ಬೆಂಗಳೂರು: ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಮಾಜಿ ಸಿಎಂ ಯಡಿಯೂರಪ್ಪ ಅವರು ತಮ್ಮ ಸರ್ಕಾರಿ ಬಂಗಲೆಯನ್ನು ತೊರೆದಿದ್ದಾರೆ. ಕಾವೇರಿ ನಿವಾಸದಲ್ಲಿ ಸಿಎಂಗಾಗಿ ಇದ್ದ ನಿವಾಸವನ್ನು ತೊರೆದಿದ್ದಾರೆ.
ಈ ಹಿಂದೆ ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಕಾವೇರಿ ನಿವಾಸವನ್ನು ನೀಡಿದ್ದರು. ಬಳಿಕ ಬಸವರಾಜ್ ಬೊಮ್ಮಾಯಿ ಅವರು ಸಿಎಂ ಆಗಿದ್ದಾಗಲೂ ಯಡಿಯೂರಪ್ಪ ಅವರು ಅದೇ ನಿವಾಸದಲ್ಲಿ ವಾಸವಾಗಿದ್ದರು. ಇದೀಗ ಸಿದ್ದರಾಮಯ್ಯ ಸಿಎಂ ಆದ್ಮೇಲೆ ಖಾಲಿ ಮಾಡುತ್ತಿದ್ದಾರೆ.
ಮಾಜಿ ಸಿಎಂ ಯಡಿಯೂರಪ್ಪ ಅವರು ಧವಳಗಿರಿ ನಿವಾಸಕ್ಕೆ ಶಿಫ್ಟ್ ಆಗಿದ್ದು, ಕಾವೇರಿಯ ಸಿಎಂ ನಿವಾಸಕ್ಕೆ ಸಿದ್ದರಾಮಯ್ಯ ಶಿಫ್ಟ್ ಆಗಿದ್ದಾರೆ. ಕುಮಾರಕೃಪ ನಿವಾಸವನ್ನು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ನೀಡಲಾಗಿದೆ. ಸಿದ್ದರಾಮಯ್ಯ ಅವರ ಅದೃಷ್ಟದ ಮನೆ ಎಂದೇ ಹೇಳಲಾಗಿದ್ದು, ಅದರ ಗೃಹಪ್ರವೇಶವನ್ನು ಡಿಸಿಎಂ ಮಾಡಲಿದ್ದಾರೆ.