ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, (ಮೇ.30) : ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕಾರ್ಮಿಕ ದಿನಾಚರಣೆ ಆಚರಿಸುವಂತಾದಾಗ ಮಾತ್ರ ಹುತಾತ್ಮ ಕಾರ್ಮಿಕರ ಆತ್ಮಕ್ಕೆ ಶಾಂತಿ ಸಿಕ್ಕಂತಾಗುತ್ತದೆ ಎಂದು ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ದಿ ಸಂಘದ ರಾಜ್ಯಾಧ್ಯಕ್ಷ ಜೆ. ಮಂಜುನಾಥ್ ಆಗ್ರಹಿಸಿದರು.
ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ದಿ ಸಂಘದಿಂದ ಕಾರ್ಮಿಕ ದಿನಾಚರಣೆ ಪ್ರಯುಕ್ತ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಬೃಹತ್ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಅಸಂಘಟಿತ ಕಾರ್ಮಿಕರಿಗೆ ಹೊಸ ಮಂಡಳಿ ರಚಿಸಿ ಅಗತ್ಯ ಸೌಲಭ್ಯಗಳನ್ನು ನೀಡುವಂತೆ ಕಾರ್ಮಿಕ ಸಚಿವ ಸಂತೋಷ್ ಲಾಡ್‍ರವರನ್ನು ಒತ್ತಾಯಿಸಿದ ಜೆ.ಮಂಜುನಾಥ್. ಕಾರ್ಮಿಕರ ಬೇಡಿಕೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕೆಂದು ಮನವಿ ಮಾಡಿದರು.
ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ದಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ವೈ.ಕುಮಾರ್ ಮಾತನಾಡುತ್ತ ನೊಂದಾಯಿತ ಕಟ್ಟಡ ಕಾರ್ಮಿಕರು ಸಹಜವಾಗಿ ಸಾವನ್ನಪ್ಪಿದಾಗ ನೀಡಲಾಗುವ 74 ಸಾವಿರ ರೂ.ಗಳ ಪರಿಹಾರವನ್ನು ಐದು ಲಕ್ಷ ರೂ.ಗಳಿಗೆ ಹೆಚ್ಚಿಸಬೇಕು.
ಮನೆಗಳ ನಿರ್ಮಾಣಕ್ಕಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮ ಮಾಡಬೇಕು. ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ಹೋಗುವ ಕಾರ್ಮಿಕರ ಮಕ್ಕಳಿಗೆ ಧನ ಸಹಾಯ, ಲ್ಯಾಪ್‍ಟಾಪ್ ನೀಡಬೇಕು. ಕಳಪೆ ಟೂಲ್ ಕಿಟ್‍ಗಳನ್ನು ನೀಡುವುದು ನಿಲ್ಲಬೇಕು ಎಂದು ರಾಜ್ಯ ಸರ್ಕಾರದ ಗಮನ ಸೆಳೆದರು.
ಕೆ.ಗೌಸ್‍ಪೀರ್, ನಾದಿಆಲಿ, ನರಸಿಂಹಸ್ವಾಮಿ ಎಂ.ಆರ್. ಈಶ್ವರಪ್ಪ ಡಿ. ಚಾಂದ್‍ಪೀರ್, ಇಮಾಮ್ ಮೊಹಿಮುದ್ದೀನ್, ಮುಜಿಬುಲ್ಲಾ, ವೈ.ಬಸವರಾಜ್, ಅಹಮದ್ ಷರೀಫ್ ಬಾಬು, ಮಹಂತೇಶಣ್ಣ ಇನ್ನು ಅನೇಕರು ಬೃಹತ್ ರಕ್ತದಾನ ಶಿಬಿರದಲ್ಲಿ ಹಾಜರಿದ್ದರು.