Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಬಿಜೆಪಿಯವರಿಗೆ ಮುಂದೆ ಯಾವ ಚುನಾವಣೆಯನ್ನೂ ಗೆಲ್ಲಲು ಸಾಧ್ಯವಿಲ್ಲ ಎಂಬ ನಡುಕ ಹುಟ್ಟಿದೆ : ಸಚಿವ ಈಶ್ವರ ಖಂಡ್ರೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ, (ಜೂ.16) : ಬಿಜೆಪಿಯವರಿಗೆ ಬೇರೆ ಕೆಲಸ ಇಲ್ಲ  ಹತಾಶರಾಗಿ ಜನರನ್ನು ಪ್ರಚೋದಿಸುವ ಕೆಲಸ ಮಾಡುತ್ತಿದ್ದಾರೆ ಅವರಿಗೆ ನಡುಕ ಹುಟ್ಟಿದೆ ಎಲ್ಲ ಭರವಸೆ ಈಡೇರಿಸುತ್ತೇವೆ. ಮುಂದೆ ಯಾವ ಚುನಾವಣೆ ಗೆಲ್ಲಲು ಸಾಧ್ಯ ಇಲ್ಲ ಎಂದು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ನಗರದ ಹೂರ ವಲಯದ ಬೋವಿ ಗುರು ಪೀಠಕ್ಕೆ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಧಮ್ ತಾಕತ್ತು ಇದ್ರೆ ಗ್ಯಾರಂಟಿಗಳನ್ನು ಯಾವುದೇ ಷರತ್ತು ಇಲ್ಲದೇ ಕೊಡಲಿ ಎಂಬ ಅಶೋಕರವರ ಹೇಳಿಕೆಗೆ ಈ ರೀತಿ ಪ್ರತಿಕ್ರಿಯಿಸಿದರು.

ಬಿಜೆಪಿಯವರು ಮತಾಂತರ ನಿಷೇಧ ಕಾಯ್ದೆಯನ್ನು ರದ್ದು ಪಡಿಸುವುದರ ಮೂಲಕ ಮಿನಿ ಪಾಕಿಸ್ಥಾನ ಮಾಡಲಿಕ್ಕೆ ಹೊರಟಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯಿಸಿ ಬಿಜೆಪಿಯವರು ಈ ರೀತಿ ಕೋಮು ದ್ವೇಷ ಸೃಷ್ಟಿಸಿ ಅಧಿಕಾರ ನಡೆಸಲು ಹೋದರು ಜನರು ಅದಕ್ಕೆ ತಕ್ಕಪಾಠ ಕಲಿಸಿದ್ದಾರೆ. ಸುಳ್ಳು ಹೇಳುವುದರಲ್ಲಿ ಬಿಜೆಪಿಯವರು ನಿಸ್ಸೀಮರು. ಇದನ್ನು ಜನ ಅರ್ಥ ಮಾಡಿಕೊಂಡು ಪಾಠ ಕಲಿಸಿದ್ದಾರೆ ಎಂದು ಸಚಿವರು ನುಡಿದರು.

ಅರಣ್ಯ ಸಂರಕ್ಷಣೆ, ಜನರ ಸಮಸ್ಯೆ ಆಲಿಸುವ ಎರಡೂ ಜವಾಬ್ದಾರಿ ಇದೆ. ಸಣ್ಣ ಸಮುದಾಯಗಳು, ಬಡವರು, ಅರಣ್ಯಗಳ ಪ್ರದೇಶಗಳಲ್ಲಿ ಗುಡಿಸಲು, ಜಮೀನು ಇವೆ. ಕೇಂದ್ರ ಹಾಗೂ ರಾಜ್ಯದಿಂದ ಜಂಟಿ ಸಮೀಕ್ಷೆ ಆಗಬೇಕು. ಕೆಲ ಜಿಲ್ಲೆಗಳಲ್ಲಿ ಪ್ರಸ್ತಾವನೆ ಹೋಗಿದೆ. ಕಾಲಾವಕಾಶ ಬೇಕಾಗುತ್ತದೆ. ಅರಣ್ಯ ಸಂರಕ್ಷಣೆ, ಅತಿಕ್ರಮಣ ತೆರವುಗೊಳಿಸುವ ಮೂಲಕ ಪರಿಸರ ಉಳಿಸುವ ಬಗ್ಗೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ.

ಈ ವರ್ಷ 5 ಕೋಟಿ ಸಸಿಗಳನ್ನು ನೆಡಬೇಕು. ರಾಜ್ಯದಲ್ಲಿ 21% ಅರಣ್ಯ ಇದೆ.ಅದನ್ನು 31% ಗೆ ತೆಗೆದುಕೊಂಡು ಹೋಗಬೇಕಿದೆ. ಕಾಯ್ದೆಯನ್ನು ಸಂಪೂರ್ಣವಾಗಿ ಅನುಷ್ಠಾನ ಮಾಡಿ ಪಶು ಸಂಕುಲ ಉಳಿಸುವ ಕೆಲಸ ಮಾಡುತ್ತಿದ್ದೇವೆ. ಶ್ರೀಗಂಧ ಬೆಳೆಯ ಎಲ್ಲಾ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಬಗೆಹರಿಸಿಕೊಡುತ್ತೇನೆ.

ಮೀಸಲು ಅರಣ್ಯ ಇರುವ ಕಡೆಗಳಲ್ಲಿ ಅರಣ್ಯ ಉಳಿಸಲು ಮುಂದಾಗಿದ್ದೇವೆ. ಬಡವರು, ಬುಡಕಟ್ಟು ಸಮುದಾಯಗಳು ನಾಲ್ಕೈದು ದಶಕಗಳಿಂದ ಅಲ್ಲೆ ವಾಸ ಮಾಡುತ್ತಿದ್ದರೆ ಸರಿಯಾದ ಸಮೀಕ್ಷೆ ಮಾಡದೆ ಜನ ಕಷ್ಟ ಅನುಭವಿಸುತ್ತಿದ್ದಾರೆ. ಅರಣ್ಯ ಮತ್ತು ಕಂದಾಯ ಇಲಾಖೆ ಜಂಟಿ ಸಮೀಕ್ಷೆ ಮಾಡಿ ಸರಿಯಾದ ವರದಿ ಕೊಟ್ಟಿಲ್ಲ. ಹೀಗಾಗಿ ಗಡುವು ನೀಡಿ ಸಮೀಕ್ಷೆ ಮಾಡಲು ಆದೇಶ ಮಾಡುತ್ತಿದ್ದೇನೆ ವರದಿ ತರಿಸಿ ನ್ಯಾಯ ಕೊಡುವ ಕೆಲಸ ಮಾಡುತ್ತೇವೆ.

ನಮ್ಮ ಕುಟುಂಬಕ್ಕೂ ಮಠಕ್ಕೂ ಅವಿನಾಭಾವ ಸಂಬಂಧ. ಗುರುಗಳ ಜೊತೆಗೆ ಇಪ್ಪತ್ತು ವರ್ಷಗಳಿಂದ ಸಂಪರ್ಕ ಇದೆ. ಶಕ್ತಿ ಯೋಜನೆಯಲ್ಲಿ ಖಾಸಗಿ ವಾಹನದವರಿಗೆ ಸಂಕಷ್ಟ ಎದುರಾಗಿದ್ದರೆ ಕರೆದು ಚರ್ಚಿಸುತ್ತೇವೆ. ತಾತ್ಕಾಲಿಕ ಹಿನ್ನಡೆಯಷ್ಟೇ. ಆನಂತರ ಸರಿಯಾಗುತ್ತದೆ ಎಂದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...