ಬೆಳಗಾವಿ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಗೋ ಹತ್ಯೆ ನಿಷೇಧ ಕಾನೂನನ್ನು ನಿಷೇಧ ಮಾಡ್ತೀವಿ ಅಂತ ಪ್ರಣಾಳಿಕೆಯಲ್ಲಿಯೇ ಹೊರಡಿಸಲಾಗಿತ್ತು. ಅದಕ್ಕೆ ತಕ್ಕಂತೆ ಈಗ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬಂದಿದೆ. ಗೋಹತ್ಯೆ ನಿಷೇಧ ಕಾಯ್ದೆ ನಿಷೇಧದ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿದ್ದಾರೆ. ಯಾವ ಪ್ರಾಣಿಯ ಹತ್ಯೆಯನ್ನು ನಾನೂ ಸಹಿಸುವುದಿಲ್ಲ ಎಂದಿದ್ದಾರೆ.
ಇನ್ನು ಗೃಹ ಜ್ಯೋತಿ ಯೋಜನೆ ಬಗ್ಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಯಾರೂ ಕೂಡ ಯಾವುದೇ ವದಂತಿಗೆ ಕಿವಿ ಕೊಡಬೇಡಿ. ಬೆಲೆ ಏರಿಕೆಯಿಂದಾಗಿ ತತ್ತರಿಸಿದ್ದ ನಿಮಗೆ ಆಶಾಕಿರಣವಾಗಿ ಬಂದಿದ್ದು ಕಾಂಗ್ರೆಸ್. ಕಾಂಗ್ರೆಸ್ ಕೊಟ್ಟಿರುವ ಭರವಸೆಯನ್ನು ಖಂಡಿತ ಈಡೇರಿಸುತ್ತದೆ. ಮನೆ ಮಾಲೀಕರು ಬಾಡಿಗೆದಾರರು ಆತಂಕಪಡುವ ಅಗತ್ಯವಿಲ್ಲ ಎಂದಿದ್ದಾರೆ.
ಇದೇ ವೇಳೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧ ಹರಿಹಾಯ್ದಿರುವ ಲಕ್ಷ್ಮೀ ಹೆಬ್ಬಾಳ್ಕರ್, ಚುನಾವಣೆಗೂ ಮುನ್ನ ನೀಡಿರುವ ಎಲ್ಲಾ ಭರವಸೆಗಳನ್ನು ನಾವೂ ಈಡೇರಿಸುತ್ತೇವೆ. ಬಸವರಾಜ್ ಬೊಮ್ಮಾಯಿ ಅವರು ಸಿಎಂ ಆಗಿದ್ದವರು. ಸಿದ್ದರಾಮಯ್ಯ ಅವರು ಈಗ ಸಿಎಂ ಆಗಿದ್ದಾರೆ. ಅಷ್ಟೇ ಅಲ್ಲ ಸಿದ್ದರಾಮಯ್ಯ ಅವರು ಈ ಮೊದಲು 15 ಬಜೆಟ್ ಮಂಡಿಸಿರುವ ಅನುಭವ ಹೊಂದಿದ್ದಾರೆ. ಗ್ಯಾರಂಟಿಗಳಿಗೆ ಎಲ್ಲಿಂದ ಹಣ ಹೊಂದಿಸಬೇಕು ಎಂಬುದು ಅವರಿಗೆ ಗೊತ್ತಿದೆ ಎಂದಿದ್ದಾರೆ.