Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಳ್ಳಾರಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಹುದ್ದೆ..!

---Advertisement---

 

ಬಳ್ಳಾರಿಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಜೂನ್ 12ರಂದು ನೇರಸಂದರ್ಶನದ ಮೂಲಕ ತಾತ್ಕಲಿಕವಾಗಿ ನೇಮಕ ಮಾಡಿಕೊಳ್ಳಲಾಗುತ್ತದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಸರ್ವೇಕ್ಷಣಾ ಘಟಕದಿಂದ ಸಿ.ಪಿ.ಹೆಚ್.ಸಿ-ಯು.ಹೆಚ್.ಸಿ ಮತ್ತು ಎನ್.ಪಿ.ಪಿ.ಸಿ ಕಾರ್ಯಕ್ರಮದಡಿ ಸಂದರ್ಶನ ನಡೆಯಲಿದೆ.

ಜಿಲ್ಲಾ ಹೆಲ್ತ್ ಅಂಡ್ ವೆಲ್‍ನೆಸ್ ಸೆಂಟರ್ ಕೋ-ಆರ್ಡಿನೇಟರ್ 1 ಹುದ್ದೆ, ಜಿಲ್ಲಾ ಸಲಹೆಗಾರರು 1 ಹುದ್ದೆ, ಫಿಜಿಷಿಯನ್ 2, ಶೂಶ್ರೂಷಕರು 2 ಸೇರಿ ಒಟ್ಟು 7 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಅನುಭವ ಹೊಂದಿರಬೇಕು ಎಂದು ಸ್ಪಷ್ಟಪಡಿಸಲಾಗಿದೆ. ಈ ಹುದ್ದೆಯು ಒಂದು ವರ್ಷ ಅವಧಿಗೆ ಅಥವಾ ಈ ಕಚೇರಿಯ ಮುಂದಿನ ಆದೇಶದವರಿಗೆ ಸೀಮಿತವಿರುತ್ತವೆ.

ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಹುದ್ದೆಯ ಕುರಿತು ತಮ್ಮ ಬಯೋಡಾಟಾದಲ್ಲಿ ಇತ್ತೀಚಿನ ಪಾಸ್‍ಪೋರ್ಟ್ ಅಳತೆಯ ಭಾವಚಿತ್ರವನ್ನು ಲಗತ್ತಿಸಿ ಅಗತ್ಯ ವಿದ್ಯಾರ್ಹತೆ, ಅನುಭವ, ಜಾತಿ ಪ್ರಮಾಣ ಪತ್ರ, ಮತ್ತು ಇತರೆ ದೃಢಿಕೃತ ನಕಲು ದಾಖಲಾತಿಗಳ ಪ್ರತಿಗಳ ಒಂದು ಸೆಟ್ ಹಾಗೂ ತಾವು ಸಲ್ಲಿಸುವ ದಾಖಲಾತಿಗಳ ಮೂಲ ದಾಖಲಾತಿಗಳನ್ನು ಸಲ್ಲಿಸಬೇಕು.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08392-274031ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಸರ್ವೇಕ್ಷಣಾ ಘಟಕದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಮರಿಯಂಬಿ ವಿ. ಕೆ. ತಿಳಿಸಿದ್ದಾರೆ. ಜೂನ್ 12ರಂದು ಬೆಳಗ್ಗೆ 10.30 ರಿಂದ ಸಂಜೆ 5 ರವರೆಗೆ ನಗರದ ಅನಂತಪುರ ರಸ್ತೆಯ ಜಿಲ್ಲಾ ಆಸ್ಪತ್ರೆ ಆವರಣದ ಜಿಲ್ಲಾ ಸರ್ವೇಕ್ಷಣಾ ಘಟಕದಲ್ಲಿ ನಡೆಯಲಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...