ಇಂದು ರೆಬೆಲ್ ಸ್ಟಾರ್ ಅಂಬರೀಶ್ ಅವರ ಹುಟ್ಟುಹಬ್ಬ. 71ನೇ ವರ್ಷದ ಹುಟ್ಟುಹಬ್ಬವಿಂದು. ಅಭಿಮಾನಿಗಳು, ಸೆಲೆಬ್ರೆಟಿಗಳು, ರಾಜಕಾರಣಿಗಳು ಅಂಬರೀಶ್ ಅವರನ್ನು ಈ ದಿನ ನೆನೆಯುತ್ತಿದ್ದಾರೆ. ಅವರ ಹುಟ್ಟುಹಬ್ಬಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಶುಭಕೋರುವ ಮೂಲಕ ನೆನಪಿಸಿಕೊಳ್ಳುತ್ತಿದ್ದಾರೆ.
ನಿಮ್ಮ ಬಾಲ್ಯದ ದಿನಗಳನ್ನು ಆಗಾಗ್ಗೆ ಹೇಳುತ್ತಿದ್ದಿರಿ.
ಬಾಲ್ಯದ ಆ ತುಂಟತನ ಅದು ನಿಮ್ಮಲ್ಲಿ ಕೊನೆವರೆಗೂ ಇತ್ತು.
ಹಾಗಾಗಿ ನಿಮ್ಮ ಹುಟ್ಟು ಹಬ್ಬ ಅದೊಂದು ಸಡಗರವಾಗಿರುತ್ತಿತ್ತು.
ಅದು ನಮಗಷ್ಟೇ ಅಲ್ಲ, ಅಭಿಮಾನಿಗಳ ಪಾಲಿಗೆ ನಿಜವಾದ ಹಬ್ಬ. ಭೌತಿಕವಾಗಿ ನಮ್ಮೊಂದಿಗೆ ನೀವು ಇದ್ದಿದ್ದರೆ, ಇಂದು 71ನೇ ವರ್ಷದ ಹುಟ್ಟು ಹಬ್ಬವನ್ನೂ ಅಭಿಮಾನಿಗಳ… pic.twitter.com/bYNyq4CKKt— Sumalatha Ambareesh 🇮🇳 ಸುಮಲತಾ ಅಂಬರೀಶ್ (@sumalathaA) May 28, 2023
ನಟಿ, ಸಂಸದೆ ಸುಮಲತಾ ಕೂಡ ತಮ್ಮ ಪತಿ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ. ಪ್ರತಿ ಹುಟ್ಟುಹಬ್ಬ, ವಾರ್ಷಿಕೋತ್ಸವಕ್ಕೆಲ್ಲಾ ಸುಮಲತಾ ಸ್ಪೆಷಲ್ ಆಗಿಯೇ ವಿಶ್ ಮಾಡುತ್ತಾರೆ. ಇವತ್ತು ಕೂಡ ಅಷ್ಟೇ ಸ್ಪೆಷಲ್ ಆಗಿ, ಅಂಬರೀಶ್ ಅವರ ಬಾಲ್ಯ ನೆನಪುಗಳನ್ನು ತಂದು ವಿಶ್ ಮಾಡಿದ್ದಾರೆ.
“ನಿಮ್ಮ ಬಾಲ್ಯದ ದಿನಗಳನ್ನು ಆಗಾಗ್ಗೆ ಹೇಳುತ್ತಿದ್ದಿರಿ.
ಬಾಲ್ಯದ ಆ ತುಂಟತನ ಅದು ನಿಮ್ಮಲ್ಲಿ ಕೊನೆವರೆಗೂ ಇತ್ತು.
ಹಾಗಾಗಿ ನಿಮ್ಮ ಹುಟ್ಟು ಹಬ್ಬ ಅದೊಂದು ಸಡಗರವಾಗಿರುತ್ತಿತ್ತು.
ಅದು ನಮಗಷ್ಟೇ ಅಲ್ಲ, ಅಭಿಮಾನಿಗಳ ಪಾಲಿಗೆ ನಿಜವಾದ ಹಬ್ಬ. ಭೌತಿಕವಾಗಿ ನಮ್ಮೊಂದಿಗೆ ನೀವು ಇದ್ದಿದ್ದರೆ, ಇಂದು 71ನೇ ವರ್ಷದ ಹುಟ್ಟು ಹಬ್ಬವನ್ನೂ ಅಭಿಮಾನಿಗಳ ಜೊತೆಯಾಗಿ ಮತ್ತಷ್ಟು ಅದ್ಧೂರಿಯಾಗಿ ಆಚರಿಸುತ್ತಿದ್ದೆವು.
ಮನೆ ಮುಂದೆ ಜನಸಾಗರ, ನಿಮ್ಮ ಆರ್ಭಟ, ಹಾಸ್ಯ ಪ್ರಜ್ಞೆಯ ಮಾತು, ರಾತ್ರಿ ಇಡೀ ಕಾಯುತ್ತಾ ನಿಂತಿದ್ದ ಅಭಿಮಾನಿಗಳ ಘೋಷಣೆ ಇನ್ನೂ ಹಾಗೆಯೇ ಇದೆ. ಇವತ್ತೂ ಕೂಡ ಅವೆಲ್ಲವೂ ನಿಮಗೆ ಶುಭಾಶಯ ಹೇಳುತ್ತಿವೆ. ಸ್ವೀಕರಿಸಿ.
ಹ್ಯಾಪಿ ಬರ್ತಡೇ ಮೈ ಅಂಬಿ. ಜತೆಗಿರದ ಜೀವ ಎಂದೆಂದಿಗೂ ಜೀವಂತ” ಎಂದು ಬರೆದುಕೊಂಡು ವಿಡಿಯೋ ಶೇರ್ ಮಾಡಿಕೊಂಡಿದ್ದಾರೆ.