ಕುಸ್ತಿಪಟುಗಳು ಬಹಳ ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು, ಸರಿಯಾದಕ್ರಮ ತೆಗೆದುಕೊಳ್ಳುತ್ತಿಲ್ಲ ಎಂಬ ಬೇಸರ ಕುಸ್ತಿಪಟುಗಳಿಗಿದೆ. ಹೀಗಾಗಿ ಇನ್ನು ಐದು ದಿನಗಳ ಎಚ್ಚರಿಕೆಯನ್ನು ನೀಡಿದ್ದಾರೆ. ಸೂಕ್ತ ಕ್ರಮ ತೆಗೆದುಕೊಳ್ಳದೆ ಹೋದರೆ ಪದಕಗಳನ್ನು ಗಂಗಾ ನದಿಗೆ ಎಸೆಯುವ ಎಚ್ಚರಿಕೆಯನ್ನು ನೀಡಿದ್ದಾರೆ.
ಫೆಡರೇಷನ್ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಸಂಸತ್ ಭವನದ ಉದ್ಘಾಟನೆಯ ಸಂದರ್ಭದಲ್ಲೂ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪೊಲೀಸರು ನಡೆದುಕೊಂಡ ರೀತಿಗೆ ಎಲ್ಲೆಡೆ ವಿರೋಧ ವ್ಯಕ್ತವಾಗಿದೆ. ಪೊಲೀಸರು ಪ್ರತಿಭಟನೆ ನಡೆಸಲು ಜಂತರ್ ಮಂಥರ್ ನಲ್ಲಿ ಅವಕಾಶ ನೀಡಿರಲಿಲ್ಲ.
ಧರಣಿ ಸ್ಥಳವನ್ನು ತೆರವುಗೊಳಿಸಿದ ಒಂದು ದಿನದ ನಂತರ ಜಂತರ್ ಮಂತರ್ ಹೊರತುಪಡಿಸಿ ನಗರದ ಸೂಕ್ತ ಸ್ಥಳದಲ್ಲಿ ಪ್ರದರ್ಶನಕ್ಕೆ ಅವಕಾಶ ನೀಡುವುದಾಗಿ ಹೇಳಿತ್ತು. ಈ ನಡುವೆ ಮತ್ತಷ್ಟು ಆಕ್ರೋಶಗೊಂಡಿರೋ ಕುಸ್ತಿಪಟುಗಳು ತಾವು ಗೆದ್ದ ಪದಕಗಳನ್ನು ಗಂಗಾನದಿಗೆ ಎಸೆಯುವುದಾಗಿ ಹೇಳಿದ್ದಾರೆ. ತಮ್ಮ ಬೇಡಿಕೆ ಈಡೇರಿಸಲು ಐದು ದಿನಗಳ ಡೆಡ್ಲೈನ್ ಕೊಟ್ಟಿದ್ದಾರೆ.