ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಚಿತ್ರದುರ್ಗ, (ಜೂ.03) : ಒಂದು ತಿಂಗಳ ಕಾಲ ವಿಕಾಸ ತೀರ್ಥ ಯಾತ್ರೆ ಅಭಿಯಾನ ನಡೆಯಲಿದೆ. ಇದಕ್ಕಾಗಿ ರಾಜ್ಯದ ಕೆಲವು ನಾಯಕರುಗಳು ಜಿಲ್ಲೆಗೆ ಆಗಮಿಸಲಿದ್ದಾರೆ. ಶಕ್ತಿ ಕೇಂದ್ರ, ಬೂತ್ ಅಧ್ಯಕ್ಷರು, ಫಲಾನುಭವಿಗಳನ್ನು ಭೇಟಿ ಮಾಡಲಾಗುವುದು. ಶಾಸಕರು, ಮಾಜಿ ಶಾಸಕರು, ಕಾರ್ಯಕರ್ತರು, ಪದಾಧಿಕಾರಿಗಳ ಸಭೆ ನಡೆಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಬಿಜೆಪಿ ರಾಜ್ಯ ಕಾರ್ಯದರ್ಶಿ ಕೆ.ಎಸ್.ನವೀನ್ ಹೇಳಿದರು.
ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜೂ. 20 ರಂದು ಪ್ರಧಾನಿ ಮೋದಿರವರು ಡಿಜಿಟಲ್ ರ್ಯಾಲಿ ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಏಳು ದಿನಗಳ ಕಾಲ ಜಿಲ್ಲೆಯಲ್ಲಿ ಮನೆ ಮನೆ ಸಂಪರ್ಕಕ್ಕೂ ಸಿದ್ದತೆ ನಡೆಸಲಾಗುವುದು ಎಂದು ಹೇಳಿದರು.
ಕೇಂದ್ರದ ಯೋಜನೆಗಳನ್ನು ಪ್ರತಿ ಮನೆಗೆ ತಿಳಿಸುವುದು ಎಲ್ಲರ ಜವಾಬ್ದಾರಿ. ಮುಂದಿನ ವರ್ಷ ನಡೆಯಲಿರುವ ಪಾರ್ಲಿಮೆಂಟ್ ಚುನಾವಣೆಯಲ್ಲಿ ರಾಜ್ಯದಿಂದ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದು ನರೇಂದ್ರಮೋದಿರವರನ್ನು ಮತ್ತೆ ದೇಶದ ಪ್ರಧಾನಿಯನ್ನಾಗಿಸಬೇಕು ಎಂಬುದು ನಮ್ಮ ಗುರಿ. ಕೇಂದ್ರದಿಂದ ಅನೇಕ ಯೋಜನೆಗಳು ಜಿಲ್ಲೆಗೆ ಸಿಕ್ಕಿದೆ ಎಂದು ತಿಳಿಸಿದರು.
ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ, ಪ್ರಧಾನ ಕಾರ್ಯದರ್ಶಿ ನರೇಂದ್ರ ಹೊನ್ನಾಳ್, ಮಾಧ್ಯಮ ವಕ್ತಾರ ದಗ್ಗೆಶಿವಪ್ರಕಾಶ್, ವಕ್ತಾರ ನಾಗರಾಜ್‍ಬೇದ್ರೆ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ವೆಂಕಟೇಶ್ ಯಾದವ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.