ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುವುದೇ ಒಂದು ದೊಡ್ಡ ಸವಾಲಾಗಿದೆ. ಅದರಲ್ಲಿ ಬಸ್ ಪಾಸ್ ಯೋಜನೆಯನ್ನು ಜಾರಿ ಮಾಡಲಾಗಿದೆ. APL, BPL ಕಾರ್ಡು ಇದ್ದವರಿಗೆ ಮಾತ್ರ ಬಸ್ ಪಾಸ್ ಅಂತೆಲ್ಲಾ ಚರ್ಚೆ ಶುರುವಾಗಿತ್ತು. ಆದರೆ ಇದೀಗ ಎಲ್ಲಾ ಮಹಿಳೆಯರಿಗೂ ಉಚಿತ ಪ್ರಯಾಣ ಎಂದೇ ಘೋಷಣೆಯಾಗಿದೆ.
ಇಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಸರ್ಕಾರಿ ಬಸ್ ಗಳಲ್ಲಿ ಮಹಿಳರಯರು ಉಚಿತವಾಗಿ ಪ್ರಯಾಣಿಸಬಹುದು. ನಮ್ಮ ಪ್ರಣಾಳಿಕೆಯಲ್ಲಿ APL, BPL ಅಂತ ಏನು ಹೇಳಿಲ್ಲ. ಹೀಗಾಗಿ ರಾಜ್ಯಾದ್ಯಂತ ಮಹಿಳೆಯರು ಬಸ್ ಗಳಲ್ಲಿ ಪ್ರಯಾಣ ಮಾಡಬಹುದು ಎಂದಿದ್ದಾರೆ.
ಸಾರಿಗೆ ನಿಗಮಗಳ ಎಂಡಿಗಳ ಜೊತೆಯಲ್ಲಿ ಈ ಸಂಬಂಧ ಚರ್ಚೆ ನಡೆಸಿದ್ದೇವೆ. ಸಾಧಕ ಬಾಧಕಗಳ ಬಗ್ಗೆ ಸಮಾಲೋಚನೆ ನಡೆಸಲಾಗಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ವರದಿಯನ್ನು ಸಲ್ಲಿಸುತ್ತೇನೆ. ನಮ್ಮ ಸಾರಿಗೆ ಇಲಾಖೆ ದೇಶದಲ್ಲಿಯೇ ಪ್ರತಿಷ್ಠಿತ ಸಂಸ್ಥೆಯಾಗಿದೆ ಎಂದಿದ್ದಾರೆ.