Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಕೀರ್ತಿ ಆಸ್ಪತ್ರೆಯಲ್ಲಿ ಬಸವೇಶ್ವರರ ಪ್ರತಿಮೆ ಅನಾವರಣ

---Advertisement---

ಚಿತ್ರದುರ್ಗ, (ಮೇ.24) : ಬಸವಣ್ಣನವರ ವಚನಗಳು ಇಂದಿಗೂ ಪ್ರಸ್ತುತ ಅವರ ಕಾಯಕವೇ ಕೈಲಾಸ ತತ್ವವನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು. ಇದರಿಂದ ಸಮಾಜದ ಸ್ವಾಸ್ಥ್ಯ ಕಾಪಾಡಲು ಸಹಕಾರಿಯಾಗುತ್ತದೆ ಎಂದು ಡಾ. ಮಲ್ಲಿಕಾರ್ಜುನ ಕೀರ್ತಿ ಹೇಳಿದರು.

ನಗರದ ಪ್ರತಿಷ್ಠಿತ ಕೀರ್ತಿ ಆಸ್ಪತ್ರೆಯಲ್ಲಿ 12 ನೇ ಶತಮಾನದ ಕವಿ ಬಸವಣ್ಣನವರ ಪ್ರತಿಮೆಯನ್ನು ಆಸ್ಪತ್ರೆಯಲ್ಲಿ ಅವರು ಬಸವಣ್ಣನವರ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದರು.

ಆಸ್ಪತ್ರೆಯಲ್ಲಿ ಇಂದು ಹಬ್ಬದ ವಾತಾವರಣ ಮನೆ ಮಾಡಿತ್ತು. ಆಡಳಿತ ಮಂಡಳಿಯವರು, ಸಿಬ್ಬಂದಿ ಮತ್ತು ಸಾರ್ವಜನಿಕರು ಪ್ರತಿಮೆ ಅನಾವರದ ಕಾರ್ಯಕ್ರಮವನ್ನು ಸಡಗರ ಸಂಭ್ರಮದಿಂದ ಮಾಡಿದರು.

ಈ ಸಂದರ್ಭದಲ್ಲಿ ಡಾ.ಮಲ್ಲಿಕಾರ್ಜುನ ಕೀರ್ತಿ ಅವರ ಕುಟುಂಬ ಸೇರಿದಂತೆ, ಬಿಜೆಪಿ ಮುಖಂಡ ಅನಿತ್ ಕುಮಾರ್ ಮತ್ತವರ ಕುಟುಂಬವರ್ಗದವರು, ಬಸವೇಶ್ವರ ಆಸ್ಪತ್ರೆಯ ಡಾ.ಪಾಲಾಕ್ಷ, ಡಾ.ಗೀತಾ, ಡಾ. ಅರುಣಾ ಸೇರಿದಂತೆ ಅಪಾರ ಸಂಖ್ಯೆಯ ವೈದ್ಯವೃಂದದವರು ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...