ಬೆಂಗಳೂರು: ಇತ್ತಿಚೆಗೆ ಬಿಬಿಎಂಪಿ ಅಧಿಕಾರಿಗಳ ಜೊತೆಗೆ ಡಿಸಿಎಂ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಸಭೆ ನಡೆದಿತ್ತು. ಈ ಸಭೆಯಲ್ಲಿ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲ್ ಅವರು ಕೂಡ ಈ ಸಭೆಯಲ್ಲಿ ಇದ್ದರು. ಇದು ವಿಪಕ್ಷಗಳಿಗೆ ಆಹಾರವಾಗಿದೆ. ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ನಾಯಕರು ಈ ಫೋಟೋ ಟ್ವೀಟ್ ಮಾಡುವ ಮೂಲಕ ಪ್ರಶ್ನೆ ಮಾಡುತ್ತಿದ್ದಾರೆ.
ಈ ವಿಚಾರ ಸಿಕ್ಕಾಪಟ್ಟೆ ವಿವಾದ ಸೃಷ್ಟಿಯಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಅವರು, ಸುರ್ಜೆವಾಲ ಇದ್ದಾಗ ಅಧಿಕೃತ ಸಭೆ ನಡೆದಿಲ್ಲ. ಶಾಸಕರ ಜೊತೆ ಸಭೆ ನಡೆಸಿದ್ದಾತೆ ಅಷ್ಟೆ. ಡಿಸಿಎಂ ಪಾಲ್ಗೊಂಡಿದ್ದ ಸಭೆ ಅದಾಗಿತ್ತು. ಚುನಾವಣೆ ಬಗ್ಗೆ ಚರ್ಚೆ ಮಾಡಲು ಆ ಸಭೆ ಕರೆಯಲಾಗಿತ್ತು.
ಸುರ್ಜೆವಾಲ್ ಅಧಿಕಾರಿಗಳ ಸಭೆ ಕರೆಯಲಾಗುತ್ತಾ ಹೇಳಿ. ಕುಮಾರಸ್ವಾಮಿ ಸುಮ್ಮನೆ ಆರೋಪ ಮಾಡುತ್ತಾರೆ. ಸುರ್ಜೆವಾಲ ಸರ್ಕಾರಿ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡಿರಲಿಲ್ಲ. ಅವರು ಶಾಂಘ್ರಿಲಾ ಹೊಟೇಲ್ ನಲ್ಲಿದ್ದಾಗ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಲು ಹೋಗಿದ್ದರು. ಅಲ್ಲಿ ಭೇಟಿಯಾಗಿರಬಹುದಷ್ಟೇ ಆದರೆ ಅಧಿಕಾರಿಗಳ ಸಭೆ ಕರೆದಿರಲಿಲ್ಲ ಎಂದಿದ್ದಾರೆ.