Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಉಚಿತ ಬಸ್‍ಪಾಸ್ ಹಾಗೂ ಪಿಂಚಣಿ ಹೆಚ್ಚಳಕ್ಕಾಗಿ ಸರ್ಕಾರವನ್ನು ಒತ್ತಾಯಿಸುವುದಕ್ಕಾಗಿ ಅಂಗವಿಕಲರ ಕ್ಷೇಮಾಭಿವೃದ್ದಿ ಸಂಘ ತೀರ್ಮಾನ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ಜೂ.21) : ರಾಜ್ಯಾದ್ಯಂತ ಸರ್ಕಾರಿ ಬಸ್‍ನಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ಹಾಗೂ ಪಿಂಚಣಿ ಹೆಚ್ಚಳಕ್ಕೆ ಸರ್ಕಾರವನ್ನು ಒತ್ತಾಯಿಸುವುದಕ್ಕಾಗಿ ಮಂಜುನಾಥ ಅಂಗವಿಕಲರ ಕ್ಷೇಮಾಭಿವೃದ್ದಿ ಸಂಘದ ಸಭೆ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆಯಿತು.

ಅಂಗವಿಕಲರಿಂದ ವರ್ಷಕ್ಕೆ 660 ರೂ.ಗಳನ್ನು ಕಟ್ಟಿಸಿಕೊಂಡು ನೂರು ಕಿ.ಮೀ. ಒಳಗೆ ಸಂಚರಿಸಲು ಸರ್ಕಾರ ಅವಕಾಶ ನೀಡಿತ್ತು. ಈಗ ಉಚಿತವಾಗಿ ರಾಜ್ಯಾದ್ಯಂತ ಸಂಚರಿಸಲು ವ್ಯವಸ್ಥೆ ಕಲ್ಪಿಸಬೇಕು. ಅದೇ ರೀತಿ ಕೆಲವು ಅಂಗವಿಕಲರಿಗೆ ಮಾಸಿಕ ಎಂಟು ನೂರು ರೂ. ಇನ್ನು ಕೆಲವರಿಗೆ 1400 ರೂ. ಪಿಂಚಣಿ ಬರುತ್ತಿದೆ. ಅದನ್ನು ಮೂರು ಸಾವಿರ ರೂ.ಗಳಿಗೆ ಹೆಚ್ಚಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸುವುದಕ್ಕಾಗಿ ಜೂ. 27 ರಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸುವ ಕುರಿತು ಸಭೆಯಲ್ಲಿ ತೀರ್ಮಾನಿಸಲಾಯಿತೆಂದು ಸಂಘದ ಅಧ್ಯಕ್ಷ ಟಿ.ಬಿ.ಮಾರುತಿ ತಿಳಿಸಿದ್ದಾರೆ.

ಗೌರವಾಧ್ಯಕ್ಷ ಕೆ.ಹೆಚ್.ಜಯಪ್ರಕಾಶ್, ಕಾರ್ಯದರ್ಶಿ ಭಾನುಕಿರಣ, ಖಜಾಂಚಿ ಎನ್.ತಿಪ್ಪೇಸ್ವಾಮಿ, ಸದಸ್ಯರುಗಳಾದ ಆರ್.ತಿಪ್ಪೇಸ್ವಾಮಿ, ಟಿ.ಕೆ.ವೆಂಕಟೇಶ್, ಎಂ.ಎಸ್.ಪಾಪಯ್ಯ, ಪಿ.ಮಂಜುನಾಥ, ರಂಗಸ್ವಾಮಿ, ಕುಮಾರ್, ಆನಂದ, ಮಂಜುನಾಥ ಸಭೆಯಲ್ಲಿ ಉಪಸ್ಥಿತರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment