Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದೇಶದ ಅಭಿವೃದ್ಧಿಗೆ ಯುವಕರ ಪಾತ್ರ ಅತ್ಯವಶ್ಯಕ : ಕೇಂದ್ರ ಸಚಿವ ಎ.ನಾರಾಯಣಸ್ವಾಮಿ

Facebook
Twitter
Telegram
WhatsApp

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಜೂನ್.19) :  ಭಾರತ ದೇಶ ಶೇ.65 ಕ್ಕೂ ಹೆಚ್ಚಿನ ಪ್ರಮಾಣದಲ್ಲಿ ಯುವ ಜನತೆಯನ್ನು ಹೊಂದಿದ್ದು, ದೇಶದ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಬಹಳ ಅತ್ಯವಶ್ಯಕವಾಗಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವರಾದ ಎ.ನಾರಾಯಣಸ್ವಾಮಿ ಹೇಳಿದರು.

ನಗರದ ಸರ್ಕಾರಿ ಕಲಾ ಕಾಲೇಜಿನ ಡಾ.ಬಿ.ಆರ್.ಅಂಬೇಡ್ಕರ್ ಜ್ಞಾನ ಸಭಾಂಗಣದಲ್ಲಿ ಸೋಮವಾರ ಯುವ ಕಾರ್ಯಕ್ರಮ ಹಾಗೂ ಕ್ರೀಡಾ ಸಚಿವಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನೆಹರು ಯುವ ಕೇಂದ್ರದ ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಯುವ ಉತ್ಸವ-ಪಂಚ್ ಪ್ರಣ್ ಮತ್ತು ಇಂಡಿಯಾ@2047 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜಾಗತಿಕ ಮಟ್ಟದಲ್ಲಿ ರಾಷ್ಟ್ರ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಯುವ ಜನತೆಯ  ಜವಾಬ್ದಾರಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯುವ ಶಕ್ತಿಯಲ್ಲಿ ಅಡಗಿರುವ ಜ್ಞಾನಕ್ಕೆ ಯಾವ ರೀತಿಯ ಸಹಕಾರ ಕೊಡಬೇಕು. ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ಏನು? ಎಂಬುವುದರ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಯುವ ಉತ್ಸವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯುವ ಶಕ್ತಿಗೆ ನೀಡಿರುವ ಅನೇಕ ಯೋಜನೆಗಳ ಪರಿಚಯವಾಗಬೇಕು. ಯುವಕರು ಶಿಕ್ಷಣ ಪಡೆಯುವ ಕಾಲಘಟ್ಟದಲ್ಲಿ ತಮ್ಮ ಪ್ರತಿಭೆಗೆ ಅನುಗುಣವಾಗಿ ಸರ್ಕಾರದ ಸೌಲಭ್ಯ ಸದುಪಯೋಗಪಡಿಸಿಕೊಂಡು ಪ್ರತಿಭೆ ಅನಾವರಣಕ್ಕೆ ಅವಕಾಶ ಕಲ್ಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಬೇಕು ಎಂದರು.

ವಿದ್ಯಾರ್ಥಿಯು ತನ್ನ ಬದುಕಿನಲ್ಲಿ ಹಾಗೂ ತನ್ನಲ್ಲಿ ಬದಲಾವಣೆಯಾಗಬೇಕಾದರೆ, ತನ್ನ ಕುಟುಂಬದ ಪೋಷಕರ ಕನಸು ನನಸು ಮಾಡಬೇಕಾದರೆ, ರಾಷ್ಟ್ರಕ್ಕೆ ಸಮರ್ಪಣೆ ಮಾಡಬೇಕಾದರೆ  ಪರಿಶ್ರಮದ ಅವಶ್ಯಕತೆ ಇದೆ. ಇಂದಿನ ಯುವ ಜನತೆಯ ಧೋರಣೆ ಬಗ್ಗೆ ಬೇಸರ ವ್ಯಕ್ತಪಡಿಸಿದ ಸಚಿವರು, ಸಮುದಾಯ, ಕ್ಷೇತ್ರದ ಅಭಿವೃದ್ಧಿಗೆ ಯುವಕರ ಪ್ರತಿಭೆಗೆ ತಕ್ಕಂತೆ ಅವರು ಸ್ವಾಭಿಮಾನದ ಬದುಕು ಸಾಗಿಸಲು, ಸ್ವಾವಲಂಬಿಗಳಾಗಲು ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನೇಕ ಯೋಜನೆಗಳಿವೆ ಇಂತಹ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು.

ವಿದ್ಯಾರ್ಥಿಗಳಿಗೆ ಆಸಕ್ತಿ ಇರಬೇಕೇ ಹೊರತು ಆಕರ್ಷಣೆಗಳಲ್ಲ. ವಿದ್ಯಾರ್ಥಿಗಳಿಗೆ ಆಸಕ್ತಿಯ ಅವಶ್ಯಕತೆ ತುಂಬಾ ಇದೆ ಎಂದು ಹೇಳಿದರು.
ಯುವ ಶಕ್ತಿಯನ್ನು ವಿಶ್ವಕ್ಕೆ ಪರಿಚಯ ಮಾಡುವ ದಿಕ್ಕಿನಲ್ಲಿ ಯುವ ಉತ್ಸವ ನಡೆಯಲಿದೆ. ವಾರದ ಒಂದು ದಿನ ಜಿಲ್ಲೆಗೆ ಸಂಬಂಧಪಟ್ಟಂತೆ ಜಿಲ್ಲೆಯಲ್ಲಿ ಇರುವ ಸಂಪನ್ಮೂಲಗಳು, ಜಿಲ್ಲೆಯಲ್ಲಿ ಇರುವ ಕೊರತೆ, ಜಿಲ್ಲೆಗೆ ಅವಶ್ಯಕವಾಗಿ ಬೇಕಾಗಿರುವುದು ಏನು? ಎಂಬ ಇತ್ಯಾದಿ ವಿಷಯಗಳ ಕುರಿತು ರಾಜ್ಯ, ರಾಷ್ಟ್ರ ಹಾಗೂ ವಿಶ್ವದ ದಿಕ್ಕಿನಲ್ಲಿ ಚರ್ಚೆಗಳಾಗಬೇಕು.  ಈ ರೀತಿಯ ಚರ್ಚೆಗಳಾಗಿ, ಯುವಜನತೆ ಪಾಲ್ಗೊಂಡಲ್ಲಿ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸುಲಭವಾಗಿ ಉತ್ತೀರ್ಣರಾಗಬಹುದು ಎಂದು ಸಲಹೆ ನೀಡಿದರು.

ಪ್ಯಾನ್ ಇಂಡಿಯಾ ರೀತಿಯಲ್ಲಿ ಯುವ ಉತ್ಸವ: ಯುವ ಶಕ್ತಿಗೆ ಪ್ರೇರಣೆ ನೀಡುವ ನಿಟ್ಟಿನಲ್ಲಿ  ಯುವ ಉತ್ಸವ ಕಾರ್ಯಕ್ರಮವು ಯುವ ಜನತೆಗೆ ಬೆನ್ನು ತಟ್ಟುವ ಹಾಗೂ ಪ್ರೋತ್ಸಾಹಿಸುವ ಕಾರ್ಯಕ್ರಮವಾಗಿದ್ದು, ರಾಷ್ಟ್ರ ಮಟ್ಟದಲ್ಲಿ ಪ್ಯಾನ್ ಇಂಡಿಯಾ ರೀತಿಯಲ್ಲಿ ದೇಶಾದ್ಯಂತ ಯುವ ಜನೋತ್ಸವ ಕಾರ್ಯಕ್ರಮ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಹೇಳಿದರು.
ಯುವ ಉತ್ಸವ ಜ್ಞಾರ್ನಾಜನೆ ಮತ್ತು ಪ್ರತಿಭೆ ರೂಪಿಸುವ ದೊಡ್ಡ ಕಾರ್ಯಕ್ರಮವಾಗಿದೆ. 21ನೇ ಶತಮಾನದ ಅವಕಾಶ, ತಾಂತ್ರಿಕ ಜ್ಞಾನ, ಅವರ ಪ್ರತೆಭೆಗಳ ಬಗ್ಗೆ ಮುಕ್ತವಾಗಿ ಚರ್ಚೆ ಮಾಡುವ ಯಶಸ್ವಿ ಕಾರ್ಯಕ್ರಮವಾಗಿದ್ದು, ವಿಶ್ವದಲ್ಲಿ ರಾಷ್ಟ್ರ ಬೆಳೆಸುವುದಕ್ಕೆ ಹಾಗೂ ನಿರ್ಮಾಣ ಮಾಡುವುದಕ್ಕೆ ಯುವಕರ ಪಾತ್ರ ಬಹುಮುಖ್ಯವಾಗಿದೆ ಎಂದರು.

ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ಮಾತನಾಡಿ, ವಿದ್ಯಾರ್ಥಿಗಳು ಕೀಳರಿಮೆಯನ್ನು ತೊರೆದು, ದೊಡ್ಡ ದೊಡ್ಡ ಕನಸು ಕಾಣಬೇಕು. ಪ್ರತಿಭೆ ಎನ್ನುವುದು ದೈವದತ್ತವಾದುದಲ್ಲ. ಕಷ್ಟಪಟ್ಟು, ಶ್ರಮಪಟ್ಟು, ಅಭ್ಯಾಸದಿಂದ ಕರಗತ ಮಾಡಿಕೊಂಡಿರುವುದಾಗಿದೆ. ವ್ಯಕ್ತಿಯ ಚಿಂತನೆ, ಆಲೋಚನೆಗಳೇ ವ್ಯಕ್ತಿತ್ವವನ್ನೂ ರೂಪಿಸುತ್ತವೆ ಎಂದು ಹೇಳಿದರು.

ನೆಹರು ಯುವ ಕೇಂದ್ರದ ಜಿಲ್ಲಾ ಯುವಜನಾಧಿಕಾರಿ ಎನ್.ಸುಹಾಸ್ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 75 ವರ್ಷ ಪೂರ್ಣಗೊಂಡಿದೆ. ಈ ಹಿನ್ನಲೆಯಲ್ಲಿ ಅಜಾದಿ ಕಾ ಅಮೃತ ಮಹೋತ್ಸವ ಎಂದು ಆಚರಿಸಲಾಗುತ್ತಿದ್ದು, 2021ರ ಮಾರ್ಚ್ 11ರಂದು ಆಜಾದಿ ಕಾ ಅಮೃತ ಮಹೋತ್ಸವಕ್ಕೆ ಚಾಲನೆ ನೀಡಲಾಗಿತ್ತು, ಈ ಆಚರಣೆ ಬರುವ ಆಗಸ್ಟ್ 15ಕ್ಕೆ ಮುಕ್ತಾಯಗೊಳ್ಳಲಿದೆ.  ಇನ್ನೂ 25 ವರ್ಷಗಳ ನಂತರ ನಾವು 100ನೇ ಸ್ವಾತಂತ್ರ್ಯೋತ್ಸವ ಆಚರಿಸಲಿದ್ದೇವೆ. ಈ 25 ವರ್ಷಗಳ ಕಾಲಾವಧಿ ದೇಶದ ಅಭಿವೃದ್ದಿಗೆ ಬಹಳ ಮುಖ್ಯ. ಇಂದಿನ ಯುವ ಜನತೆ ದೇಶ ಕಟ್ಟುವ ಕಡೆ ಗಮನ ಸೆಳೆಯುವ ನಿಟ್ಟಿನಲ್ಲಿ ಯುವ ಜನತೆಯಲ್ಲಿ ದೇಶಭಕ್ತಿ, ದೇಶಾಭಿಮಾನ ಬೆಳೆಸುವ ಸಲುವಾಗಿ, ದೇಶವನ್ನು ಇತರೆ ಅಭಿವೃದ್ಧಿ ಹೊಂದಿದ ದೇಶಗಳ ಸ್ಥಾನಕ್ಕೆ ಕೊಂಡ್ಯೊಯ್ಯಲು ಪ್ರೇರೇಪಣೆ ನೀಡಲು ದೇಶದಾದ್ಯಂತ ಯುವ ಉತ್ಸವ ಕಾರ್ಯಕ್ರಮ ಆಯೋಜಿಸಲಾಗುತ್ತದೆ ಎಂದರು.

ನಮ್ಮ ದೇಶ ಯುವಶಕ್ತಿಯ ದೇಶ.  ಶೇ.65ರಷ್ಟು ಯುವ ಜನರು 35 ವರ್ಷ ವಯಸ್ಸಿನ ಒಳಗಿದ್ದಾರೆ. ಇದು ನಮ್ಮ ದೇಶದ ಶಕ್ತಿಯೂ ಹೌದು. ಯುವ ಜನರು ದುಶ್ಚಟಗಳ ತೊರೆದು ಉತ್ತಮ ಹವ್ಯಾಸ ಅಳವಡಿಸಿಕೊಳ್ಳಲು ಯುವ ಉತ್ಸವದ ಅಡಿಯಲ್ಲಿ ಚಿತ್ರಕಲೆ ಸ್ಪರ್ಧೆ, ಕವಿತೆ ರಚನೆ, ಮೊಬೈಲ್ ಛಾಯಾಚಿತ್ರ ಸ್ಪರ್ಧೆ, ಭಾಷಣ ಹಾಗೂ ಸಾಂಸ್ಕøತಿಕ ನೃತ್ಯ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಸರ್ಕಾರಿ ಕಲಾ ಕಾಲೇಜು ಪ್ರಾಂಶುಪಾಲ ಪ್ರೊ.ಬಿ.ಟಿ.ತಿಪ್ಪೇರುದ್ರಸ್ವಾಮಿ, ಪ್ರಾಧ್ಯಾಪಕರಾದ ಪ್ರೊ.ನಾಗರಾಜಪ್ಪ, ಪ್ರೊ.ಸುರೇಶ್, ಡಾ. ಎಸ್.ಆರ್.ಲೇಪಾಕ್ಷಿ ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಮಾಲೆ (ಜಾಂಡೀಸ್) ರೋಗ ಎಂದರೇನು ? ಇಲ್ಲಿದೆ ಉಪಯುಕ್ತ ಮಾಹಿತಿ….!

ಕಾಮಾಲೆ ಅಥವಾ ಜಾಂಡೀಸ್ ಎನ್ನುವುದು ಹತ್ತು ಹಲವು ರೋಗಗಳಲ್ಲಿ ಕಂಡು ಬರುವ ದೇಹ ಸ್ಥಿತಿಯಾಗಿರುತ್ತದೆ. ಹಲವಾರು ಕಾರಣಗಳಿಂದ ಕಾಮಾಲೆ ರೋಗ ಬರುವ ಸಾಧ್ಯತೆ ಇರುತ್ತದೆ. ಕಾಮಾಲೆ ಎಂಬ ಪದವು ಕಾಮ ಮತ್ತು ಲಾ ಎಂಬ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ: ಈ ರಾಶಿಯ ಕುಟುಂಬದಲ್ಲಿ ಕಲಹಗಳು ಆಗಲು ದಾಯಾದಿಗಳೇ ಕಾರಣ : ಈ ರಾಶಿಯ ಗಂಡ ಹೆಂಡತಿ ದೂರವಾಗಲು ಹಿತೈಷಿಗಳೇ ಕಾರಣ : ಶನಿವಾರ-ರಾಶಿ ಭವಿಷ್ಯ

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

error: Content is protected !!