ಬೆಂಗಳೂರು: ಜೂನ್ 30ರಂದು ವಿಧಾನಪರಿಷತ್ ಚುನಾವಣೆ ನಡೆಯಬೇಕಿತ್ತು. ಆದರೆ ಕಾಂಗ್ರೆಸ್ ಪಕ್ಷದಿಂದ ಮೂವರು ಅಭ್ಯರ್ಥಿಗಳು ಮಾತ್ರ ಕಣದಲ್ಲಿದ್ದರು. ಹೀಗಾಗಿ ಮೂವರು ಅಭ್ಯರ್ಥಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಜಗದೀಶ್ ಶೆಟ್ಟರ್, ಎನ್ ಎಸ್ ಬೋಸರಾಜ್ ಹಾಗೂ ತಿಪ್ಪಣ್ಣ ಕಮಕನೂರ್ ಆಯ್ಕೆಯಾಗಿದ್ದಾರೆ. ಅವಿರೋಧವಾಗಿ ಆಯ್ಕೆಯಾದ ಫಲಿತಾಂಶವನ್ನು ಚುನಾವಣಾಧಿಕಾರಿ ವಿಶಾಲಾಕ್ಷಿ ಫಲಿತಾಂಶ ಪ್ರಕಟಿಸಿದ್ದಾರೆ.
ವಿಧಾನಪರಿಷತ್ ಚುನಾವಣೆಯ ಉಪಚುನಾವಣೆಗೆ ಬಿಜೆಪಿ ಯಾವುದೇ ಅಭ್ಯರ್ಥಿಯನ್ನು ಹಾಕಿರಲಿಲ್ಲ. ಪಕ್ಷೇತರವಾಗಿ ಸ್ಪರ್ಧಿಸಿದ್ದ ಅಭ್ಯರ್ಥಿಯ ನಾಮಪತ್ರ ತಿರಸ್ಕಾರಗೊಂಡಿತ್ತು. ಹೀಗಾಗಿ ಕಾಂಗ್ರೆಸ್ ನ ಮೂವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಲಕ್ಷ್ಮಣ ಸವದಿ, ಬಾಬುರಾವ್ ಚಿಂಚನಸೂರು, ಆರ್.ಶಂಕರ್ನಿಂದ ತೆರವಾಗಿದ್ದ ಎಂಎಲ್ಸಿ ಸ್ಥಾನಗಳಿಗೆ ಜೂನ್ 30ರಂದು ಉಪಚುನಾವಣೆ ನಿಗದಿಯಾಗಿತ್ತು.