ಗ ಶಿಕ್ಷಣಾಧಿಕಾರಿ ಶಿಕ್ಷಕನನ್ನು ಅಮಾನತು ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *