Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರಧಾನಿ ನರೇಂದ್ರಮೋದಿರವರು ಒಂಭತ್ತು ವರ್ಷಗಳಲ್ಲಿ ಸಾಕಷ್ಟು ಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ : ಕೇಂದ್ರ ಸಚಿವ ಎ.ನಾರಾಯಣಸ್ವಾಮಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ಜೂ.03) : ಪ್ರಧಾನಿ ನರೇಂದ್ರಮೋದಿರವರು ಒಂಭತ್ತು ವರ್ಷಗಳ ಅಧಿಕಾರವಧಿಯಲ್ಲಿ ದೇಶದ ಸಮಗ್ರ ಅಭಿವೃದ್ದಿಗೆ ಸಾಕಷ್ಟು ಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೊಳಿಸಿದ್ದಾರೆಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ತಿಳಿಸಿದರು.

ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎ.ನಾರಾಯಣಸ್ವಾಮಿ 2014 ರಲ್ಲಿ ದೇಶದ ಪ್ರಧಾನಿಯಾದಾಗ ನರೇಂದ್ರಮೋದಿ ನೀರಾವರಿ, ವಸತಿ, ವಿದ್ಯುತ್, ನಿವೇಶನ ನೀಡಿ ದಕ್ಷತೆಯಿಂದ ದೇಶವನ್ನು ಅಭಿವೃದ್ದಿಯತ್ತ ತೆಗೆದುಕೊಂಡು ಹೋಗಿದ್ದನ್ನು ಮೆಚ್ಚಿ 2019 ರಲ್ಲಿ ನಡೆದ ಪಾರ್ಲಿಮೆಂಟ್ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ತಂದ ಪರಿಣಾಮ ಎರಡನೆ ಬಾರಿಗೆ ಪ್ರಧಾನಿಯಾದ ಮೋದಿ ಒಂಬತ್ತು ವರ್ಷಗಳ ಅಧಿಕಾರವಧಿಯಲ್ಲಿ ದೇಶದ ಚಿತ್ರಣವನ್ನೆ ಬದಲಿಸಿ ಭ್ರಷ್ಠಾಚಾರ ರಹಿತ ಆಡಳಿತ ನೀಡುತ್ತಿದ್ದಾರೆ ಎಂದು ಹೇಳಿದರು.

ಶೋಷಿತರನ್ನು ಗುರಿಯಾಗಿಸಿಕೊಂಡು ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಹನ್ನೊಂದು ಕೋಟಿಗೂ ಹೆಚ್ಚು ಮನೆಗಳನ್ನು ನಿರ್ಮಿಸಿದ್ದಾರೆ. ಸ್ವಚ್ಚ ಭಾರತ್ ಯೋಜನೆಯಡಿ ಶೌಚಾಲಯ ನಿರ್ಮಾಣ, ಉಜ್ವಲ್ ಯೋಜನೆಯಡಿ ಒಂಬತ್ತು ಕೋಟಿ ಕುಟುಂಬಗಳಿಗೆ ಅಡುಗೆ ಅನಿಲ ವಿತರಣೆ, ಕಿಸಾನ್ ಸಮ್ಮಾನ್ ಅಡಿ ಪ್ರತಿ ರೈತನಿಗೆ ತಿಂಗಳಿಗೆ ಆರು ಸಾವಿರ ರೂ.ಗಳನ್ನು ನೀಡಿರುವ ಹೆಗ್ಗಳಿಕೆ ಪ್ರಧಾನಿಗೆ ಸಲ್ಲಬೇಕು ಎಂದು ಶ್ಲಾಘಿಸಿದರು.

ರೈತರಿಗೆ ಗೊಬ್ಬರದ ಅಭಾವ ನೀಗಿಸಿರುವ ಕೇಂದ್ರ ಸರ್ಕಾರದ ಕಾಳಜಿಯಿಂದಾಗಿ ಆಯುಷ್ಮಾನ್ ಭಾರತ್ ಮೂಲಕ ಐದು ಲಕ್ಷ ಮಂದಿಗೆ ಇನ್ಸುರೆನ್ಸ್ ಸಿಕ್ಕಿದೆ. ವಾಜಪೇಯಿ ಪ್ರಧಾನಿಯಾಗಿದ್ದಾಗ ನಿರ್ಮಾಣಗೊಂಡ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ದಿಗೊಳಿಸಿ ಈಶಾನ್ಯ ರಾಜ್ಯಗಳಿಗೆ ಸಂಪರ್ಕ ಕಲ್ಪಿಸಿದೆ.

45 ಏರ್‍ಪೋರ್ಟ್‍ಗಳನ್ನು 75 ಕ್ಕೆ ಹೆಚ್ಚಿಸಿ ಕರ್ನಾಟಕದಲ್ಲಿ ಆರು ಹೊಸ ಏರ್‍ಪೋರ್ಟ್‍ಗಳನ್ನು ನಿರ್ಮಾಣ ಮಾಡಿರುವ ಕೀರ್ತಿ ಕೇಂದ್ರಕ್ಕಿದೆ. ಉನ್ನತ ಶಿಕ್ಷಣಕ್ಕೆ ಬಿಜೆಪಿ. ಒತ್ತು ಕೊಟ್ಟಿದೆ. ಸಾರ್ವಭೌಮತ್ವ, ನೆಲದ ವಿಚಾರ ಬಂದಾಗ ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್ 370 ನ್ನು ರದ್ದುಪಡಿಸಿದ ಪ್ರಧಾನಿ ಮೋದಿ ಭಯೋತ್ಪಾದನೆಗೆ ತೆರೆ ಎಳೆದಿದ್ದಾರೆ.

ಇಂತಹ ದಿಟ್ಟತನವನ್ನು ದೇಶದ ಯಾವ ಪ್ರಧಾನಿಯೂ ಇದುವರೆವಿಗೂ ಕೈಗೊಂಡಿಲ್ಲ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ, ಯುವಕರು ಸ್ವ-ಉದ್ಯೋಗ ಕೈಗೊಳ್ಳಲು ಮುದ್ರಾ ಯೋಜನೆಯಡಿ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗಿದೆ. ಬೀದಿ ಬದಿ ವ್ಯಾಪಾರ ಮಾಡುವ ಮೂವತ್ತೈದು ಲಕ್ಷ ಮಂದಿಗೆ ಹತ್ತರಿಂದ ಐವತ್ತು ಸಾವಿರ ರೂ.ಗಳವರೆಗೆ ಬ್ಯಾಂಕ್‍ನಲ್ಲಿ ಸಾಲ ಕೊಟ್ಟಿದೆ. ಕುಡಿಯುವ ನೀರಿಗೆ ಹಾಹಾಕಾರವಿದ್ದುದನ್ನು ಗಮನಿಸಿ ಪ್ರಧಾನಿ ಮೋದಿರವರು ಜಲಜೀವನ್ ಮಿಷನ್ ಯೋಜನೆಯಡಿ ಶುದ್ದ ಕುಡಿಯುವ ನೀರು ಪೂರೈಸಿದ್ದಾರೆ. ವಿಶ್ವವಿದ್ಯಾಲಯಗಳನ್ನು ತೆರೆಯಲಾಗಿದೆ.

ಮೂರು ಸಾವಿರ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಐ.ಎ.ಎಸ್.ಕೋಚಿಂಗ್ ನೀಡಲಾಗುತ್ತಿದೆ. ಅದಕ್ಕಾಗಿ ಪ್ರತಿ ತಿಂಗಳು ನಾಲ್ಕು ಸಾವಿರ ರೂ.ಗಳ ಸ್ಟೈಫಂಡ್ ನೀಡಲು ಆದೇಶಿಸಿದ್ದೇನೆ. ಉನ್ನತ ಹುದ್ದೆಗೆ ಪಡೆಯಲು ಈ ವರ್ಷದಿಂದಲೆ ತರಬೇತಿ ಆರಂಭವಾಗಲಿದೆ. ಇನ್ನು ಒಂದು ವರ್ಷದ ಅಧಿಕಾರವಧಿಯಲ್ಲಿ ಪ್ರಧಾನಿ ಮೋದಿರವರು ಅಭಿವೃದ್ದಿಯನ್ನು ದುಪ್ಪಟ್ಟುಗೊಳಿಸಲಿದ್ದಾರೆಂದು ಎ.ನಾರಾಯಣಸ್ವಾಮಿ ಭರವಸೆ ನೀಡಿದರು.

ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ. ಹಾಗೂ ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಜನರಲ್ಲಿ ಅರಿವು ಮೂಡಿಸುವ ಕೆಲಸವನ್ನು ಕಾರ್ಯಕರ್ತರು ಸೇನಾನಿಗಳಂತೆ ನಿರ್ವಹಿಸಬೇಕು. ಸ್ವಾತಂತ್ರ್ಯ ಹೋರಾಟಗಾರರ ಆದರ್ಶಗಳನ್ನು ಧಿಕ್ಕರಿಸಿರುವ ಕಾಂಗ್ರೆಸ್ ಸರ್ಕಾರ ಐದು ಗ್ಯಾರೆಂಟಿಗಳ ಆಸೆ ಹುಟ್ಟಿಸಿ ರಾಜ್ಯದಲ್ಲಿ ಈ ಬಾರಿಯ ಚುನಾವಣೆಯಲ್ಲಿ ಗೆದ್ದು ಅಧಿಕಾರ ಹಿಡಿದಿದೆ. ಒಳಮೀಸಲಾತಿಯ ಕೂಗು ದೇಶದೆಲ್ಲೆಡೆ ಚರ್ಚೆಯಾಗುತ್ತಿದೆ. ಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿಯೇ ವಿನಃ. ರಾಜಕೀಯಕ್ಕಾಗಿ ಅಲ್ಲ ಎನ್ನುವುದನ್ನು ಗಮನದಲ್ಲಿಟ್ಟುಕೊಂಡು ಬಸವರಾಜ್‍ಬೊಮ್ಮಾಯಿ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರಕ್ಕೆ ಶಿಫಾರಸ್ಸು ಮಾಡಿದರು. ಇದಕ್ಕೂ ನಮ್ಮ ಪಕ್ಷದ ಹಿನ್ನೆಡೆಗೂ ಸಂಬಂಧವಿಲ್ಲ ಎಂದು ಎ.ನಾರಾಯಣಸ್ವಾಮಿ ಸ್ಪಷ್ಠಪಡಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಬಿಜೆಪಿ ರಾಜ್ಯ ಕಾರ್ಯದರ್ಶಿ ಕೆ.ಎಸ್.ನವೀನ್, ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ಪ್ರಧಾನ ಕಾರ್ಯದರ್ಶಿ ನರೇಂದ್ರ ಹೊನ್ನಾಳ್, ಮಾಧ್ಯಮ ವಕ್ತಾರ ದಗ್ಗೆಶಿವಪ್ರಕಾಶ್, ವಕ್ತಾರ ನಾಗರಾಜ್‍ಬೇದ್ರೆ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ವೆಂಕಟೇಶ್ ಯಾದವ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!