ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಚಿತ್ರದುರ್ಗ,(ಜೂನ್.13) : ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಹಾಗೂ ಬೆಂಗಳೂರು ಹೋಟಲ್ ಅಸೋಸಿಯೇಷನ್ ಸಂಯುಕ್ತಾಶ್ರಯದಲ್ಲಿ ಇದೇ ಜೂನ್ 15ರಂದು ಬೆಳಿಗ್ಗೆ 9.30ಕ್ಕೆ ಬೆಂಗಳೂರಿನಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಡೈರಿ ಸರ್ಕಲ್, 4ನೇ ಮಹಡಿಯ ಕಲ್ಯಾಣ ಸುರಕ್ಷಾ ಭವನದ ಕೆ.ಎಸ್.ಡಿ.ಸಿ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ.
ಸ್ಟೀವರ್ಡ್, ಕ್ಯಾಪ್ಟನ್, ಅಡುಗೆ ಸಹಾಯಕ, ಮಾಣಿ, ಮೇಲ್ವಿಚಾರಕ, ಬಾಣಸಿಗ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುವುದು. ಎಸ್‍ಎಸ್‍ಎಲ್‍ಸಿ, ಪಿಯುಸಿ, ಡಿಪ್ಲೋಮಾ ಪಾಸ್ ಅಥವಾ ಅನುತೀರ್ಣ ಅಥವಾ ಆಸಕ್ತರು ಯಾರಾದರೂ ಭಾಗವಹಿಸಬಹುದು.
ಉಚಿತ ವಸತಿ ಮತ್ತು ಊಟ ಸೌಲಭ್ಯವಿದೆ. ಇಎಸ್‍ಐ, ಪಿಎಫ್ ಒದಗಿಸಲಾಗುತ್ತದೆ. ರೂ.13,000/- ದಿಂದ 16,000/- ರೂ ಸಂಬಳ ನೀಡಲಾಗುವುದು. ಬೆಂಗಳೂರಿನಲ್ಲಿ ಕೆಲಸ ಮಾಡಲು ಸಿದ್ದವಿರುವ ವ್ಯಕ್ತಿಗಳನ್ನು ನೇಮಿಸಿಕೊಳ್ಳಲಾಗುವುದು.
ಹೆಚ್ಚಿನ ಮಾಹಿತಿಗಾಗಿ 9740947779, 9741817779 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಕೆ.ಗೋಪಾಲರೆಡ್ಡಿ ತಿಳಿಸಿದ್ದಾರೆ

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.







ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್