ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ 264 ಜನರಿಗೆ ಕೊರೊನಾ ಪಾಸಿಟಿವ್ ಆಗಿದೆ.
ಕಳೆದ 24 ಗಂಟೆಯಲ್ಲಿ 12745 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 47396 RTPCR ಟೆಸ್ಟ್ ಸೇರಿದಂತೆ ಒಟ್ಟು 60141 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದ. ಅದರಲ್ಲಿ 264 ಜನರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. 121 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.
ಉಳಿದಂತೆ ರಾಜ್ಯಾದ್ಯಂತ ಕಳೆದ 24 ಗಂಟೆಯಲ್ಲಿ 6 ಜನ ಸಾವನ್ನಪ್ಪಿದ್ದಾರೆ. ಕೊರೊನಾ ಜಯಿಸಿ 421 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ.