ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಚಿತ್ರದುರ್ಗ, (ಮೇ.31): ಲೈಂಗಿಕ ಕಿರುಕುಳ ವಿರೋಧಿಸಿ ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ಮಹಿಳಾ ಕುಸ್ತಿಪಟುಗಳ ಮೇಲೆ ನಡೆಯುತ್ತಿರುವ ದಬ್ಬಾಳಿಕೆಯನ್ನು ಖಂಡಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ವತಿಯಿಂದ ಅಪರ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಬುಧವಾರ ಮನವಿ ಸಲ್ಲಿಸಲಾಯಿತು.
ಬಿಜೆಪಿ ಸಂಸದ ಹಾಗೂ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಚರಣ್‍ಸಿಂಗ್‍ನಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗಿರುವ ಮಹಿಳಾ ಕುಸ್ತಿಪಟುಗಳು ನ್ಯಾಯಕ್ಕಾಗಿ ಹೋರಾಡುತ್ತಿದ್ದರೆ ದೆಹಲಿ ಪೊಲೀಸರು ಅಮಾನುಷವಾಗಿ ನಡೆದುಕೊಳ್ಳುತ್ತಿದ್ದಾರೆ. ಕೂಡಲೆ ಬ್ರಿಜ್ ಭೂಷಣ್ ಚರಣ್‍ಸಿಂಗ್‍ನನ್ನು ಬಂಧಿಸಿ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯವರು ಒತ್ತಾಯಿಸಿದರು.
ಭೇಟಿ ಬಚಾವೋ ಭೇಟಿ ಪಡಾವೋ ಎಂದು ಹೇಳುತ್ತಿರುವ ಪ್ರಧಾನಿ ಮೋದಿ ಮಹಿಳಾ ಕುಸ್ತಿಪಟುಗಳ ಅಳಲು ಕೇಳದಿರುವುದು ಅತ್ಯಂತ ನೋವಿನ ಸಂಗತಿ ಎಂದು ಪ್ರತಿಭಟನಾನಿರತರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಜಿಲ್ಲಾ ಗೌರವಾಧ್ಯಕ್ಷ ತಿಪ್ಪೇಸ್ವಾಮಿ ಪಿ.ಎಂ. ತಾಲ್ಲೂಕು ಅಧ್ಯಕ್ಷ ಮಹಮದ್ ರಫಿ, ಅಲ್ಪಸಂಖ್ಯಾತ ವಿಭಾಗದ ತಾಲ್ಲೂಕು ಅಧ್ಯಕ್ಷ ದಾದಾಪೀರ್ ಎಸ್. ಉಪಾಧ್ಯಕ್ಷ ದುರುಗೇಶಿ, ಕಟ್ಟಡ ಕಾರ್ಮಿಕರ ವಿಭಾಗದ ತಾಲ್ಲೂಕು ಅಧ್ಯಕ್ಷ ಮೆಹಬೂಬ್ ಭಾಷ, ಕಾರ್ಯದರ್ಶಿಗಳಾದ ಇಲ್ಲು, ಹೆಚ್.ಪ್ರಭು, ಉಪಾಧ್ಯಕ್ಷ ಮಹಮದ್ ರಸೂಲ್ ಈ ಸಂದರ್ಭದಲ್ಲಿದ್ದರು.