ಸದ್ಯಕ್ಕೆ ರಾಜ್ಯದಲ್ಲಿ ಪಠ್ಯ ಪುಸ್ತಕದ ವಿಚಾರ ಸಾಕಷ್ಟು ಸದ್ದು ಮಾಡ್ತಾ ಇದೆ. ಬಿಜೆಪಿ ಸರ್ಕಾರವಿದ್ದಾಗ ರೋಹಿತ್ ಚಕ್ರತೀರ್ಥ ಪರಿಷ್ಕರಣೆಯ ತಂಡದಲ್ಲಿದ್ದರು. ಹೀಗಾಗಿ ಆ ಟೀಂ ತೆಗೆದು ಹಾಕಿದ್ದ ಒಂದಷ್ಟು ಪಠ್ಯಗಳನ್ನು ಈಗ ಕಾಂಗ್ರೆಸ್ ಸರ್ಕಾರದಲ್ಲಿ ಮತ್ತೆ ಅಳವಡಿಸಲಾಗಿದೆ. ಈ ಬಗ್ಗೆ ರೋಹಿತ್ ಚಕ್ರತೀರ್ಥ ಮಾತನಾಡಿದ್ದು, ಸಾವರ್ಕರ್, ಹೆಡ್ಗೆವಾರ್ ಸ್ವಾತಂತ್ರ್ಯ ಹೋರಾಟಗಾರರಲ್ಲ ಎನ್ನುವುದಕ್ಕೆ ಸಾಧ್ಯವಿಲ್ಲ. ಅದಕ್ಕೆ ನನ್ನ ಬಳಿ ಸಾಕ್ಷ್ಯಗಳಿವೆ ಎಂದಿದ್ದಾರೆ.
ಅವರ ಪಾಠ ತೆಗೆಯಲು ಸರ್ಕಾರ ಮುಂದಾಗಿದೆ. ಯಾಕೆ ಅಂದ್ರೆ ಅದನ್ನ ಸರ್ಕಾರಕ್ಕೆ ನೀವೇ ಕೇಳಬೇಕು. ಇವರು ಸ್ವಾತಂತ್ರ್ಯ ಹೋರಾಟಗಾರರು ಅಲ್ಲ ಎನ್ನುವುದಕ್ಕೆ ಯಾರಿಗೂ ಸಾಧ್ಯವಿಲ್ಲ. ಅದಕ್ಕೆ ಸೂಕ್ತ ದಾಖಲೆ ಒದಗಿಸಲು ನಾನು ಸಿದ್ಧನಿದ್ದೇನೆ. ಮಕ್ಕಳಲ್ಲಿ ರಾಷ್ಟ್ರೀಯತೆಯನ್ನು ಬೆಳೆಸಲು ನಮ್ಮ ಪಠ್ಯ ಪುಸ್ತಕದಲ್ಲಿ ಈ ಇಬ್ಬರು ದಿಗ್ಗಜರ ಪಾಠ ಸೇರಿಸಿದ್ದೆವು. ಈಗ ಅದನ್ನು ಸರ್ಕಾರ ತೆಗೆಯಲು ಮುಂದಾಗಿದೆ.
ನನ್ನ ಅವಧಿಯ ಪಠ್ಯ ಪುಸ್ತಕ ಪರಿಷ್ಕರಣ ಸಮಿತಿಯಿಂದ ಸರ್ಕಾರಕ್ಕೆ ಶಿಪಾರಸ್ಸು ಮಾಡಿದ ಮೇಲೆ ಅದು ಸರ್ಕಾರದ ಸ್ವತ್ತು. ಅದನ್ನ ತೆಗೆಯಿರಿ ಇದನ್ನ ತೆಗೆಯಿರಿ ಅಥವಾ ಇದನ್ನ ಯಾಕೆ ತೆಗೆದಿರಿ ಎಂದು ಪ್ರಶ್ನಿಸಲು ನಮಗೆ ಸಂಬಂಧವಿಲ್ಲ ಎಂದಿದ್ದಾರೆ.