ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, (ಜೂ.22): ನನ್ನ ಕ್ಷೇತ್ರದಲ್ಲಿ ಕೆಲವು ಕಾರ್ಯಕರ್ತರು ಹಾಗೂ ಮುಖಂಡರುಗಳು ಒಳಗಿಂದೊಳಗೆ ಕಾಂಗ್ರೆಸ್ ಜೊತೆ ಕೈಜೋಡಿಸಿದ್ದರಿಂದ ನಾನು ಸೋಲು ಅನುಭವಿಸಬೇಕಾಯಿತು ಎಂದು ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು.
ತುರುವನೂರು ರಸ್ತೆಯಲ್ಲಿರುವ ರೆಡ್ಡಿ ಸಮುದಾಯ ಭವನದಲ್ಲಿ ಗುರುವಾರ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನವರ ನೇತೃತ್ವದಲ್ಲಿ ನಡೆದ ಬಿಜೆಪಿ ಸಂಘಟನಾತ್ಮಕ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಈ ಬಾರಿಯ ಚುನಾವಣೆಯಲ್ಲಿ ಅವರಿಗಾದ ಸೋಲಿನ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾರ್ಯಕರ್ತರು ಪಕ್ಷದ ಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುವಂತೆ ಮನವಿ ಮಾಡಿದರು.
ಪ್ರಧಾನಿ ಮೋದಿ ದೇಶಕ್ಕೆ ಎಷ್ಟು ಮುಖ್ಯವೋ ವಿಶ್ವಕ್ಕೆ ಅಷ್ಟೇ ಮುಖ್ಯ. ನೆಹರು, ಇಂದಿರಾಗಾಂಧಿ, ಮನಮೋಹನ್‍ಸಿಂಗ್ ವಿದೇಶಕ್ಕೆ ಹೋದರೆ ಭಿಕ್ಷುಕರಂತೆ ಕಾಣುತ್ತಿದ್ದರು. ಅದೇ ಈಗಿನ ನಮ್ಮ ಪ್ರಧಾನಿ ಹೊರದೇಶಗಳಿಗೆ ಹೋದರೆ ರತ್ನಗಂಬಳಿ ಹಾಸಿ ಸ್ವಾಗತಿಸುತ್ತಿದ್ದಾರೆ. ಪಾರ್ಲಿಮೆಂಟ್ ಚುನಾವಣೆ ಮೋದಿರವರ ಅಳಿವು-ಉಳಿವಿನ ಪ್ರಶ್ನೆಯಾಗಿರುವುದರಿಂದ ಕಾರ್ಯಕರ್ತರು ಪಕ್ಷದ ಪರವಾಗಿ ನಿಲ್ಲಬೇಕು ಎಂದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















