Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭ ಯಾವಾಗ ? ಎಲ್ಲಿ ? ಪ್ರಗತಿ ಪರಿಶೀಲನಾ ಸಭೆಯಲ್ಲಿ ಏನೆಲ್ಲಾ ಚರ್ಚೆಯಾಯ್ತು ? ಇಲ್ಲಿದೆ ಸಂಪೂರ್ಣ ಮಾಹಿತಿ…!

Facebook
Twitter
Telegram
WhatsApp

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಜೂನ್.02):  ಜನರು ಹಾಗೂ ಜನಪ್ರತಿನಿಧಿಗಳ ಹೋರಾಟದ ಪ್ರತಿಫಲವಾಗಿ ಚಿತ್ರದುರ್ಗ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರಾಗಿದೆ. ಭವಿಷ್ಯದ ದೃಷ್ಟಿಯಿಂದ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಮಾಸ್ಟರ್ ಪ್ಲಾನ್ ರೂಪಿಸಬೇಕು.

ಕೇವಲ 17 ಎಕರೆ ಜಾಗದಲ್ಲಿ ಕಾಲೇಜು ಸ್ಥಾಪನೆಯ ಯೋಜನೆ ಬದಲಿಗೆ, 65 ರಿಂದ 70 ಎಕರೆ ಜಾಗದಲ್ಲಿ ವಿಶಾಲ ಹಾಗೂ ಸುಸಜ್ಜಿತ ವೈದ್ಯಕೀಯ ಕಾಲೇಜು ಸ್ಥಾಪನೆಗೆ ವಿಸ್ತೃತ  ಯೋಜನಾ ವರದಿ ಸಿದ್ದಪಡಿಸುವಂತೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಖಾತೆ ಸಚಿವ ಎ.ನಾರಾಯಣಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಮೆಡಿಕಲ್ ಕಾಲೇಜು ಆರಂಭಿಸುವ ಕುರಿತು ಪ್ರಗತಿ ಪರಿಶೀಲನಾ ಸಭೆ ಜರುಗಿಸಿ ಅವರು ಮಾತನಾಡಿದರು.

ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಮೆಡಿಕಲ್ ಕಾಲೇಜು ಆರಂಭಿಸಲು ಸೂಕ್ತ ಕಟ್ಟಡ ಹಾಗೂ ಸ್ಥಳ ನಿಗದಿ ಮಾಡುವ ಕುರಿತು ಇನ್ನೊಮ್ಮೆ ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸ್ಥಳ ಪರೀಶೀಲನೆ ನಡೆಸಿ ವಾರದಲ್ಲಿ ವರದಿ ನೀಡಬೇಕು. ಚಿತ್ರದುರ್ಗ ಜಿ.ಆರ್.ಹಳ್ಳಿ ಸ್ನಾತಕೋತ್ತರ ಕೇಂದ್ರದಲ್ಲಿ ಈಗಾಗಲೇ ವಿದ್ಯಾರ್ಥಿಗಳು ಓದುತ್ತಿದ್ದಾರೆ. ದಾವಣಗೆರೆ ವಿಶ್ವವಿದ್ಯಾಲಯದ ಮೇಲೆ ಸವಾರಿ ಮಾಡಿ ಬಲವಂತದಿಂದ ಸ್ನಾತಕೋತ್ತರ ಕೇಂದ್ರವನ್ನು ಸ್ವಾಧೀನ ಪಡಿಸಿಕೊಳ್ಳುವುದು ಸಾಧ್ಯವಿಲ್ಲ. ವಿ.ವಿ ಉಪಕುಲಪತಿಗಳು ಸಂಪೂರ್ಣ ಒಪ್ಪಿ ಸ್ಥಳ ನೀಡಿದರೆ ಯಾವುದೇ ಅಭ್ಯಂತರವಿಲ್ಲ. ಮುಂದಿನ ಸಭೆಗೆ ಕಡ್ಡಾಯವಾಗಿ ದಾವಣಗೆರೆ ವಿ.ವಿ ಅಧಿಕಾರಿಗಳು ಹಾಜರಿಬೇಕು ಎಂದರು.

ಶಾಸಕರು ಹಾಗೂ ಜನಪ್ರತಿನಿಧಿಗಳ ಸಭೆ ಆಯೋಜನೆಗೆ ಸೂಚನೆ: ವೈದ್ಯಕೀಯ ಕಾಲೇಜು ಸ್ಥಾಪನೆಗೆ ಡಿಎಂಎಫ್ (ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿ) ಅಡಿ ರೂ.200 ಕೋಟಿ ಅನುದಾನ ಹಂಚಿಕೆ ಮಾಡಲುವ ಸಂಬಂಧ ಜಿಲ್ಲಾ ಸಚಿವರ ಅಧ್ಯಕ್ಷತೆಯಲ್ಲಿ ಶಾಸಕರು ಹಾಗೂ ಜನಪ್ರತಿನಿಧಿಗಳ ಸಭೆ ಆಯೋಜಿಸುವಂತೆ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಡಿ.ಎಂ.ಎಫ್ ಜೊತೆಗೆ ಕೆ.ಎಂ.ಇ.ಆರ್.ಸಿ ಅನುದಾನವನ್ನೂ ಬಳಕೆ ಮಾಡುವ ಕುರಿತು ಶಾಸಕರ ಹಾಗೂ ಜನಪ್ರತಿನಿಧಿಗಳ ಅಭಿಪ್ರಾಯ ಸಂಗ್ರಹಿಸುವಂತೆ ನಿರ್ದೇಶನ ನೀಡಿದರು.

111 ಎಕರೆ ಸರ್ಕಾರಿ ಜಮೀನು: ಚಿತ್ರದುರ್ಗ ನಗರಸಭೆಯ ವ್ಯಾಪ್ತಿಗೆ ಹತ್ತಿರ ಇರುವ ಇಂಗಳದಾಳು ಗ್ರಾಮದ ಬಳಿ 111 ಎಕರೆ ಸರ್ಕಾರಿ ಜಮೀನು ಲಭ್ಯವಿದೆ. ಇದರಲ್ಲಿ 80 ಎಕರೆ ಜಮೀನಿಗೆ ಮಂಜೂರಾತಿಗೆ 57 ಅರ್ಜಿಗಳು ಬಂದಿವೆ. 30 ಎಕರೆ ಜಮೀನು ಪ್ರದೇಶದಲ್ಲಿ ನಾಲ್ಕು ಗುಡ್ಡಗಳು ಇವೆ ಎಂದು ಉಪವಿಭಾಗಧಿಕಾರಿ ಆರ್.ಚಂದ್ರಯ್ಯ ಸಭೆಗೆ ಮಾಹಿತಿ ನೀಡಿದರು.

ಈ ಸರ್ಕಾರಿ ಜಮೀನಿನಲ್ಲಿ ಯಾವ ಖಾಸಗಿ ವ್ಯಕ್ತಿಗಳು ಉಳಿಮೆ ಮಾಡುತ್ತಿಲ್ಲ. ಜಮೀನು ಮಂಜೂರಾತಿಗೆ ಬಂದ ಅರ್ಜಿಗಳನ್ನು ವಜಾ ಮಾಡಿ ಈ ಸ್ಥಳ ಮೆಡಿಕಲ್ ಕಾಲೇಜು ಸ್ಥಾಪನೆಗೆ ಸೂಕ್ತವಾಗಿದೆ ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಹೇಳಿದರು.

150 ಮೆಡಿಕಲ್ ವಿದ್ಯಾರ್ಥಿಗಳ ಪ್ರವೇಶಕ್ಕೆ ಒಪ್ಪಿಗೆ : ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಮೆಡಿಕಲ್ ಕಾಲೇಜು ಆರಂಭಕ್ಕೆ ಅನುಮತಿ ದೊರೆತಿದೆ. 150 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುವುದು. ಈ ಕುರಿತು ರಾಷ್ಟ್ರೀಯ ವೈದ್ಯಕೀಯ ಪರಿಷತ್ ಹಾಗೂ ರಾಜೀವ್ ಗಾಂಧಿ ವೈದ್ಯಕೀಯ ವಿಶ್ವ ವಿದ್ಯಾಲಯವು ಅನುಮೋದನೆ ನೀಡಿವೆ. ಕಾಲೇಜಿಗೆ 75 ಸಿಬ್ಬಂದಿಗಳ ಅವಶ್ಯಕತೆಯಿದೆ. ಈ ಕುರಿತು ಹಣಕಾಸು ಇಲಾಖೆ ಹುದ್ದೆ ಮಂಜೂರಾತಿಗೆ ಪತ್ರ ಬರೆಯಲಾಗಿದೆ. ಹಣಕಾಸು ಇಲಾಖೆ ಅನುಮತಿ ನೀಡಬೇಕಿದೆ. ತಾತ್ಕಾಲಿಕವಾಗಿ ಜಿ.ಆರ್.ಹಳ್ಳಿ ಜ್ಞಾನಗಂಗೋತ್ರಿ ಸ್ನಾತಕೋತ್ತರ ಕೇಂದ್ರದಲ್ಲಿ ಕಾಲೇಜು ಆರಂಭಿಸಲು ಅನುಮತಿ ನೀಡುವಂತೆ ಉನ್ನತ ಶಿಕ್ಷಣ ಇಲಾಖೆಗೆ ಪತ್ರ ಬರೆಯಲಾಗಿದೆ. ಇದುವರೆಗೂ ಸರ್ಕಾರದಿಂದ ಚಿತ್ರದುರ್ಗ ವೈದ್ಯಕೀಯ ಕಾಲೇಜಿಗೆ ಯಾವುದೇ ಅನುದಾನ ನೀಡಿರುವುದಿಲ್ಲ. ಕಾಲೇಜು ಆರಂಭಿಸಲು, ಅಗತ್ಯ ಪೀಠೊಪಕರಣ, ಕಚೇರಿ ಸ್ಥಾಪನೆಗೆ ಅನುದಾನದ ಅಗತ್ಯವಿದೆ ಎಂದು ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯ ವಿಶೇಷ ಅಧಿಕಾರಿ ಡಾ.ಯುವರಾಜ ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಶಾಸಕ ಕೆ.ಸಿ.ವೀರೇಂದ್ರ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್.ದಿವಾಕರ, ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ, ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

error: Content is protected !!