Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆಯಲ್ಲಿ ಜೂ.4 ರಂದು ಪತ್ರಿಕಾ ದಿನಾಚರಣೆ :  ಸಾಧಕರಿಗೆ ಸನ್ಮಾನ : ನಾಗರಾಜ್ ಬಡದಾಳ್-ತಾರಾನಾಥ್ ಸೇರಿ ಹಲವರಿಗೆ ಮಾಧ್ಯಮ ಮಾಣಿಕ್ಯ ಪ್ರಶಸ್ತಿ

Facebook
Twitter
Telegram
WhatsApp

ಸುದ್ದಿಒನ್, ದಾವಣಗೆರೆ, (ಜೂ.01):  ಪತ್ರಿಕಾ ಕಚೇರಿಯ ಎಂಟು ವಿಭಾಗಗಳ ನಿರ್ವಾಹಕರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ದಾವಣಗೆರೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ‘ಮಾಧ್ಯಮ ಮಾಣಿಕ್ಯ’ ಪ್ರಶಸ್ತಿ ನೀಡಿ ಗೌರವಿಸಲು ತೀರ್ಮಾನಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ದಾವಣಗೆರೆ ಜಿಲ್ಲಾ ಸಮಿತಿ ಅಧ್ಯಕ್ಷ ಇ.ಎಂ.ಮಂಜುನಾಥ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2022ರ ಸಾಲಿನಿಂದ ಈ ಪ್ರಶಸ್ತಿ ನೀಡಲುದ್ದೇಶಿಸಲಾಗಿದ್ದು, ಜೂನ್ 4ರ ಭಾನುವಾರ ಬೆಳಿಗ್ಗೆ 11 ಗಂಟೆಗೆ ನಗರದ ಶ್ರೀ ಡಿ. ದೇವರಾಜ ಅರಸು ಬಡಾವಣೆ ‘ಬಿ’ ಬ್ಲಾಕ್‍ನಲ್ಲಿರುವ ಬ್ರಹ್ಮಾಕುಮಾರೀಸ್ ಸಂಸ್ಥೆಯ ಶಿವಧ್ಯಾನ ಮಂದಿರದಲ್ಲಿ ಏರ್ಪಾಡಾಗಿರುವ ಸಮಾರಂಭದಲ್ಲಿ 2022ರ ಸಾಲಿನ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಈ ಕಾರ್ಯಕ್ರಮಕ್ಕೂ ಮೊದಲು ಬೆಳಿಗ್ಗೆ 9.30ಕ್ಕೆ ಸಂಘದ ಜಿಲ್ಲಾ ಘಟಕದ 2022-23ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಮಹಾಸಭೆ ಏರ್ಪಾಡಗಿದೆ ಎಂದರು.

ವರದಿಗಾರರ ವಿಭಾಗದಲ್ಲಿ ಹಿರಿಯ ಪತ್ರಕರ್ತ ‘ಕನ್ನಡಪ್ರಭ’ದ ನಾಗರಾಜ್ ಬಡದಾಳ್, ವಿದ್ಯುನ್ಮಾನ ವಿಭಾಗದಲ್ಲಿ ಹಿರಿಯ ಪತ್ರಕರ್ತ ‘ದೂರದರ್ಶನ’ದ ಎ.ಎಲ್. ತಾರಾನಾಥ್, ಛಾಯಾಗ್ರಾಹಕ ವಿಭಾಗದಲ್ಲಿ ವಿವೇಕ್ ಎಲ್. ಬದ್ದಿ, ಡಿಸೈನರ್ / ಡಿಟಿಪಿ ವಿಭಾಗದಲ್ಲಿ ‘ಜನತಾವಾಣಿ’ಯ ಶ್ರೀಮತಿ ಟಿ.ಎನ್. ಮಂಜುಳಾ ನಾಗರಾಜ್, ಜಾಹೀರಾತು ವಿಭಾಗದಲ್ಲಿ ಸಾಯಿ ಅಡ್ವರ್ಟೈಸರ್ಸ್ ಬಿ.ಎನ್, ಸಾಯಿಪ್ರಸಾದ್, ಮುದ್ರಣ ವಿಭಾಗದಲ್ಲಿ ಮಂಜು ಮುದ್ರಣದ ಎಂ. ನಾಗರಾಜ್, ಸಿಬ್ಬಂದಿ ವಿಭಾಗದಲ್ಲಿ ಹಿರಿಯ ತಂತ್ರಜ್ಞ ಬುಡೇನ್ ಸಾಬ್, ಪತ್ರಿಕಾ ವಿತರಕ ವಿಭಾಗದಲ್ಲಿ ಹಿರಿಯ ಪತ್ರಿಕಾ ವಿತರಕ ಎ.ಕೆ. ಶಿವಬಸಪ್ಪ ಅವರುಗಳು ‘ಮಾಧ್ಯಮ ಮಾಣಿಕ್ಯ’ ಪ್ರಶಸ್ತಿಗೆ ಪುರಸ್ಕೃತರಾಗಿದ್ದಾರೆ.

ಅಲ್ಲದೇ, 2022-23ನೇ ಸಾಲಿನಲ್ಲಿ ವಿವಿಧ ಪ್ರಶಸ್ತಿಗಳ ಪುರಸ್ಕೃತ ಪತ್ರಕರ್ತರನ್ನು ‘ಮಾಧ್ಯಮ ಚೂಡಾಮಣಿ’ ಬಿರುದು ನೀಡಿ ಸನ್ಮಾನಿಸಲಾಗುತ್ತದೆ. ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾಗಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ್, ‘ಕರ್ನಾಟಕ ಎಕ್ಸ್‍ಪ್ರೆಸ್’ ಸಂಪಾದಕ ಕೆ. ಚಂದ್ರಣ್ಣ, ಕೆಯುಡಬ್ಲೂಜೆ ವಾರ್ಷಿಕ ಪ್ರಶಸ್ತಿ ಪುರಸ್ಕೃತರಾದ ‘ನಗರವಾಣಿ’ ಸಹ ಸಂಪಾದಕ ಬಿ.ಎನ್. ಮಲ್ಲೇಶ್, ಕೆಯುಡಬ್ಲೂಜೆ ವಾರ್ಷಿಕ ಪ್ರಶಸ್ತಿ ಪುರಸ್ಕೃತರಾದ ಹಿರಿಯ ಪತ್ರಕರ್ತ ಆರ್.ಜಿ. ಹಳ್ಳಿ ನಾಗರಾಜ್, ‘ಪ್ರಜಾವಾಣಿ’ಯ ಚಂದ್ರಹಾಸ ಹಿರೇಮಳಲಿ ಮತ್ತು ಎಲ್. ಮಂಜುನಾಥ್, ‘ವಿಜಯವಾಣಿ’ಯ ಎನ್.ಡಿ.ಶಾಂತಕುಮಾರ್, ಹರಿಹರದ ‘ಲೋಕಪ್ರಭಾ’ ಸಂಪಾದಕರಾದ ಶ್ರೀಮತಿ ಡಿ.ಎನ್. ಶಾಂಭವಿ ನಾಗರಾಜ್ ಅವರುಗಳನ್ನು ಗೌರವಿಸಲಾಗುತ್ತದೆ.

ಇದೇ ಸಂದರ್ಭದಲ್ಲಿ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಅಮ್ಮಂದಿರ ದಿನಾಚರಣೆ ಅಂಗವಾಗಿ ಮಹಿಳಾ ಪತ್ರಕರ್ತರನ್ನು ‘ಮಾಧ್ಯಮ ರತ್ನ’ ಬಿರುದು ನೀಡಿ ಗೌರವಿಸಲಾಗುತ್ತದೆ. ಜೊತೆಗೆ, ಅನಾರೋಗ್ಯದಿಂದ ಬಳಲುತ್ತಿರುವ 8 ಜನ ಪತ್ರಕರ್ತರಿಗೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ನಿಧಿಯಿಂದ ಸಹಾಯ ಧನದ ಚೆಕ್ ವಿತರಿಸಲಾಗುತ್ತದೆ.

ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸ್ಥಳೀಯ ಸಂಚಾಲಕರಾದ ರಾಜಯೋಗಿನಿ ಬ್ರಹ್ಮಾಕುಮಾರಿ ಲೀಲಾಜಿ ದಿವ್ಯ ಸಾನ್ನಿಧ್ಯದಲ್ಲಿ, ಬ್ರಹ್ಮಾಕುಮಾರೀಸ್ ಸಂಸ್ಥೆಯ ಹುಬ್ಬಳ್ಳಿ ವಲಯದ ನಿರ್ದೇಶಕರಾದ ರಾಜಯೋಗಿ ಬ್ರಹ್ಮಾಕುಮಾರ ಬಸವರಾಜ ರಾಜಋಷಿ ಕಾರ್ಯಕ್ರಮವನ್ನು ಉದ್ಘಾಟಿಸುವರು. ತೋಟಗಾರಿಕೆ ಸಚಿವ ಶಾಮನೂರು ಮಲ್ಲಿಕಾರ್ಜುನ್ ಅವರು ‘ಮಾಧ್ಯಮ ಮಾಣಿಕ್ಯ’ ಪ್ರಶಸ್ತಿ ಪ್ರದಾನ ಮಾಡುವರು. ಬಾಪೂಜಿ ವಿದ್ಯಾಸಂಸ್ಥೆ ಆಡಳಿತ ಮಂಡಳಿ ಸದಸ್ಯರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಮಹಿಳಾ ಪತ್ರಕರ್ತರನ್ನು ಗೌರವಿಸುವರು. ಹಿರಿಯ ಕೈಗಾರಿಕೋದ್ಯಮಿ ಅಥಣಿ ವೀರಣ್ಣ ಮತ್ತು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರುಗಳು ವಿವಿಧ ಪ್ರಶಸ್ತಿಗಳ ಪುರಸ್ಕೃತ ಪತ್ರಕರ್ತರನ್ನು ಸನ್ಮಾನಿಸುವರು. ‘ಜನತಾವಾಣಿ’ ಸಂಪಾದಕ ಎಂ.ಎಸ್.ವಿಕಾಸ್ ಮತ್ತು ಹೋಟೆಲ್ ಉದ್ಯಮಿ ಅಣಬೇರು ರಾಜಣ್ಣ ಅವರುಗಳು ಅನಾರೋಗ್ಯದಿಂದಿರುವ ಪತ್ರಕರ್ತರಿಗೆ ಸಹಾಯ ಧನದ ಚೆಕ್ ವಿತರಿಸುವರು.

ಮಹಾನಗರ ಪಾಲಿಕೆ ಆಯುಕ್ತರಾದ ಶ್ರೀಮತಿ ರೇಣುಕಾ, ಕೆಯುಡಬ್ಲ್ಯೂಜೆ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ, ಲೋಕೇಶ್, ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ ಕೆ. ಏಕಾಂತಪ್ಪ, ದಾವಣಗೆರೆ ಅರ್ಬನ್ ಕೋ- ಆಪರೇಟಿವ್ ಬ್ಯಾಂಕ್ ನಿರ್ದೇಶಕ ದೇವರಮನೆ ಶಿವಕುಮಾರ್, ಲಯನ್ಸ್ ಕ್ಲಬ್ ಅಧ್ಯಕ್ಷ ಎನ್.ಆರ್. ನಾಗಭೂಷಣರಾವ್, ಲಯನ್ಸ್ ಕ್ಲಬ್ ಉಪಾಧ್ಯಕ್ಷ ಮಹಾಂತೇಶ್ ವಿ. ಒಣರೊಟ್ಟಿ, ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ರಾಷ್ಟ್ರೀಯ ಮಂಡಳಿ ಸದಸ್ಯ ಎಸ್.ಕೆ., ಒಡೆಯರ್ ಅವರುಗಳು ಮುಖ್ಯ ಅತಿಥಿಗಳಾಗಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಎ. ಫಕೃದ್ಧೀನ್, ರಾಜ್ಯಸಮಿತಿ ಸದಸ್ಯ ಕೆ. ಚಂದ್ರಣ್ಣ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ ಕೆ. ಏಕಾಂತಪ್ಪ, ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ರಾಷ್ಟ್ರೀಯ ಮಂಡಳಿ ಸದಸ್ಯ ಎಸ್.ಕೆ., ಒಡೆಯರ್, ಜಿಲ್ಲಾ ಖಚಾಂಚಿ ಎನ್.ವಿ. ಬದರಿನಾಥ್ ಮತ್ತಿತರರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

ಅಕ್ರಮ ಕಸಾಯಿ ಖಾನೆ ಬಂದ್ ಮಾಡಿ : ದಾದಾ ಪೀರ್ ಆಗ್ರಹ : ವಿಡಿಯೋ ವೈರಲ್..!

ಸುದ್ದಿಒನ್, ಹಿರಿಯೂರು : ಅಕ್ರಮವಾಗಿ ಕಸಾಯಿ ಖಾನೆ ನಡೆಸುತ್ತಿರುವವರ ವಿರುದ್ಧ ದಾದಾ ಪೀರ್ ಎಂಬುವವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾದಾ ಪೀರ್ 6ನೇ ವಾರ್ಡ್ ನಲ್ಲಿ ವಾಸಿಸುವವ ವ್ಯಕ್ತಿಯಾಗಿದ್ದಾರೆ. ಕಸಾಯಿ ಖಾನೆಯಿಂದ ಮಕ್ಕಳು ಅನಾರೋಗ್ಯಕ್ಕೆ

error: Content is protected !!