Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ನಗರದ ಮಳೆ ಹಾನಿ ಪ್ರದೇಶಕ್ಕೆ ಡಿಸಿ ಭೇಟಿ: ತ್ವರಿತ ಪರಿಹಾರಕ್ಕೆ ಸೂಚನೆ

Facebook
Twitter
Telegram
WhatsApp

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಮೇ.25) : ಮಳೆಯಿಂದ ಹಾನಿಗೊಳಗಾದ ಚಿತ್ರದುರ್ಗ ನಗರದ ವಿವಿಧ ಬಡಾವಣೆಗಳಿಗೆ ಗುರುವಾರ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ, ಪರಿಶೀಲನೆ ನೀಡಿದರು.

ಚಿತ್ರದುರ್ಗ ನಗರದ ಒನಕೆ ಓಬವ್ವ ಕ್ರೀಡಾಂಗಣದ ರಸ್ತೆಯ ಬುದ್ಧನಗರ, ಕೆಹೆಚ್‍ಬಿ ಕಾಲೋನಿ ಸಮೀಪದ ಬಾಬು ಜಗಜೀವನ್ ರಾಂ ನಗರ, ಸಾಧಿಕ ನಗರ, ಎಪಿಎಂಸಿ ರಸ್ತೆ ಸೇರಿದಂತೆ ವಿವಿಧ ಬಡಾವಣೆಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಅವರು, ಮಳೆಯಿಂದ ಹಾನಿಗೊಳಗಾದ ಸಂತ್ರಸ್ಥರಿಗೆ ಸರ್ಕಾರದ ನಿಯಮಾನುಸಾರ ತ್ವರಿತವಾಗಿ ಪರಿಹಾರ ವಿತರಣೆಗೆ ಸೂಚಿಸಿದರು.

ಮಳೆಯಿಂದಾಗಿ ನಗರದ ಚರಂಡಿಗಳು ಭರ್ತಿಯಾಗಿದ್ದು, ಚರಂಡಿಗಳು ಕಿರಿದಾಗಿರುವುದರಿಂದ ನೀರು ಸರಾಗವಾಗಿ ಹರಿದು ಹೋಗುತ್ತಿಲ್ಲ. ಹಾಗಾಗಿ ಚರಂಡಿಗಳನ್ನು ದೊಡ್ಡದಾಗಿ ಅಗಲೀಕರಣ ಮಾಡಿ ಚರಂಡಿ ನೀರು ಸರಾಗವಾಗಿ ಹರಿದುಹೋಗಲು ಶಾಶ್ವತ ಪರಿಹಾರದ ಕ್ರಮಕೈಗೊಳ್ಳಬೇಕು. ನೀರು ನುಗ್ಗಿರುವ ಮನೆಗಳನ್ನು ನಗರಸಭೆ ವತಿಯಿಂದ ಪರಿಶೀಲನೆ ನಡೆಸುವಂತೆ ತಿಳಿಸಿದರು.

ಚಿತ್ರದುರ್ಗ ನಗರದ ವಿವಿಧೆಡೆ ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುಳಿದಿದ್ದು, ಕೂಡಲೇ ಹೊಸದಾಗಿ ವಿದ್ಯುತ್ ಕಂಬಗಳನ್ನು ಅಳವಡಿಸಬೇಕು. ಸಾರ್ವಜನಿಕರ ಸುಗಮ ಸಂಚಾರಕ್ಕೆ ತೊಂದರೆಯಾಗದಂತೆ ಕೂಡಲೇ ತೆರವುಗೊಳಿಸುವ ಕಾರ್ಯಕ್ಕೆ ಮುಂದಾಗಬೇಕು ಎಂದು ಅರಣ್ಯ ಇಲಾಖೆ ಹಾಗೂ ಬೆಸ್ಕಾಂ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಪೂರ್ವ ಮುಂಗಾರು ಪ್ರಾರಂಭವಾಗಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಅರಣ್ಯ ಇಲಾಖೆ ಹಾಗೂ ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿ, ಶಿಥಿಲಗೊಂಡಿರುವ ವಿದ್ಯುತ್ ಕಂಬಗಳನ್ನು ತೆರವುಗೊಳಿಸಬೇಕು. ವಿದ್ಯುತ್ ಕಂಬಗಳಿಗೆ ಅಡಚಣೆಯಾಗುವ ರಂಬೆ, ಕೊಂಬೆಗಳನ್ನು ತೆರವುಗೊಳಿಸಿ, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮವಹಿಸಬೇಕು ಎಂದು ಹೇಳಿದರು.

ಬುದ್ಧನಗರ, ಸಾಧಿಕ್ ನಗರ, ಬಾಬು ಜಗಜೀವನ್‍ರಾಂ ನಗರದ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದರಿಂದ ಮನೆಯಲ್ಲಿದ್ದ ದಿನಸಿ ವಸ್ತುಗಳು ಜಲಾವೃತಗೊಂಡಿದ್ದವು. ಈ ಪ್ರದೇಶಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಕಿರಿದಾದ ಚರಂಡಿಗಳು, ಚರಂಡಿಯಲ್ಲಿ ಕಸಕಡ್ಡಿ ತುಂಬಿದ್ದರಿಂದ ನೀರು ಹೊರಬಂದು ಮನೆಗಳಿಗೆ ನುಗ್ಗಿದೆ. ಇದಕ್ಕೆ ನಗರಸಭೆ ಅಧಿಕಾರಿಗಳು ಹೊಣೆಗಾರರು ಎಂದು ಅಲ್ಲಿನ ನಿವಾಸಿಗಳು ದೂರು ನೀಡಿದರು.

ಇನ್ನೂ ಮುಂದೆ ರೀತಿ ಆಗದಂತೆ ಎಚ್ಚರವಹಿಸಿ ಕಾರ್ಯನಿರ್ವಹಿಸಬೇಕು ಎಂದು ನಗರಸಭೆ ಅಧಿಕಾರಿಗಳಿಗೆ ಸೂಚಿಸಿದ ಅವರು, ನೀರು ನುಗ್ಗಿದ ಮನೆಗಳಿಗೆ ಹಾಗೂ ಮನೆ ಹಾನಿ ಸಂತ್ರಸ್ಥರಿಗೆ ತ್ವರಿತವಾಗಿ ಪರಿಹಾರ ನೀಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ನಾಗವೇಣಿ, ನಗರಸಭೆ ಪೌರಾಯುಕ್ತ ಶ್ರೀನಿವಾಸ್, ಅರಣ್ಯ ಇಲಾಖೆ, ಬೆಸ್ಕಾಂ, ನಗರಸಭೆ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್

ರಾಜ್ಯದ ಗಮನ ಸೆಳೆಯಲು ನನ್ನ ಮೇಲೆ ಗೂಬೆ ಕೂರಿಸುತ್ತಿದ್ದಾರೆ : ಕುಮಾರಸ್ವಾಮಿಗೆ ಡಿಕೆಶಿ ಟಾಂಗ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಿನ್ನೆಯಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೆಸರು ಓಡಾಡುತ್ತಿದೆ. ಅವರೇ ಪೆನ್ ಡ್ರೈವ್ ಹಂಚಿರುವುದು ಅಂತ ಜೆಡಿಎಸ್ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ. ಕುಮಾರಸ್ವಾಮಿ ಅವರಿಗೆ

ವಿಶ್ವ ರೆಡ್‍ಕ್ರಾಸ್ ದಿನಾಚರಣೆ | ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಚಿತ್ರದುರ್ಗ ಮೇ. 08 :  ವಿಶ್ವ ರೆಡ್‍ಕ್ರಾಸ್ ದಿನಾಚರಣೆಯ ಅಂಗವಾಗಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಚಿತ್ರದುರ್ಗ ಶಾಖೆ ಹಾಗೂ ಎಸ್.ಜಿ.ಸುರಕ್ಷಾ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜು ಸಂಯುಕ್ತಾಶ್ರಯದಲ್ಲಿ ಮೇ. 8 ರ ಇಂದು ಕಾಲೇಜಿನಲ್ಲಿ

error: Content is protected !!