ಸುದ್ದಿಒನ್, ಬೆಂಗಳೂರು, (ಜೂ.23): ಗೃಹ ಜ್ಯೋತಿ ನೋಂದಣಿಗೆ ಗ್ರಾಮ ಒನ್, ಕರ್ನಾಟಕ ಒನ್ ಹಾಗು ಬೆಂಗಳೂರು ಒನ್ ಕೇಂದ್ರಗಳಲ್ಲಿ ಸಾರ್ವಜನಿಕರಿಂದ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ದೂರುಗಳು ಕೇಳಿ ಬಂದಿದ್ದು, ಹಣ ವಸೂಲಿ ಮಾಡುವ ಕೇಂದ್ರಗಳ ವಿರುದ್ಧ ಕಠಿನ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಗೃಹ ಜ್ಯೋತಿ ನೋಂದಣಿ ಸಂಪೂರ್ಣ ಉಚಿತವಾಗಿದ್ದು, ಗ್ರಾಮ ಒನ್, ಕರ್ನಾಟಕ ಒನ್ ಹಾಗು ಬೆಂಗಳೂರು ಒನ್ ಕೇಂದ್ರಗಳಲ್ಲಿ ಸೇವಾ ಶುಲ್ಕ 20 ರೂ. ಮಾತ್ರ ವಿಧಿಸಲಾಗುತ್ತಿದೆ.

ಸೇವಾ ಶುಲ್ಕದ ಹೊರತಾಗಿ ಹೆಚ್ಚಿನ ಹಣ ಕೇಳಿದರೆ ಸಾರ್ವಜನಿಕರು 1912 ಸಹಾಯವಾಣಿಗೆ ಕರೆ ಮಾಡಿ ದೂರು ನೀಡಲು ಕೋರಲಾಗಿದೆ. ಹಣ ವಸೂಲಿ ಮಾಡುವ ಕೇಂದ್ರಗಳ ವಿರುದ್ಧ ಸರ್ಕಾರ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















