ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ, ಕರ್ನಾಟಕದ ಚುನಾವಣೆಯಲ್ಲೂ ಸಾಕಷ್ಟು ಪ್ರಚಾರ ಮಾಡಿದ್ದರು. ನಿರೀಕ್ಷೆಯಂತೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಐದು ಗ್ಯಾರಂಟಿಗಳನ್ನು ಘೋಷಿಸಿದ್ದು ಕಾಂಗ್ರೆಸ್ ಗೆ ಸಾಕಷ್ಟು ಅಡ್ವಾಂಟೇಜ್ ಕೂಡ ಆಗಿತ್ತು. ಇದೀಗ ಪ್ರಿಯಾಂಕ ಗಾಂಧಿ ಮತ್ತೆ ಪ್ರಚಾರದಲ್ಲಿ ಮುಳುಗಿದ್ದಾರೆ.
ಮಧ್ಯಪ್ರದೇಶದ ಚುನಾವಣೆ ಈ ವರ್ಷದ ಕೊನೆಯಲ್ಲಿ ನಡೆಯಲಿದೆ. ಹೀಗಾಗಿ ಎಲ್ಲಾ ತಯಾರಿಗಳು ನಡೆಯುತ್ತಿದೆ. ಚುನಾವಣೆಗೂ ಬಹಳ ಸಮಯವಿರುವಾಗಲೇ ಕಾಂಗ್ರೆಸ್ ಪ್ರಚಾರ ಕಾರ್ಯ ಶುರು ಮಾಡಿದ್ದಾರೆ. ಮಧ್ಯಪ್ರದೇಶದಲ್ಲೂ ತಮ್ಮ ಪಕ್ಷ ಅಧಿಕಾರಕ್ಕೆ ಬರಬೇಕೆಂದು ಈಗಿಂದಾನೇ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ.
ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಪ್ರಿಯಾಂಕ ಗಾಂಧಿ, ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಮತ್ತು ಉದ್ಯೋಗಗಳನ್ನು ಒದಗಿಸುವಲ್ಲಿ ವಿಫಲವಾಗಿದೆ. ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷದ 220 ಆಡಳಿತದಲ್ಲಿ 225 ವಂಚನೆಗಳನ್ನು ಮಾಡಿದೆ ಎಂದಿದ್ದಾರೆ.